<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ : ಕರಾವಳಿ - ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ - ಜನರಿಗೆ ಎಚ್ಚರಿಕೆ ಸಂದೇಶ

ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ : ಕರಾವಳಿ - ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ - ಜನರಿಗೆ ಎಚ್ಚರಿಕೆ ಸಂದೇಶ
Summary: The Meteorological Department has issued a heavy rain warning in Karnataka. Varuna's arrival is likely to continue in coastal and Malnad parts, and an alert has been declared for 13 districts of the state. People have been advised to be careful as there is a possibility of heavy rains in the coming days.

Belagavi News:

ಕರ್ನಾಟಕದಲ್ಲಿ ಮುಂಗಾರು ಮಳೆ 2026 ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮ 13 ಜಿಲ್ಲೆಗಳಿಗೆ ಭಾರಿ ಮಳೆಯ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯ ಪ್ರಭಾವದಿಂದ ಕೆಲವು ಪ್ರದೇಶಗಳಲ್ಲಿ ಗಾಳಿಯ ಜೊತೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ವಿಶೇಷವಾಗಿ ಕಡಲತೀರ ಮತ್ತು ಮಲೆನಾಡು ಭಾಗಗಳಲ್ಲಿ ಜಲಾವೃತ ಹಾಗೂ ಭೂಕುಸಿತದ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯವಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ಮಳೆಯ ಚಟುವಟಿಕೆ ಮುಂದುವರೆಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ವಿಶೇಷವಾಗಿ ಕಡಲ ತೀರ ಮತ್ತು ಮಲೆನಾಡು ಭಾಗಗಳಲ್ಲಿ ಜಲಾವೃತ ಹಾಗೂ ಭೂಕುಸಿತದ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯವಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ಮಳೆಯ ಚಟುವಟಿಕೆ ಮುಂದುವರೆಯುವ ಸಾಧ್ಯತೆಯಿದ್ದು, ಕೃಷಿ ಚಟುವಟಿಕೆಗಳಿಗೆ ಇದು ಸಹಾಯಕವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ ತೀವ್ರ ಮಳೆಯ ಸಂದರ್ಭದಲ್ಲಿ ಪ್ರಯಾಣ ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಜಾಗರೂಕತೆ ವಹಿಸಲು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೇಗಿರಲಿದೆ ಎಂಬುದನ್ನು ಹವಾಮಾನ ಇಲಾಖೆ ನಿರಂತರವಾಗಿ ಗಮನಿಸುತ್ತಿದೆ.

Karnataka weather Alert : 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - ಭಾರಿ ಮಳೆ, ಗುಡುಗು ಬಿರುಗಾಳಿ ಎಚ್ಚರಿಕೆ :

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ 13 ಜಿಲ್ಲೆಗಳಿಗೆ ಭಾರಿ ಮಳೆಯ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರವಳನಾಡಿನ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಮಲೆನಾಡು ಮತ್ತು ಉತ್ತರವಳ ನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ.

ಯೆಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳು :

ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಾಗಿದೆ.

ಈ ಜಿಲ್ಲೆಗಳಲ್ಲಿ ಮಳೆಯ ಸಮಯದಲ್ಲಿ ಗುಡುಗು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ತೆರೆದ ಪ್ರದೇಶಗಳು, ಕಡಿಮೆ ಎತ್ತರದ ಪ್ರದೇಶಗಳು ಮತ್ತು ಕೃಷಿ ಜಮೀನಿನಲ್ಲಿ ಕೆಲಸ ಮಾಡುವವರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸಲಹೆ ನೀಡಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ಮಳೆಯ ಚಟುವಟಿಕೆ ಮುಂದುವರೆಯುವ ಸಾಧ್ಯತೆಯಿದ್ದು, ಪರಿಸ್ಥಿತಿಯನ್ನು ಇಲಾಖೆ ನಿರಂತರವಾಗಿ ಗಮನಿಸುತ್ತಿದೆ.

ಕರಾವಳಿ, ಉತ್ತರ ಒಳನಾಡು, ಮಲೆನಾಡಿನಲ್ಲಿ ಭಾರಿ ಮಳೆ - ಹಲೋ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ :

ಕರ್ನಾಟಕದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಬಲಗೊಂಡಿದ್ದು, ರಾಜ್ಯದ ಹಲವಡೆ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹಲವು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಳಗಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಗುಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ಸ್ಥಳೀಯ ಆಡಳಿತ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಮುನ್ಸೂಚನೆ ಇದ್ದು, ಕೆಲವಡಿ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಚಟುವಟಿಕೆಗಳು ಗಣನೀಯವಾಗಿ ಹೆಚ್ಚಾಗಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಅದೇ ವೇಳೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ಸಾಧ್ಯತೆ ಇದ್ದರೂ ಕೆಲವೊಡೆ ತೊಂದರೆ ಉಂಟಾಗುವ ಭೀತಿ ವ್ಯಕ್ತವಾಗಿದೆ.

ಮಲೆನಾಡು ಭಾಗದಲ್ಲೂ ಮಳೆ ಅಬ್ಬರ ಮುಂದುವರೆಯುವ ಲಕ್ಷಣ ಕಾಣಿಸುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯಪುರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯ ಸಾಧ್ಯತೆ ಇದೆ. ನಿರಂತರ ಮಳೆಯಿಂದ ನದಿಗಳು ಮತ್ತು ಜಲಾಶಯಗಳು ನೀರಿನ ಮಟ್ಟ ಏರಿಕೆ ಕಾಣುವ ಸಾಧ್ಯತೆ ಇದ್ದು, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಧ್ಯಮ ಮಟ್ಟದ ಮಳೆಯಾಗುವ ನಿರೀಕ್ಷೆಯು ಇದೆ.

ಒಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚಟುವಟಿಕೆ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಸಾರ್ವಜನಿಕರು, ರೈತರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

Also Read:

ವಿದ್ಯಾರ್ಥಿಗಳ ನೀಟ್ ಪ್ರಯಾಣಕ್ಕೆ ಅಡ್ಡಿಯಾದ ಕೆಪಿಸಿಸಿ ಕಾರ್ಯಕ್ರಮವೇ?ಬಿಜೆಪಿ - ಕಾಂಗ್ರೆಸ್ ವಾಕ್ಸಮರ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online