Belagavi News :
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ.
ಭಾರಿ ಮಳೆಯ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂದೆ ಚರ್ಕೆ ಕ್ರಮಗಳನ್ನು ಕೈಗೊಂಡಿದ್ದು, ಜಲಪಾತಗಳು, ನದಿಗಳು ಹಾಗೂ ನೀರಿನ ಹರಿವು ಹೆಚ್ಚಿರುವ ಪ್ರದೇಶಗಳಲ್ಲಿ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಹವಾಮಾನ ಮಾಹಿತಿಯನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಇದೇ ವೇಳೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಪರಿಣಾಮ ಕೆಳಗಡೆ ವಾಹನ ಸಂಚಾರ ಹಾಗೂ ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹವಾಮಾನ ತಜ್ಞರ ಪ್ರಕಾರ, ಮುಂಗಾರು ಕುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ.
Karnataka rain alert : ಈ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಐದು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ; ಭಾರಿ ಮಳೆ ಎಚ್ಚರಿಕೆ :
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ :
ಅತಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು - ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಕೆಲವೆಡೆ ಬಿರುಗಾಳಿಯು ಬೀಸುವ ನಿರೀಕ್ಷೆ ಇದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ, ಸಾರ್ವಜನಿಕರು ನದಿಗಳು, ಜಲಪಾತಗಳು ಹಾಗೂ ಪ್ರವಾಹ ಪೀಡಿತ ಪ್ರದೇಶಗಳ ಬಳಿ ಹೋಗದಂತೆ ಸೂಚಿಸಲಾಗಿದೆ. ಹಳೆಯ ಮರಗಳು, ವಿದ್ಯುತ್ ಕಂಬಗಳು ಮತ್ತು ಅಪಾಯಕಾರಿ ಸ್ಥಳಗಳ ಬಳಿ ಇಲ್ಲದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ :
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳನ್ನು ಗುಡುಗು - ಮಿಂಚು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಎಚ್ಚರಿಕೆ :
ಅವಮಾನ ಇಲಾಖೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯವಿಲ್ಲದ ಹೊರಾಂಗಣ ಸಂಚಾರವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವುದು, ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಮತ್ತು ಸ್ಥಳೀಯ ಆಡಳಿತ ಸೂಚನೆಗಳನ್ನು ಪಾಲಿಸುವುದು ಉತ್ತಮ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಲ್ಲಿ ಅತಿ ಭಾರಿ ಮಳೆ ಆಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪ್ರವಾಸಿಗರು ಹಾಗೂ ಸ್ಥಳೀಯರು ಜಾಗರೂಕರ ಆಗಿರಲು ಸೂಚಿಸಲಾಗಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು ಮತ್ತು ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕೆಲವೆಡೆ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಭಾರಿ ಮಳೆ ಹಿನ್ನಲೆ ನದಿ ಹಳ್ಳ, ಜಲಾಶಯ ಮತ್ತು ಜಲಪಾತಗಳ ಬಳಿ ಅನಗತ್ಯವಾಗಿ ಸರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವುದು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ.