<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಜಯಮ್ಮ ನಿಧನ: ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಇನ್ನಿಲ್ಲ

ಜಯಮ್ಮ ನಿಧನ: ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಇನ್ನಿಲ್ಲ
Summary: Actor Vijay Raghavendra and Srimurali's mother Jayamma has passed away. Her passing has created an atmosphere of mourning in the Kannada film industry. It is a big shock for the family, fans and the film industry today, here is the complete information.

belagavi news :

Jayamma Passed Away: ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರುಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್. ಎ.ಚಿನ್ನೇಗೌಡರ ಪತ್ನಿ ಜಯಮ್ಮ ಅವರೆ ಇಂದು (ಜೂನ್ 16) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸ್ಯಾಂಡಲ್ ವುಡ್ ಕುಟುಂಬದ ಬೆನ್ನೆಲುಬಾಗಿ ನಿಂತು, ತಮ್ಮ ಪತಿ ಹಾಗೂ ಮಕ್ಕಳ ಸಿನಿ ಪಯಣಕ್ಕೆ ಅಪಾರ ಬೆಂಬಲ ನೀಡಿದ ಜಯಮ್ಮ ಅವರ ಅಗಲಿಕೆ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ಕುಟುಂಬದ ಹಿನ್ನೆಲೆ ಮತ್ತು ಬೆಂಬಲದಿಂದಲೇ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದ್ದರು.

ಜಯಮ್ಮ ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ಸ್ಯಾಂಡಲ್ ವುಡ್ ನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾದರು. ಕುಟುಂಬದ ಬೆನ್ನೆಲುಬಾಗಿ ನಿಂತಿದ್ದ ಅವರು, ಚಿನ್ನೇಗೌಡರ ಸಿನಿ ಪ್ರಯಾಣಕ್ಕೂ ಹಾಗೂ ಮಕ್ಕಳ ಚಿತ್ರರಂಗದ ಬೆಳವಣಿಗೆಗೂ ಅಪಾರ ಬೆಂಬಲ ನೀಡಿದ್ದರು.

ಜಯಮ್ಮ ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಯಾಂಡಲ್ ವುಡ್ ಗಣ್ಯರು, ಚಿತ್ರರಂಗದ ಕಲಾವಿದರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಜಯಮ್ಮ ಅವರ ಕೇವಲ ಒಂದು ಸ್ಟಾರ್ ಕುಟುಂಬದ ಗೃಹಿಣಿಯಾಗಿರಲಿಲ್ಲ. ಬದಲಿಗೆ ತಮ್ಮ ಪತಿ ಹಾಗೂ ಇಬ್ಬರು ಮಕ್ಕಳ ಚಿತ್ರರಂಗದ ಸುದೀರ್ಘ ಪಯಣಕ್ಕೆ ದೊಡ್ಡ ಬೆನ್ನೆಲುಬಾಗಿ ನಿಂತವರು. ಪತಿ ಎಸ್.ಎ. ಚಿನ್ನೇಗೌಡರು ಸ್ಯಾಂಡಲ್ ವುಡ್ ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡು ಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ನೈತಿಕ ಬೆಂಬಲ ಅಪಾರವಾಗಿತ್ತು. ಸದಾ ತೆರೆಯ ಮರೆಯಲ್ಲೇ ಇದ್ದು ಇಡೀ ಕುಟುಂಬವನ್ನು ಮುನ್ನಡೆಸಿದ ಶಕ್ತಿ ಅವರಾಗಿದ್ದರು.

ಬಾಲನಟರಾಗಿ ಚಿತ್ರರಂಗ ಪ್ರವೇಶಿಸಿ 'ಚಿನ್ನಾರಿ ಮುತ್ತ' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಹೆಮ್ಮೆ ವಿಜಯ್ ರಾಘವೇಂದ್ರ ಅವರದ್ದು, ನಂತರ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸ್ಯಾಂಡಲ್ ವುಡ್ ನ ಪ್ರಮುಖ ನಟರಾಗಿ ರಿಯಾಲಿಟಿ ಶೋಗಳ ನೆಚ್ಚಿನ ಜಡ್ಜ್ ಆಗಿ ಗುರುತಿಸಿಕೊಂಡಿದ್ದಾರೆ ಈಗಲೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ.

ಇನ್ನೊಂದೆಡೆ "ಚಂದ್ರ ಚಕೋರಿ" ಚಿತ್ರದ ಮೂಲಕ ಚಾಕೊಲೇಟ್ ಹೀರೋ ಆಗಿ ಎಂಟ್ರಿ ಕೊಟ್ಟ ಶ್ರೀಮುರಳಿ, ಆ ಬಳಿಕ 'ಉಗ್ರಂ' ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದರು. ಆ್ಯಕ್ಷನ್ ಪ್ಯಾಕ್ಡ್ ಸಿನಿಮಾಗಳ ಮೂಲಕ ರೋರಿಂಗ್ ಸ್ಟಾರ್ ಆಗಿ ಚಿತ್ರರಂಗದಲ್ಲಿ ಭದ್ರ ನೆಲೆ ಕಂಡುಕೊಂಡಿದ್ದಾರೆ.

ಈ ಇಬ್ಬರು ಸ್ಟಾರ್ ನಟರ ಯಶಸ್ಸಿನ ಹಿಂದೆ ಸದಾ ಶಾಂತವಾಗಿ, ಆದರೆ ಬಲವಾಗಿ ನಿಂತ ಶಕ್ತಿ ಜಯಮ್ಮ ಅವರಾಗಿದ್ದರು. ಅವರ ಪ್ರೀತಿ, ಪ್ರೋತ್ಸಾಹ ಮತ್ತು ಕುಟುಂಬದ ಏಕತೆ ಚಿತ್ರರಂಗದಲ್ಲಿ ಸದಾ ಸ್ಮರಣೀಯವಾಗಿರುತ್ತದೆ.

ಚಿತ್ರರಂಗದ ಖ್ಯಾತ ನಟ ರಾಜಕುಮಾರ್ ಕುಟುಂಬದ ಸಂಬಂಧಿಕರಾಗಿರುವ ಚಿನ್ನೇಗೌಡರ ಕುಟುಂಬದ ಬೆನ್ನೆಲಬು ಇಲ್ಲದಂತಾಗಿರುವುದು ಎಲ್ಲರಿಗೂ ನೋವನ್ನು ಉಂಟು ಮಾಡಿದೆ ಜಯಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

Also Read:

ಕಿರುತರೆ ನಟಿ ಸಂಚಿತಾ ಉಗಾಲೆ ಆತ್ಮಹತ್ಯೆ: ಸಾವಿಗೂ ಮುನ್ನ ನಗುತ್ತಲೇ ಕಾಣಿಸಿಕೊಂಡಿದ್ದ ರಿಲ್ಸ್ ವೈರಲ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online