Belagavi news:
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಭಾಷಣವನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆಯ ಮೂಲಕ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.
ಬೆಂಗಳೂರು ಮೇ 12: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಡುವೆ ವಾಕ್ಸಮರ ತೀವ್ರ ಗೊಂಡಿದೆ.
ಪ್ರಧಾನಿ ಮೋದಿ ಭಾಷಣವು 'ಸುಳ್ಳು ಮತ್ತು ದ್ವೇಷದಿಂದ ಕೂಡಿದೆ' ಎಂದು ಸಿದ್ದರಾಮಯ್ಯ ಟೀಕಿಸಿದರೆ, ಇದಕ್ಕೆ ಪ್ರತಿಯಾಗಿ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಪಟ್ಟಿ ಮಾಡುವ ಮೂಲಕ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಜಾಹೀರಾತುಗಳ ಹಿಂದೆ ಅಡಗಿರುವ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಈಗ ಬಯಲಾಗಿದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.
ಮುಖ್ಯಾಂಶಗಳು;
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು 'ಗ್ಯಾರಂಟಿ ಆಧಾರಿತ ಸಾಲದ ಬಲೆ'ಗೆ ತಳ್ಳಿದೆ: ಪ್ರಲ್ಹಾದ್ ಜೋಶಿ ಆರೋಪ.
ರಾಜ್ಯದ ಸಾಲದ ಹೊರೆ ಹೆಚ್ಚುತ್ತಿದೆ, ರಸ್ತೆಗಳು ಗುಂಡಿಮಯವಾಗಿವೆ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಯಾಗಿಲ್ಲ: ಕೇಂದ್ರ ಸಚಿವ ಟೀಕೆ.
ಸಿದ್ದರಾಮಯ್ಯ ಸರ್ಕಾರವು ಜನರ ಮೇಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಹೊರೆ ಹೊರಿಸುತ್ತಿದೆ: ಜೋಶಿ ಕಿಡಿ
ಕಾಂಗ್ರೆಸ್ ಆಡಳಿತಕ್ಕೆ ಜೋಶಿ ಚಾಟಿ:
ಸಿದ್ದರಾಮಯ್ಯ ಟೀಕೆಗಳಿಗೆ ತಿರುಗೇಟು ನೀಡಿದ ಪ್ರಲ್ಹಾದ್ ಜೋಶಿ,"ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಹದಗೆಡಿಸಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಬಗ್ಗೆ ಹರಿಸುವ ಬದಲು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಪಕ್ಷದೊಳಗಿನ ಅಧಿಕಾರ ಹಂಚಿಕೆ ಕಿತ್ತಾಟದಲ್ಲಿ ನಿರತರಾಗಿದ್ದಾರೆ' ಎಂದು ಕಿರಿಕಾರಿದ್ದಾರೆ.
ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿವೆ ಹಾಗೂ ಗುತ್ತಿಗೆದಾರರು ಬಿಲ್ ಪಾವತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತ ಹಳಿ ತಪ್ಪಿಸುವುದಕ್ಕೆ ಸ್ಪಷ್ಟ ಸಾಕ್ಷಿ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಾಲು ,ಇಂಧನ, ವಿದ್ಯುತ ಸೇರಿದಂತೆ ಸುಮಾರು 48 ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆಯಾಗಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದ್ದರು ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬಾರಿ ಹೊರೆ ಹಾಕುತ್ತಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ. ಇದು ಜನರಿಗೆ ಮಾಡಿದ ದ್ರೋಹ ಎಂದು ಜೋಶಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹಿತ ದೃಷ್ಟಿಯಿಂದ ನೀಡಿದ ಕರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಜವಾಬ್ದಾರಿಯಿಲ್ಲದ ನಾಯಕತ್ವವನ್ನು ತೋರಿಸುತ್ತದೆ ಎಂದು ಜೋಶಿ ಆಕ್ಷೇಪಿಸಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತದ ಆರ್ಥಿಕತೆ ಕುಸಿತ ಕಂಡಿದ್ದನ್ನು ನೆನಪಿಸಿದ ಜೋಶಿ, ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ 4ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ. ಬೇರೆಯವರನ್ನು ಪ್ರಶ್ನೆ ಮಾಡುವ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಒಳಗಿನ ಅಧಿಕಾರ ದಾಹ ಕಿತ್ತಾಟ ಮತ್ತು ಆಡಳಿತದ ಪಾರ್ಶ್ವವಾಯುವಿಗೆ ಉತ್ತರ ನೀಡಲಿ ಎಂದು ಅವರು ಸವಾಲು ಹಾಕಿದ್ದಾರೆ.
Also Read:
ಪ್ರಧಾನಿ ಮೋದಿ ಮಾತಿಗೆ ಖಾಸಗಿ ಶಾಲೆಗಳ ವಿರೋಧ: ಆನ್ ಲೈನ್ ಶಿಕ್ಷಣ ಮತ್ತೆ ಚರ್ಚೆಯಲ್ಲಿ