<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಹಿಜಾಬ್ ನಿಷೇಧ ಹಿಂಪಡೆದ ಕರ್ನಾಟಕ ಸರ್ಕಾರ

ಹಿಜಾಬ್ ನಿಷೇಧ ಹಿಂಪಡೆದ ಕರ್ನಾಟಕ ಸರ್ಕಾರ
Summary: The wearing of hijab was banned in schools and PU colleges in Karnataka, the Siddaramaiah government has withdrawn the Karnataka hijab ban.

Belagavi news:

ಕರ್ನಾಟಕ ಸರ್ಕಾರ ಶಾಲಾ- ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಸೇರಿದಂತೆ ಧಾರ್ಮಿಕ ಗುರುತುಗಳನ್ನು ಹೊಂದಿರುವ ವಸ್ತುಗಳಿಗೆ ಅವಕಾಶ ನೀಡುವಂತೆ ಆದೇಶ ಹೊರಡಿಸಿರುವುದು ರಾಜ್ಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರದಿಂದ ಸಮವಸ್ತ್ರ ನಿಯಮ ಹಾಗೂ ಧಾರ್ಮಿಕ ಅಭಿವ್ಯಕ್ತಿ ಹಕ್ಕುಗಳ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.

ವಿಪಕ್ಷಗಳು ಸರ್ಕಾರದ ಈ ಕ್ರಮವನ್ನು ನ್ಯಾಯಾಲಯದ ಹಿಂದಿನ ಆದೇಶಗಳಿಗೆ ವಿರುದ್ಧವಾಗಿ ಎಂದು ಟೀಕಿಸುತ್ತಿವೆ. ಸಮವಸ್ತ್ರ ನೀತಿಯ ಉಲ್ಲಂಘನೆ ಆಗುವ ಸಾಧ್ಯತೆ ಇದೆ ಎಂದು ಆರೋಪಿಗಳು ಕೇಳಿಬಂದಿವೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಜಾಬ್ ಮಾತ್ರವಲ್ಲದೆ ಜನಿವಾರ, ಶಿವದಾರ, ರುದ್ರಾಕ್ಷಿ ಹಾಗೂ ಪೇಟ ಸೇರಿದಂತೆ ಧಾರ್ಮಿಕ ಗುರುತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಧಾರ್ಮಿಕ ಹಕ್ಕುಗಳಿಗೆ ಗೌರವ ನೀಡುವುದು ಸರ್ಕಾರದ ಉದ್ದೇಶ ಎಂದು ಅವರು ತಿಳಿಸಿದ್ದಾರೆ.

Sponsored

ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳ ಸಮವಸ್ತ್ರ, ನೀತಿ ಕುರಿತು ಮತ್ತೊಂದು ಸುತ್ತಿನ ಚರ್ಚೆ ಹಾಗೂ ರಾಜಕೀಯ ವಾದ- ವಿವಾದಗಳು ತೀವ್ರಗೊಂಡಿವೆ.

ಮೈಸೂರು/ಉಡುಪಿ: ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಬ್ ಸೇರಿದಂತೆ ಧಾರ್ಮಿಕ ಗುರುತುಗಳನ್ನು ಧರಿಸಲು ಅವಕಾಶ ನೀಡುವಂತೆ ಸರ್ಕಾರ ಆದೇಶ ಹೊರಡಿಸಿರುವುದು ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರದಿಂದ ಶಿಕ್ಷಣ ವಲಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ.

ವಿಪಕ್ಷಗಳು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದು, ಇದು ನ್ಯಾಯಾಲಯದ ಹಿಂದಿನ ಆದೇಶಗಳಿಗೆ ವಿರೋಧವಾಗಿದೆ ಎಂದು ಆರೋಪಿಸಿವೆ. ಒಂದು ಸಮುದಾಯದ ಮನವೊಲಿಕೆಗೆ ಸರ್ಕಾರ ಮುಂದಾಗಿದೆ ಎಂದು ವಿಪಕ್ಷಗಳು ಕಿಡಿ ಕಾರಿವೆ.

2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರ ಸಂಹಿತೆ ಹಾಗೂ ಹಿಜಾಬ್ ನಿಷೇಧವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು ಎಂಬುದನ್ನು ಉಲ್ಲೇಖಿಸುತ್ತಾ, ಈಗಿನ ಸರ್ಕಾರದ ಆದೇಶ ಕಾನೂನು ಉಲ್ಲಂಘನೆ ಯಾಗಿದೆ ಎಂದು ವಿರೋಧ ಪಕ್ಷಗಳು ಹೇಳಿವೆ.

Sponsored

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು ವಿದ್ಯಾರ್ಥಿಗಳ ಧಾರ್ಮಿಕ ಹಕ್ಕುಗಳಿಗೆ ಅವಕಾಶ ನೀಡುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ವಾಗ್ವಾದ ಉಂಟಾಗಿದೆ.

ನಾವು ಹಿಜಾಬ್ ಗೆ ಮಾತ್ರ ಅವಕಾಶ ಕೊಟ್ಟಿಲ್ಲ, ಜನಿವಾರ್, ಶಿವದಾರ್, ರುದ್ರಾಕ್ಷಿ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ, ಕೇಸರಿ ಪೇಟಕ್ಕೂ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ. ಮೊದಲಿನಿಂದ ಯಾವ ಪೇಟಗಳಿತ್ತು, ಆ ಪೇಟಗಳಿಗಷ್ಟೇ ಅವಕಾಶ ಇರಲಿದೆ. ಈಗ ಪೇಟಕ್ಕೆ ಬಣ್ಣದ ಬದಲಾವಣೆ ಮಾಡಿಕೊಂಡರೆ ಅವಕಾಶ ಇಲ್ಲ ಎಂದಿದ್ದಾರೆ.

ಸರ್ಕಾರ ಈ ಹಿಜಾಬ್ ಸೇರಿದಂತೆ ಧಾರ್ಮಿಕ ಗುರುತುಗಳನ್ನು ಶಾಲಾ- ಕಾಲೇಜುಗಳಲ್ಲಿ ಧರಿಸಲು ಅವಕಾಶ ನೀಡಲು ಆದೇಶವನ್ನು SDPI ಮುಖಂಡ ಮೊಹಮ್ಮದ್ ಅಶ್ರಫ್ ಸ್ವಾಗತಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ವಿಚಾರದಲ್ಲಿ ಹಿಂದಿನ ಸರ್ಕಾರ ವಿದ್ಯಾರ್ಥಿನಿಯ ಭವಿಷ್ಯದಲ್ಲಿ ಅನಗತ್ಯವಾಗಿ ಮಧ್ಯ ಪ್ರವೇಶ ಮಾಡಿತ್ತು ಎಂದು ಆರೋಪಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ವಿವಾದ ಆರಂಭವಾಗಲು ಸ್ಥಳೀಯ ರಾಜಕೀಯ ನಾಯಕರ ಪಾತ್ರವಿತ್ತು ಎಂದು ಅವರು ಹೇಳಿದ್ದಾರೆ.

Sponsored

ಈ ವಿಚಾರ ಅನಗತ್ಯವಾಗಿ ವಿಶ್ವಾದಂತ್ಯ ಚರ್ಚೆಗೆ ಗ್ರಾಸ ವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರಿದೆ ಎಂದು ಅವರು ತಿಳಿಸಿದ್ದಾರೆ. ಹಿಜಾಬ್ ಸಂಬಂಧಿತ ಹಿಂದಿನ ನಿರ್ಬಂಧವನ್ನು ಸರ್ಕಾರ ಬಹಳ ಹಿಂದೆಯೇ ಹಿಂಪಡೆಯಬೇಕಿತ್ತು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದೀಗ ಸರ್ಕಾರ ತೆಗೆದುಕೊಂಡಿರುವ ಹೊಸ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು SDPI ಮುಖಂಡ ಮೊಹಮ್ಮದ್ ಅಶ್ರಫ್ ತಿಳಿಸಿದ್ದಾರೆ.

ಶಾಲಾ ಸಮವಸ್ತ್ರ ವಿಚಾರದಲ್ಲಿ 2022ರ ಆದೇಶವನ್ನು ಹಿಂಪಡೆಯಲು ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜೇನು ಗೂಡಿಗೆ ಕೈ ಹಾಕಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಪಿಸಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರ ಮಮತಾ ಬ್ಯಾನರ್ಜಿ ಮಾದರಿಯಲ್ಲಿ ಕರ್ನಾಟಕವನ್ನು ರೂಪಿಸಲು ಮುಂದಾಗಿದೆ ಎಂದು ಆರೋಪಿಸಿರುವ ಅವರು ಮಮತಾ ಬ್ಯಾನರ್ಜಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ.

Sponsored

ಹಿಂದಿನ ಹೋರಾಟದ ವೇಳೆ ವಿದ್ಯಾರ್ಥಿಗಳ ಹಿಂದೆ PFI ಸಂಘಟನೆ ಇದ್ದಿತು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಭಜನೆ ಬೀಜ ಬಿತ್ತುವ ಕೆಲಸ ಸರ್ಕಾರದಿಂದ ಆಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರ ಇನ್ನು ಬಾಕಿ ಇರುವ ಸಂದರ್ಭದಲ್ಲಿ ಸರ್ಕಾರ ಏಕ ಪಕ್ಷಿಯವಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿರುವ ಅವರು, ಮುಂದಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Also Read:

ಉಗ್ರರ ದಾಳಿ ಸಂದರ್ಭ: ವಿಧಾನಸೌಧದಲ್ಲಿ ಎನ್ ಎಸ್ ಜಿ ಹೆಲಿಕಾಪ್ಟರ್ ಅಣಕು ಪ್ರದರ್ಶನ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online