<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

Karnataka Politics: ನಾಯಕತ್ವ ಗೊಂದಲ ಬಗೆಹರಿಸಲು ರಾಜಣ್ಣ ಒತ್ತಾಯ

Karnataka Politics: ನಾಯಕತ್ವ ಗೊಂದಲ ಬಗೆಹರಿಸಲು ರಾಜಣ್ಣ ಒತ್ತಾಯ
Summary: Rajanna has opined that it would be better if the high command quickly resolves the confusion over the leadership change.

belagavi news :

ಮೈಸೂರು: ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ಸಂಬಂಧ ಉಂಟಾಗಿರುವ ಗೊಂದಲವನ್ನು ಹೈಕಮಾಂಡ್ ಶೀಘ್ರವಾಗಿ ಬಗೆಹರಿಸಿದರೆ ಸರ್ಕಾರ ಹಾಗೂ ಪಕ್ಷ ಎರಡಕ್ಕೂ ಒಳ್ಳೆಯದು ಎಂದು ಮಾಜಿ ಸಚಿವ ರಾಜಣ್ಣ ಮೈಸೂರಿನಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡಿದವರು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಏನು ನಿರ್ಧರಿಸುತ್ತದೋ ಅದನ್ನೇ ಅನುಸರಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಹೀಗಾಗಿ ರಾಜ್ಯದಲ್ಲಿನ ಗೊಂದಲವನ್ನು ಹೈಕಮಾಂಡ್ ಬೇಗ ಪರಿಹರಿಸಬೇಕು, ಇಲ್ಲದಿದ್ದರೆ ಸರಕಾರ ಮತ್ತು ಪಕ್ಷದ ಕಾರ್ಯ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾದ್ಯತೆ ಇದೆ ಎಂದು ರಾಜನ ಎಚ್ಚರಿಸಿದರು. ಈ ವಿಷಯವನ್ನು ಹೈಕಮಾಂಡ್ ಭೇಟಿವೇಳೆ ಖುದ್ದಾಗಿ ತಿಳಿಸಿದ್ದೇನೆ ಮತ್ತು ಪತ್ರವನ್ನು ಬರೆದಿದ್ದೇನೆ ಎಂದವರು ಹೇಳಿದ್ದರು.

Sponsored

ಸಚಿವ ಸಂಪುಟ ವಿಸ್ತರಣೆಗೆ ಮುಕ್ತ ಅವಕಾಶ ನೀಡಬೇಕು, ಇಲ್ಲದಿದ್ದರೆ ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಾಜಣ್ಣ ಒತ್ತಾಯಿಸಿದ್ದಾರೆ.

ಯಾವುದೇ ನಿರ್ಧಾರವಾಗಿದ್ದರೂ ಅದನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಒಂದು ಡಜನ್ ಗು ಹೆಚ್ಚು ನಾಯಕರು ಅರ್ಹರಾಗಿದ್ದಾರೆ. ಹೀಗಾಗಿ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ ಎಂದು ಮಾಜಿ ಸಚಿವ ರಾಜಣ್ಣ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾದರೆ ಕಾಂಗ್ರೆಸ್ ಪಕ್ಷಕ್ಕೆ ಕಷ್ಟವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ರಾಷ್ಟ್ರೀಯ ಪಕ್ಷವಾಗಿದ್ದು, ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Sponsored

Also Read:

Bengal Politics: ಬಿಜೆಪಿ ಗೆಲುವಿನ ಹಿಂದೆ ಕರ್ನಾಟಕದ ಯುವಕನ ಮಾಸ್ಟರ್ ಪ್ಲಾನ್!

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online