<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Sports

ಭಾರತೀಯ ಕ್ರಿಕೆಟ್ ಗೆ ಜೂನ್ 28 ಮರೆಯಲಾಗದ ಕಹಿ ದಿನ

ಭಾರತೀಯ ಕ್ರಿಕೆಟ್ ಗೆ ಜೂನ್ 28 ಮರೆಯಲಾಗದ ಕಹಿ ದಿನ
Summary: June 28th is considered a day in the history of Indian cricket that left unforgettable memories for fans. Some shocking events that took place on this day dealt a big blow to Indian cricket, here is the complete explanation of why it is called the 'worst day'.

BELAGAVI NEWS:

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ T - 20 ಸರಣಿಯಲ್ಲಿ ಭಾರತ ತಂಡ ಹೀನಾಯ ಪ್ರದರ್ಶನ ನೀಡಿದ್ದು, ಮೊದಲ ಪಂದ್ಯದಲ್ಲಿ 34 ರನ್ ಗಳಿಂದ ಹಾಗೂ ನಿರ್ಣಾಯಕ ಎರಡನೇ ಪಂದ್ಯದಲ್ಲಿ ಕೇವಲ ಒಂದು ರನ್ ಅಂತರದಿಂದ ಸೋತು 2-0 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿದೆ. ಈ ಫಲಿತಾಂಶ ಭಾರತೀಯ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಸೋಲಿನ ಬಳಿಕ ಟೀಮ್ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ಜೂನ್ 28 ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ಕರಾಳ ದಿನವಾಗಿ ದಾಖಲಾಗಿದೆ.ಐರ್ಲ್ಯಾಂಡ್ ವಿರುದ್ಧದ ಈ ಸೋಲು ಭಾರತೀಯ ಕ್ರಿಕೆಟ್ ಗೆ ದೊಡ್ಡ ಹಿನ್ನಡೆಯಾಗಿದ್ದು, ಅಭಿಮಾನಿಗಳಿಗೆ ನಿರಾಶೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಲಿಷ್ಠ ತಂಡವೆಂದು ಪರಿಗಣಿಸಲ್ಪಡುವ ಭಾರತ, ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ತಂಡದ ಆಟಗಾರರು ಮತ್ತು ತಂತ್ರಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸುನಿಲ್ ಗವಾಸ್ಕರ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಅಭಿಮಾನಿಗಳು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.

Sponsored

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 2-0 ಅಂತರದಿಂದ ಸೋಲು ಕಂಡಿರುವುದು ಭಾರತೀಯ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ತಮ್ಮ ಅಂಕಣದಲ್ಲಿ ಈ ಸೋಲನ್ನು "ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಿನಗಳಲ್ಲಿ ಒಂದು" ಎಂದು ಬಣ್ಣಿಸಿದ್ದಾರೆ.

"ಕ್ರಿಕೆಟ್ ನಲ್ಲಿ ಸೋಲು ಸಹಜ. ಆದರೆ ಯಾರ ವಿರುದ್ಧ ಸೋಲುತ್ತಿದ್ದೇವೆ ಎಂಬುವುದು ಅಷ್ಟೇ ಮುಖ್ಯ. ಐರ್ಲೆಂಡ್ ವಿರುದ್ಧ ಸರಣಿ ಸೋತಿರುವುದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ನಿರಾಶದಾಯಕ ಪ್ರದರ್ಶನಗಳಲ್ಲಿ ಒಂದಾಗಿದೆ. ತಂಡದಲ್ಲಿದ್ದ ಅತಿಯಾದ ಆತ್ಮವಿಶ್ವಾಸ ಮತ್ತು ಬೇಜವಾಬ್ದಾರಿತನವೇ ಈ ಫಲಿತಾಂಶಕ್ಕೆ ಪ್ರಮುಖ ಕಾರಣ" ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಬ್ಯಾಟರಗಳ ಪ್ರದರ್ಶನವನ್ನು ವಿಶ್ಲೇಷಿಸಿದ ಗವಾಸ್ಕರ್, ಐರ್ಲೆಂಡ್ ನ ಪಿಚ್ ಪರಿಸ್ಥಿತಿಗೆ ತಕ್ಕಂತೆ ಆಟವನ್ನು ಹೊಂದಿಸಿಕೊಳ್ಳುವ ಬದಲು ತಮ್ಮ ಹೆಸರು ಮತ್ತು ಖ್ಯಾತಿಗೆ ತಕ್ಕಂತೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಯತ್ನಿಸಿದ್ದೆ ದುಬಾರಿ ಆಯಿತು ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಆಟವಾಡದ ಕಾರಣ ಭಾರತ ಎರಡು ಪಂದ್ಯಗಳಲ್ಲಿ ಒತ್ತಡಕ್ಕೆ ಸಿಲುಕಿತು ಎಂದು ಅವರು ವಿಶ್ಲೇಷಿಸಿದ್ದಾರೆ.

ಇದೆ ವೇಳೆ, 1983ರ ವಿಶ್ವಕಪ್ ಫೈನಲ್ ನಲ್ಲಿ ಭಾರತವನ್ನು ಲಘುವಾಗಿ ಪರಿಗಣಿಸಿದ್ದ ವೆಸ್ಟ್ ಇಂಡೀಸ್ತಂಡಕ್ಕೆ ಎದುರಾದ ಸೋಲಿನ ಉದಾರಣೆಯನ್ನು ಉಲ್ಲೇಖಿಸಿದ ಗವಾಸ್ಕರ್, ಎದುರಾಳಿಯನ್ನು ಎಂದಿಗೂ ಕಡಿಮೆ ಅಂದಾಜು ಮಾಡಬಾರದು ಎಂಬ ಪಾಠವನ್ನು ನೆನಪಿಸಿದ್ದಾರೆ. ಐರ್ಲೆಂಡ್ ವಿರುದ್ಧದ ಈ ಸೋಲು ಭಾರತೀಯ ತಂಡಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಮುಂದಿನ ಸರಣಿಗಳಲ್ಲಿ ತಪ್ಪುಗಳನ್ನು ಸರಿಪಡಿಸುವ ಅಗತ್ಯವಿದೆಯೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Sponsored

ಐರ್ಲೆಂಡ್ ವಿರುದ್ಧದ T - 20 ಸರಣಿಯಲ್ಲಿ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಕುರಿತು ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಉತ್ತಮ ಫಾರ್ಮ್ ನಲ್ಲಿದ್ದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಅಂತರಾಷ್ಟ್ರೀಯ ಪದಾರ್ಪಣೆಗೆ ಅವಕಾಶ ನೀಡದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಗವಾಸ್ಕರ್ ಅವರ ಪ್ರಕಾರ,ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಸರಣಿಯು ಯುವ ಆಟಗಾರರನ್ನುಪರೀಕ್ಷಿಸಲು ಅತ್ಯುತ್ತಮ ಅವಕಾಶವಾಗಿತ್ತು."ಕಳೆದ ಒಂದು ತಿಂಗಳಿನಿಂದ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕು ಎಂದು ನಾನು ಹೇಳುತ್ತಿದ್ದೆ.ಆದರೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅವರನ್ನು ಆಡುವ ಬಳಗದಲ್ಲಿ ಸೇರಿಸದೆ ಇರುವುದು ಅಚ್ಚರಿಯಾಗಿದೆ.ಈ ನಿರ್ಧಾರದ ಹಿಂದಿನ ಕಾರಣ ಅರ್ಥವಾಗುತ್ತಿಲ್ಲ"ಎಂದು ಅವರು ಹೇಳಿದ್ದಾರೆ.

ಉತ್ತಮ ಲಯದಲ್ಲಿರುವ ಆಟಗಾರರನ್ನು ಬೆಂಚ್ ನಲ್ಲಿ ಕೂರಿಸುವುದಕ್ಕೆ ಯಾವುದೇ ಅರ್ಥವಿಲ್ಲ ಎಂದು ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ. ಫಾರ್ಮ್ ನಲ್ಲಿ ಇಲ್ಲದ ಬ್ಯಾಟರ್ ಗಳಿಗೆ ಅವಕಾಶ ನೀಡುವ ಬದಲು ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರರಿಗೆ ಆದ್ಯತೆ ನೀಡಬೇಕಿತ್ತು ಎಂದು ಅವರು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನ ಆಯ್ಕೆ ನೀತಿಯಲ್ಲಿ ಟೀಕಿಸಿದ್ದಾರೆ.

ಐರ್ಲೆಂಡ್ ವಿರುದ್ಧದ ಸರಣಿಯ ಸೋಲಿನ ಬಳಿಕ ತಂಡದ ಆಯ್ಕೆ,ಯುವ ಆಟಗಾರರಿಗೆ ಅವಕಾಶ ಮತ್ತು ಮ್ಯಾನೇಜ್ಮೆಂಟ್ ನ ತಂತ್ರಗಳ ಕುರಿತು ಕ್ರಿಕೆಟ್ ವಲಯದಲ್ಲಿ ಚರ್ಚೆ ಜೋರಾಗಿದ್ದು,ಗವಾಸ್ಕರ್ ಅವರ ಹೇಳಿಕೆಗಳು ಮತ್ತಷ್ಟು ಗಮನ ಸೆಳೆಯುತ್ತಿವೆ.

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online