BELAGAVI NEWS :
ಬೆಂಗಳೂರು ಜೂನ್ 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಒಳಗಿನ ಸಚಿವ ಸ್ಥಾನ ಅಕಾಂಕ್ಷಿಗಳು ಹಾಗೂ ಅಧಿಕಾರಾಸೆ ಹೊಂದಿರುವವರಿಗೆ ಸ್ಪಷ್ಟ ಮತ್ತು ಖಡಕ್ ಸಂದೇಶ ನೀಡಿದ್ದಾರೆ.
"ಯಾರಿಗೆ ಅಧಿಕಾರ ಮತ್ತು ಸ್ಥಾನ ಬೇಕೋ ಅವರು ಡಿ.ಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷವನ್ನು ಸದೃಢವಾಗಿ ಕಟ್ಟಬೇಕು ಎಂದು ಬಯಸುವವರು ನಮ್ಮ ಜೊತೆ ಬನ್ನಿ" ಎಂದು ಅವರು ಹೇಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಈ ಹೇಳಿಕೆ ಕಾಂಗ್ರೆಸ್ ಒಳಗಿನ ಚರ್ಚೆಗೆ ಹೊಸ ತಿರು ನೀಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಹರಿಪ್ರಸಾದ್ ಅವರು ಈ ಸಂದೇಶವನ್ನು ತಮ್ಮ ಅಧಿಕೃತ ಎಕ್ಸ್ (X) ಖಾತೆಯ ಮೂಲಕ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷ ಸಂಘಟನೆ ಆದ್ಯತೆ ನೀಡುವವರು ಮತ್ತು ಅಧಿಕಾರ ರಾಜಕೀಯಕ್ಕೆ ಹೊತ್ತು ನೀಡುವವರು ನಡುವಿನ ವ್ಯತ್ಯಾಸವನ್ನು ಸೂಚಿಸುವ ರೀತಿ ಯಲ್ಲಿ ಈ ಹೇಳಿಕೆ ಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಮತ್ತು ಒಳ ಸಂಘಟನೆ ಕುರಿತು ಚರ್ಚೆಗೆ ಮತ್ತಷ್ಟು ಇಂಧನ ನೀಡಿದೆ.
ಹೊಸದಾಗಿ ಕರ್ನಾಟಕ ಸಂದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರು ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದವರು ರಾಹುಲ್ ಗಾಂಧಿಯವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.
ಈ ಹುದ್ದೆ ಕೇವಲ ಸ್ಥಾನ ಮಾನವಲ್ಲ, ಇದು ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ದುರ್ಬಲ ವರ್ಗಗಳ ಸಬಲೀಕರಣದ ಸಂಕೇತ ಎಂದು ಹರಿಪ್ರಸಾದ್ ಹೇಳಿದ್ದಾರೆ. ಪಕ್ಷದ ಸಿದ್ಧಾಂತ ಮತ್ತು ಜನರ ಹಿತಕ್ಕೆ ಆದ್ಯತೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.
ಅಧಿಕಾರಕ್ಕಿಂತ ಸಂಘಟನೆಗೆ ಮಹತ್ವ ನೀಡಬೇಕು ಎಂದು ಸಂದೇಶದೊಂದಿಗೆ ಅವರು ಪಕ್ಷದ ನಾಯಕರಿಗೆ ಸ್ಪಷ್ಟ ದಿಕ್ಕು ಸೂಚಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ KPCC ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರು ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ನಾಯಕರಿಗೆ ಕಳಕಳಿಯ ಮನವಿ ಮಾಡಿದ್ದಾರೆ. ಸರ್ಕಾರದಲ್ಲಿ ಈಗಾಗಲೇ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವವರು ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಅವರು ತಿಳಿಸಿದ್ದಾರೆ.
"ನಾವೆಲ್ಲರೂ ಒಟ್ಟಾಗಿ ಸೇರಿ ರಾಹುಲ್ ಗಾಂಧಿಯವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನು ಸಮತೋಲನವಾಗಿ ಮುಂದುವರಿಸಬೇಕು," ಎಂದು ಅವರು ಹೇಳಿದ್ದಾರೆ. ತಮ್ಮ ಪೂರ್ವಜರ ಆಶೀರ್ವಾದದಿಂದ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ದೊರತಿದೆ ಎಂದು ಭಾವಪೂರ್ಣವಾಗಿ ಹೇಳಿದ ಹರಿಪ್ರಸಾದ್, ಸಾಮಾನ್ಯ ಕಾರ್ಯಕರ್ತರಿಗೆ ಯಾವುದೇ ತೊಂದರೆ ಬಂದರೂ ನಾನು ಸದಾ ಅವರ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಎಐಸಿಸಿ (AICC) ಹೈಕಮಾಂಡ್ ನಾಯಕರಿಗೆ ಧನ್ಯವಾದ ತಿಳಿಸಿ ಅವರು ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ಹೈಕಮಾಂಡ್ ನ ಅವರು ಈ ನಿರ್ಧಾರ ಕೇವಲ ವ್ಯಕ್ತಿಗೆ ನೀಡಿದ ಹುದ್ದೆಯಲ್ಲ, ಇದು ಕಾಂಗ್ರೆಸ್ ಪಕ್ಷ ಮೂಲ ಸಿದ್ದಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ದೊರೆತ ಜಯ ಎಂದು ಅವರು ಹೇಳಿದ್ದಾರೆ.
"ನನ್ನ ಜೀವನಪೂರ್ತಿ ಕಾಂಗ್ರೆಸ್ ತತ್ವಗಳಿಗಾಗಿ ಮೀಸಲಿಟ್ಟಿದ್ದೇನೆ. ನನಗೆ ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ," ಎಂದು ಬಿ.ಕೆ ಹರಿಪ್ರಸಾದ್ ತಮ್ಮ ಸಂದೇಶವನ್ನು ಸ್ಪಷ್ಟಪಡಿಸಿದ್ದಾರೆ ಪಕ್ಷದ ಸಂಘಟನೆ ಬಲಪಡಿಸುವುದೇ ನಮ್ಮ ಮೊದಲ ಆದ್ಯತೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ದ್ವೇಷದ ರಾಜಕಾರಣ ಮತ್ತು ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಧ್ರುವೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ನೇತೃತ್ವ ವಹಿಸುವುದು ದೊಡ್ಡ ಸವಾಲು ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಸಂವಿಧಾನ ವಿರೋಧ ಪ್ರವೃತ್ತಿಗಳು ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು ಹಾಗೂ ಯುವಜನರ ಅಶೋತ್ತರಗಳನ್ನು ತಾನು ಚೆನ್ನಾಗಿ ಅರಿತಿರುವುದಾಗಿ ಅವರು ಹೇಳಿದ್ದಾರೆ. "ಸಂವಿಧಾನವೇ ತಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ" ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ತಿಳಿಸಿದ್ದಾರೆ.
ಈ ಸವಾಲನ್ನು ಪಕ್ಷದ ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಎದುರಿಸುವ ವಿಶ್ವಾಸ ವ್ಯಕ್ತಪಡಿಸಿರುವ ಹರಿಪ್ರಸಾದ್, ಎಲ್ಲಾ ನಾಯಕರು ಹಾಗೂ ಪ್ರಜಾಪ್ರಭುತ್ವವಾದಿಗಳು ತಮ್ಮೊಂದಿಗೆ ಕೈಜೋಡಿಸಲಿದ್ದಾರೆ ಎಂದು ನಂಬಿಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮುಂದುವರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Also Read:
ODI ಸರಣಿ ಆರಂಭಕ್ಕೂ ಮೊದಲೇ ಭಾರತಕ್ಕೆ ಸಿಡಿಲಾಘಾತ; ಅಭಿಮಾನಿಗಳಿಗೆ ಬೇಸರದ ಸುದ್ದಿ