Belagavi news:
ಕರ್ನಾಟಕದ ಹಂತ 2 ಮತ್ತು ಹಂತ 3 ನಗರಗಳ ಯುವಕರಲ್ಲಿ ತಾಂತ್ರಿಕ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಅತ್ಯಾಧುನಿಕ ಕೃತಕ ಬುದ್ಧಿಮತ್ತೆ(Artificial Intelligency)ಪ್ರಯೋಗಾಲಯಗಳನ್ನು ಸ್ಥಾಪಿಸಲು ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.
ಈ ಯೋಜನೆ ಕೇಂದ್ರದ "AI ಮಿಷನ್ " ಸಹಭಾಗಿತ್ವದಲ್ಲಿ ಜಾರಿಯಾಗುತ್ತಿದ್ದು, ಒಟ್ಟು ₹10 ಕೋಟಿ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ. ಮೊದಲ ಹಂತದಲ್ಲಿ 23 ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾಯೋಗಿಕ ಕಲಿಕೆಗಾಗಿ ಆಯ್ಕೆ ಮಾಡಲಾಗಿದ್ದು, ಮುಂದಿನ ಹಂತದಲ್ಲಿ ಉಳಿದ ಕಾಲೇಜುಗಳಲ್ಲಿ AI ಲ್ಯಾಬ್ ಗಳನ್ನು ವಿಸ್ತರಿಸಲಾಗುವುದು.
ರಾಜ್ಯದ ಪ್ರಮುಖ ನಗರಗಳ ಹೊರತಾಗಿ ಗ್ರಾಮೀಣ ಪ್ರದೇಶಗಳು ಹಾಗೂ ಹಂತ 2 ಮತ್ತು ಹಂತ 3 ನಗರಗಳ ಯುವ ಜನರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಚಯ ಮಾಡಿಸಿ, ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ AI ಲ್ಯಾಬ್ ಗಳ ಮೂಲಕ ವಿದ್ಯಾರ್ಥಿಗಳಿಗೆ ಡೇಟಾ ಸೈನ್ಸ್, ಮಿಷನ್ ಲರ್ನಿಂಗ್ ಮತ್ತು ಆಧುನಿಕ ತಂತ್ರಜ್ಞಾನಗಳ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಪ್ರಕಾರ, ಈ ಕ್ರಮವು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ತಾಂತ್ರಿಕ ಪರಿವರ್ತನೆಗೆ ಕಾರಣವಾಗಿದೆ.
ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್ ಸ್ಥಾಪನೆಯಿಂದ ಗ್ರಾಮೀಣ ಹಾಗೂ ನಗರ ವಿದ್ಯಾರ್ಥಿಗಳ ನಡುವಿನ ತಾಂತ್ರಿಕ ಅಂತರ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್ ಗಳಿಗೆ ಅನುಮೋದನೆ; ವಿದ್ಯಾರ್ಥಿಗಳ ಉದ್ಯೋಗಾವಕಾಶಕ್ಕೆ ಬಲ:
ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಸಣ್ಣ ನಗರಗಳು ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಈ ಯೋಜನೆಯನ್ನು ಕೇಂದ್ರದ 'AI ಮಿಷನ್' ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ AI ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಹೊಸ ಪ್ರಯೋಗಗಳು, ಕೌಶಲ್ಯ ಅಭಿವೃದ್ಧಿ, ಹಾಗೂ ನಾವಿನ್ಯತೆಗೆ ಭದ್ರವಾದ ಮೂಲಸೌಕರ್ಯ ದೊರೆಯಲಿದೆ.
ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ಯೋಜನೆ:
2026 27 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಲಾದ ಈ ಮಹತ್ವಾಕಾಂಕ್ಷಿ ಯೋಜನೆ ಕೇಂದ್ರ ಸರ್ಕಾರದ AI ಮಿಷನ್ ಜೊತೆಗೂಡಿ ಅನುಷ್ಠಾನಗೊಳ್ಳುತ್ತಿದೆ. ಈ ಮೊತ್ತವನ್ನು ಮೂರು ವರ್ಷಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಇದರ ಜೊತೆಗೆ ಕರ್ನಾಟಕ ಸರ್ಕಾರವು ಒಟ್ಟು ₹10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದು, ಅದರಲ್ಲಿ ₹6.29 ಕೋಟಿ ಮೊತ್ತವನ್ನು ಮೊದಲ ವರ್ಷದಲ್ಲೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ.
ಈ ಯೋಜನೆಯಿಂದ ರಾಜ್ಯದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದಲ್ಲಿ ಕೈ ಪಾಡು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.
ಕರ್ನಾಟಕ AI ಲ್ಯಾಬ್ ಯೋಜನೆ : ಮೊದಲ ಹಂತದಲ್ಲಿ 23 ಕಾಲೇಜುಗಳ ಆಯ್ಕೆ:
ಕರ್ನಾಟಕ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯಗಳ ಸ್ಥಾಪನೆ ಯೋಜನೆಯ ಮೊದಲ ಹಂತದಲ್ಲಿ ರಾಜ್ಯದ 23 ಪ್ರಮುಖ ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮುಂದಿನ ದಿನಗಳಲ್ಲಿ ಉದ್ಯೋಗದ ಭವಿಷ್ಯವನ್ನು ತಂತ್ರಜ್ಞಾನವೇ ನಿರ್ಧರಿಸಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಇಂತಹ ಅತ್ಯಧುನಿಕ ತಾಂತ್ರಿಕ ಕೌಶಲ್ಯಗಳನ್ನು ಕಲಿಯುವ ಅವಕಾಶಗಳು ಕೇವಲ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗದೆ ಎಲ್ಲರಿಗೂ ಸಿಗಬೇಕು ಎಂಬುದು ಸರಕಾರದ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ AI ಪ್ರಯೋಗಾಲಯಗಳ ಮೂಲಕ ಸಣ್ಣ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳ ಯುವಜನರು ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಹೊಸ ಆವಿಷ್ಕಾರಗಳಿಗೆ ಉತ್ತೇಜನ ಮತ್ತು ಉದ್ಯೋಗೋದ್ಯಮಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆ ಜಾರಿಯಾದ ನಂತರ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಕಲಿಕೆಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಶಿಕ್ಷಣ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
Also Read:
ಅಸ್ಸಾಂನಲ್ಲಿ ಭೀಕರ ವಿಮಾನ ಅಪಘಾತ : ಜೋರ್ಹತ್ ನಲ್ಲಿ ವಾಯುಪಡೆ ವಿಮಾನ ಪತನ