Belagavi News :
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರದ ಮೊದಲ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 18ರ ಸಂಜೆ ನಾಲ್ಕು ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.
ರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ಇತರ ಬೆಲೆ ಬಾಳುವ ವಸ್ತುಗಳ ದುರುಪಯೋಗದ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಈ ಮಹತ್ವದ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ದೇವಾಲಯದ ಕಾಣಿಕೆ ಹಣ ಕಳ್ಳತನ ಆರೋಪದೇಶದಿಂದ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಕೆಯನ್ನು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಕ ತಂಡ ನಡೆಸುತ್ತಿದೆ. ಈ ಬೆಳವಣಿಗೆಯ ನಡುವೆ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಕಾರ್ಯ ಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಸಿಇಓ ಹುದ್ದೆಯನ್ನು ಸೃಷ್ಟಿಸುವ ಪ್ರಸ್ತಾವನೆಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಂದಾಗಿದೆ.
ಟ್ರಸ್ಟ್ ಅನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು ನಿಗದಿತ ಕೊನೆಯ ದಿನಾಂಕದ ಸಂಜೆ ನಾಲ್ಕು ಗಂಟೆಯವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದೆ.
ರಾಮ ಮಂದಿರದ ದೈನಂದಿನ ಆಡಳಿತ, ಹಣಕಾಸು ನಿರ್ವಹಣೆ, ಭಕ್ತರಿಗೆ ಒದಗಿಸುವ ಸೇವೆಗಳು ಹಾಗೂ ಆಡಳಿತಾತ್ಮಕ ಕಾರ್ಯಗಳನ್ನು ಸಮನ್ವಯಗೊಳಿಸುವಲ್ಲಿ ಸಿಇಒ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನೇಮಕಾತಿ ರಾಮಮಂದಿರ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.
ರಾಮ ಮಂದಿರ CEO ಗೆ ಮಹತ್ವದ ಜವಾಬ್ದಾರಿ - ಭಕ್ತರ ನಂಬಿಕೆ ಉಳಿಸಿ, ಪಾರದರ್ಶಕ ಆಡಳಿತ ನಡೆಸಬೇಕು ಎಂದ ನೃಪೇಂದ್ರ ಮಿಶ್ರಾ :
ರಾಮ ಮಂದಿರದ ಮೊದಲ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಕ ಪ್ರಕ್ರಿಯೆ ಆರಂಭವಾಗಿರುವ ನಡುವೆಯೇ , ದೇವಾಲಯದ ಆಡಳಿತ ಮತ್ತು ಭಕ್ತರ ವಿಶ್ವಾಸ ಕಾಪಾಡುವ ಬಗ್ಗೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಹತ್ವದ ಹೇಳಿಕೆ ನೀಡಿದ್ದಾರೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಮ ಮಂದಿರದ ಮೊದಲ ಸಿ ಈ ಓ ಅವರ ಅಧಿಕಾರ ಮತ್ತು ಕರ್ತವ್ಯಗಳನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗೆ ಮಾತ್ರ ಇದೆ " ಎಂದು ಸ್ಪಷ್ಟಪಡಿಸಿದರು.
ಮಿಶ್ರಾ ಅವರ ಪ್ರಕಾರ, ಸಿಇಒ ಮೇಲೆ ಭಕ್ತರು ಟ್ರಸ್ಟ್ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಮಹತ್ತರ ಜವಾಬ್ದಾರಿ ಇರುತ್ತದೆ. ದೇವಾಲಯದ ಆಡಳಿತವನ್ನು ಪಾರದರ್ಶಕವಾಗಿ, ಪರಿಣಾಮಕಾರಿಯಾಗಿ ಹಾಗೂ ಸುಗಮವಾಗಿ ನಡೆಸಿಕೊಂಡು ಹೋಗುವ ಹೊಣೆಗಾರಿಕೆಯು ಅವರದ್ದೇ ಆಗಿರಲಿದೆ.
ರಾಮ ಮಂದಿರದ ಕಾಣಿಕೆ ಹಣ ಮತ್ತು ಆಡಳಿತದ ಪಾರದರ್ಶಕತೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಮೊದಲ CEO ನೇಮಕವನ್ನು ದೇವಾಲಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.
ಪ್ರಸ್ತುತ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಿಇಒ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿ ಒಳಗೆ ಅರ್ಜಿ ಸಲ್ಲಿಸಬಹುದು.
ರಾಮ ಮಂದಿರ CEO ನೇಮಕಕ್ಕೆ ಉನ್ನತ ಮಟ್ಟದ ಸಮಿತಿ ರಚನೆ - ಆಯ್ಕೆ ಪ್ರಕ್ರಿಯೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಸೇರಿ ಮೂವರು ಸದಸ್ಯರು :
ಶ್ರೀರಾಮ ಜನ್ಮಭೂಮಿ ತೀತ ಕ್ಷೇತ್ರ ಟ್ರಸ್ಟ್ ರಾಮ ಮಂದಿರದ ಮೊದಲ ಕಾರ್ಯ ನಿರ್ವಹಣಾಧಿಕಾರಿ ನೇಮಕ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ಅರ್ಜಿಗಳ ಪರಿಶೀಲನೆ ಮತ್ತು ಸೂಕ್ತ ಅಭ್ಯರ್ಥಿಗಳ ಶಿಫಾರಸ್ಸಿಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಈ ಕುರಿತು ಮಾಹಿತಿ ನೀಡಿದ್ದು, CEO ಹುದ್ದೆಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ಸಮಿತಿ ಸೂಕ್ಷ್ಮವಾಗಿ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಶಿಫಾರಸು ಮಾಡಲಿದೆ ಎಂದು ತಿಳಿಸಿದ್ದಾರೆ.
ಸಮಿತಿಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ ನಿವೃತ್ತ ಲೆಫ್ಟಿನೆಂಟ್ ಜನರಲ್ ವಿಷ್ಣುಕಾಂತ್ ಚತುರ್ವೇದಿ ಹಾಗೂ ಎನ್ ಐ ಟಿ ರಾಯ್ ಪುರದ ಮಾಜಿ ಅಧ್ಯಕ್ಷ ಸುರೇಶ್ ಹವಾರೆ ಅವರನ್ನು ನೇಮಿಸಲಾಗಿದೆ.
" ನಾನು ಈ ಆಯ್ಕೆ ಸಮಿತಿಯ ಭಾಗವಾಗಿಲ್ಲ" ಎಂದು ನೃಪೇಂದ್ರ ಮಿಶ್ರಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ದೇವಾಲಯದ ನಿರ್ಮಾಣ ಸಮಿತಿಯ ಸದಸ್ಯರು ಟ್ರಸ್ಟ್ ನಲ್ಲಿ ಪದನಿಮಿತ್ತ ಸದಸ್ಯರಾಗಿದ್ದು, ಯಾವುದೇ ಮತದಾನದ ಹಕ್ಕು ಹೊಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜುಲೈ 22ರಂದು ನಡೆಯಲಿರುವ ಟ್ರಸ್ಟ್ ಸಭೆಯ ಕಾರ್ಯ ಸೂಚಿಯನ್ನು ಗಮನಿಸಿದ ಬಳಿಕ ಸಭೆಯಲ್ಲಿ ಭಾಗವಹಿಸುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಮಿಶ್ರಾ ಹೇಳಿದ್ದಾರೆ.
ರಾಮ ಮಂದಿರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ CEO ನೇಮಕ ಪ್ರಕ್ರಿಯೆ ಇದೀಗ ಮಹತ್ವದ ಹಂತ ತಲುಪಿದೆ.