belagvi news :
ನವದೆಹಲಿ, ಜೂನ್ 2: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಯಶಸ್ವಿಯಾಗಿ ನೆರವೇರಿದರೂ ಇದೀಗ ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಂತ್ರಿಮಂಡಳಿಕ್ಕೆ ಯಾರನ್ನು ಸೇರಿಸಬೇಕು ಮತ್ತು ಯಾರನ್ನು ಕೈಬಿಡಬೇಕು ಎಂಬ ವಿಚಾರವೇ ವರಿಷ್ಠರಿಗೆ ಪ್ರಮುಖ ತಲೆನೋವುವಾಗಿ ಮುಂದುವರೆದಿದೆ.
ಈ ಸಂಬಂಧ ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಮ್ಯಾರಥಾನ್ ಮಟ್ಟದ ಸಭೆಗಳು ನಡೆಯುತ್ತಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ತೀವ್ರ ಕಸರತ್ತು ನಡೆಸುತ್ತಿದೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕ ಸಚಿವರ ಪಟ್ಟಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಸಲ್ಲಿಸಿರುವುದು ತಿಳಿದುಬಂದಿದೆ. ಇದ್ದಾರೆ ಎನ್ನಲಾಗಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಈ ಪಟ್ಟಿಗಳನ್ನು ಪರಿಶೀಲಿಸಿ ಸಂಬಂಧಿತ ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಜಾತಿ ಸಮೀಕರಣ, ಹಿರಿಯರಿಗೆ ಅವಕಾಶ ಮತ್ತು ಹೊಸ ಮುಖಗಳಿಗೆ ಸ್ಥಾನ ನೀಡುವ ವಿಚಾರದಲ್ಲಿ ಸಮತೋಲನ ಸಾಧಿಸುವುದು ಹೈಕಮಾಂಡಗೆ ಸವಾಲಾಗಿದ್ದು, ಸಣ್ಣದೊಂದು ಎಡವಟ್ಟಾದರೂ ರಾಜಕೀಯ ಪರಿಣಾಮ ಉಂಟಾಗಬಹುದು ಎಂಬ ಆತಂಕವು ವರಿಷ್ಠರಲ್ಲಿ ವ್ಯಕ್ತವಾಗಿದೆ.
ಕರ್ನಾಟಕ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ಸವಾಲು
ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆ ಪ್ರಕ್ರಿಯೆ ಕಾಂಗ್ರೆಸ್ ಹೈಕಮಾಂಡ್ ಗೆ ಪ್ರಮುಖ ಸವಾಲ್ ಆಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕವಾಗಿ ಸಚಿವರ ಪಟ್ಟಿಗಳನ್ನು ಹೈಕಮಾಂಡ್ ಗೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮ್ಯಾರಥಾನ್ ಮಟ್ಟದ ಸಭೆಗಳು ನಡೆಯುತ್ತಿವೆ.
ಸಂಪುಟದಲ್ಲಿ ಜಾತಿ ಸಮೀಕರಣ ಹಿರಿಯ ನಾಯಕರಿಗೆ ಸ್ಥಾನ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡುವ ವಿಚಾರಗಳ ಕುರಿತು ಹೈಕಮಾಂಡ್ ಗಂಭೀರವಾಗಿ ಚರ್ಚೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ಮೊದಲ ಹಂತದ ಸಚಿವರ ಪಟ್ಟಿ ಇದೆ ಅಂತಿಮ ವಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಮುಖ್ಯಾಂಶಗಳು:
ಸಚಿವರ ಪಟ್ಟಿ ಅಂತಿಮಗೊಳಿಸಲು ದೆಹಲಿಯಲ್ಲಿ ಸರಣಿ ಸಭೆಗಳು.
ಸುಗಮ ಅಧಿಕಾರ ಹಂಚಿಕೆಯ ನಂತರ ಹೈಕಮಾಂಡ್ ಎದುರು ಮತ್ತೊಂದು ಸವಾಲು.
ಸಚಿವರ ಪಟ್ಟಿ ಬಹುತೇಕ ಇಂದೇ ಫೈನಲ್, ನಾಳೆ ಲೋಕಭವನಕ್ಕೆ ರವಾನೆ.
ಕರ್ನಾಟಕ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ನಿವಾಸಕ್ಕೆ ಪ್ರತ್ಯೇಕವಾಗಿ ಕರೆಸಿ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಿರ್ಣಾಯಕ ಸಭೆ ನಿಗದಿಯಾಗಿರುವ ಮಾಹಿತಿ ಹೊರಬಂದಿದೆ.
ಈ ಸಭೆಯಲ್ಲಿ ಮೊದಲ ಹಂತದ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಚಿವ ಸಂಪುಟ ರಚನೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಹತ್ತಿರವಾಗುತ್ತಿದೆ ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.
ಸಂಭಾವ್ಯ ಸಚಿವರ ಪಟ್ಟಿ ಮತ್ತು ಜಾತಿ ಸಮೀಕರಣ:
ಸಂಭಾವ್ಯ ಸಚಿವರ ಪಟ್ಟಿಯ ಪ್ರಕಾರ, ಹತ್ತರಿಂದ ಹನ್ನೆರಡು ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈ ಸೇರುವ ಸಂಭಾವ್ಯ ಪಟ್ಟಿಯಲ್ಲಿ ಕೆಲವು ಪ್ರಮುಖ ಹೆಸರುಗಳು ಇಲ್ಲಿವೆ.
ಸತೀಶ್ ಜಾರಕಿಹೊಳಿ: ಬೆಳಗಾವಿ ಭಾಗದ ಪ್ರಭಾವಿ ನಾಯಕ ಹಾಗೂ ಹಿಂದುಳಿದ ವರ್ಗದ ಮುಖಂಡ.
ಡಾ.ಜಿ. ಪರಮೇಶ್ವರ್: ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ ಹಿರಿಯ ದಲಿತ ನಾಯಕ.
ಯು.ಟಿ. ಖಾದರ್: ಮಾಜಿ ಸ್ಪೀಕರ್ ಆಗಿ ಉತ್ತಮ ಕೆಲಸ ಮಾಡಿದವರು, ಮಾಜಿ ಸಚಿವರು.
ಪ್ರಿಯಾಂಕ್ ಖರ್ಗೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ.
ರಾಮಲಿಂಗ ರೆಡ್ಡಿ: ಬೆಂಗಳೂರಿನ ಹಿರಿಯ ನಾಯಕ.
ಎಂ.ಬಿ. ಪಾಟೀಲ್: ಲಿಂಗಾಯತ ಸಮುದಾಯದ ಪ್ರಮುಖ ನಾಯಕ.
ಕೃಷ್ಣ ಬೈರೇಗೌಡ: ಕಂದಾಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಕೆ.ಜೆ. ಜಾರ್ಜ್: ಕಾಂಗ್ರೆಸ್ ನ ಹಿರಿಯ ಸಚಿವರು, ಹೈಕಮಾಂಡ್ ನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಈಶ್ವರ್ ಖಂಡ್ರೆ: ಲಿಂಗಾಯತ ಸಮುದಾಯದ ಮತ್ತೊಬ್ಬ ಪ್ರಮುಖ ನಾಯಕ.
ಜಮೀರ್ ಅಹಮದ್ ಖಾನ್: ಮುಸ್ಲಿಂ ಸಮುದಾಯದ ಕೋಟಾದಿಂದ ಪ್ರಮುಖ ಹೆಸರು.
ಸಚಿವ ಸಂಪುಟ ರಚನೆಯಲ್ಲಿ ಜಾತಿ ಸಮಿಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಎಸ್ಸಿ, ಎಸ್ಟಿ, ಒಕ್ಕಲಿಗ, ಲಿಂಗಾಯತ, ಅಲ್ಪಸಂಖ್ಯಾತರು (ಮುಸ್ಲಿಂ ಸೇರಿದಂತೆ) ಸೇರಿದಂತೆ ಎಲ್ಲ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೀಡಿರುವ ಪ್ರತ್ಯೇಕ ಪಟ್ಟಿಗಳಲ್ಲಿ ಕೆಲಸ ಸಾಮಾನ್ಯ ಹೆಸರುಗಳು ಇರಬಹುದಾಗಿದ್ದರು, ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಲು ಇಬ್ಬರು ಶ್ರಮಿಸುತ್ತಿದ್ದಾರೆ. ಒಟ್ಟಿನಲ್ಲಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆಗೆ ಜತೆಗಿನ ಸಭೆಯ ಬಳಿಕ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಬಂಡಾಯ ಅಥವಾ ಗೊಂದಲಗಳನ್ನು ತಪ್ಪಿಸಲು ಪಟ್ಟಿಯನ್ನು ನಾಳೆ (ಜೂನ್ 3) ಬೆಳಗ್ಗೆ ಲೋಕಭವನಕ್ಕೆ ರವಾನಿಸುವ ಸಾಧ್ಯತೆಯಿದೆ.
Also Read:
ಬೆಂಗಳೂರಿನ ಗ್ರಾಹಕರಿಗೆ ಸಿಹಿ ಸುದ್ದಿ: ಹೋಟೆಲ್ ಗಳಲ್ಲಿ ಬೆಲೆ ಏರಿಕೆ ಇಲ್ಲ