<?= $pageTitle ?>
Logo
ಮುಖಪುಟ ಓದುವುದು ಕೇಳು
Corporate

Karnataka Police Requirement 2026: 3991 Constable ಹುದ್ದೆಗಳ ನೇಮಕಾತಿ, ಅರ್ಜಿ ಪ್ರಕ್ರಿಯೆ ಶೀಘ್ರದಲ್ಲೇ

Karnataka Police Requirement 2026: 3991 Constable ಹುದ್ದೆಗಳ ನೇಮಕಾತಿ, ಅರ್ಜಿ ಪ್ರಕ್ರಿಯೆ ಶೀಘ್ರದಲ್ಲೇ
Summary: Karnataka Police Requirement 2026: The recruitment process for filling 3991 Constable posts in the Karnataka Police Department will start soon. This is a big opportunity for candidates waiting for government jobs. Know the complete information related to eligibility, age limit, selection process, salary, application submission date and official notification here. Read this article to get all the updates on Karnataka Police Constable Requirement 2026.

Balagavi News:

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಭರ್ಜರಿ ಅವಕಾಶ ದೊರೆತಿದೆ. ಬಹು ನಿರೀಕ್ಷಿತ 3991 ಸಿವಿಲ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದ್ದು. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ.

ಒಟ್ಟು 3991 ಹುದ್ದೆಗಳ ಭರ್ತಿ:

ರಾಜ್ಯದ ವಿವಿಧ ಜಿಲ್ಲಾ , ನಗರ ಹಾಗೂ ಪೊಲೀಸ್ ಘಟಕಗಳಲ್ಲಿ ಖಾಲಿ ಇರುವ 3991 ಸಿವಿಲ್ ಕಾನ್ಸ್ ಟೇಬಲ್ ಸುದ್ದಿಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ 596 ಹುದ್ದೆಗಳು ಮೀಸಲಿರಿಸಲಾಗಿದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳ ಜೊತೆಗೆ ಸೇವಾನಿರತ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಿದ್ಯಾರ್ಹತೆ ಏನು?

ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ (12ನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ವಿವರ:

ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18ವರ್ಷ ಆಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು :33 ವರ್ಷ

ಎಸ್ ಸಿ, ಎಸ್ ಟಿ, 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 35 ವರ್ಷ

ರಾಜ್ಯದ ಅರಣ್ಯ ಪ್ರದೇಶಗಳಿಲ್ಲಿ ವಾಸಿಸುವ ಬುಡಕಟ್ಟು ಅಭ್ಯರ್ಥಿಗಳಿಗೆ: 38 ವರ್ಷ

ವೇತನ ಎಷ್ಟು?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹37,500 ರಿಂದ ₹76,100 ವರೆಗೆ ವೇತನ ನೀಡಲಾಗುತ್ತದೆ.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ:

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ನೇಮಕಾತಿ ಪ್ರಕ್ರಿಯೆ, ಪರೀಕ್ಷೆ ದಿನಾಂಕ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಬಹುದು.

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಭರ್ಜರಿ ಅವಕಾಶ ಲಭಿಸಿದೆ. ರಾಜ್ಯದ ವಿವಿಧ ಜಿಲ್ಲಾ , ನಗರ ಹಾಗೂ ಪೊಲೀಸ್ ಘಟಕಗಳಲ್ಲಿ ಇಲಾಖೆ ಇರುವ 3991 ಸಿವಿಲ್ ಕಾನ್ಸ್ ಟೇಬಲ್ ಬುದ್ಧಿಗಳ ಭಾರತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು. ಜೂನ್ 8ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿದ್ದು . ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಸೇರಿದಂತೆ ಸೇವಾನಿರತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

3991 ಹುದ್ದೆಗಳ ಭರ್ತಿ:

ಒಟ್ಟು 3991 ಸಿವಿಲ್ ಕಾನ್ಸ್ ಟೇಬಲ್ ಹುದ್ದೆಗಳು ಖಾಲಿ ಇದ್ದು, ಈ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ:

ಅಭ್ಯರ್ಥಿಗಳು ಪಿಯುಸಿ (12 ನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸು: 18 ವರ್ಷ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 33 ವರ್ಷ

ಎಸ್ ಸಿ, ಎಸ್ ಟಿ, ಪ್ರವರ್ಗ 1, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ: 35 ವರ್ಷ

ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳಿಗೆ: 38 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯವಾಗಿ ವರ್ಗ ಹಾಗೂ 2ಎ, 2ಬಿ, 3ಎ, ಅಭ್ಯರ್ಥಿಗಳು: ₹ 750

ಎಸ್ ಸಿ, ಎಸ್ ಟಿ ಹಾಗೂ ಇತರೆ ಮೀಸಲು ವರ್ಗದ ಅಭ್ಯರ್ಥಿಗಳು: ₹ 500

ಆಯ್ಕೆ ಪ್ರಕ್ರಿಯೆ ಹೇಗೆ ?

ಅಭ್ಯರ್ಥಿಗಳ ಆಯ್ಕೆಗಾಗಿ ಓ ಎಂ ಆರ್ (OMR) ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ 1/4 ಅಂಕ ಋಣಾತ್ಮಕ ಮೌಲ್ಯಮಾಪನ (Negative Marking) ಇರಲಿದೆ.

ನಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ದೇಹದಾರ್ಡ್ಯ ತೆ ಮತ್ತು ಸಹಿಷ್ಣುತೆ ಪರೀಕ್ಷೆ (PET/PST) ಎದುರಿಸಬೇಕಾಗುತ್ತದೆ. ದೈಹಿಕ ಅರ್ಹತೆಗಳ ಕುರಿತು ಸಂಪೂರ್ಣ ಮಾಹಿತಿ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ :

ಅರ್ಜಿ ಆರಂಭ: ಜೂನ್ 8, 2026

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 7, 2026

ಹೆಚ್ಚಿನ ಮಾಹಿತಿಗೆ:

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರ ಮಾಹಿತಿಗಾಗಿ ಕರ್ನಾಟಕ ಪೋಲೀಸ ನೇಮಕಾತಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಗಳಿಗೆ ಭೇಟಿ ನಡೆಯಬಹುದು.

ಈ ನೇಮಕಾತಿಯು ಪಿಯುಸಿ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಅತ್ಯುತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳಿತು.

Also Read:

ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಳ ! ಮೀನುಗಾರರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online