belagavi news :
ಕಾರ್ತಿಕ್ ಆರ್ಯನ್ ರಿಂದ ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ₹1ಕೋಟಿ ನೆರವು
ಬಾಲಿವುಡ್ ನಟ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಕಾರ್ತಿಕ್ ಆರ್ಯನ್ ಅವರು ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ. ಅಸ್ಸಾಂ ನ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ನಡುವೆ, ಅವರು ಅಸ್ಸಾಂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳಿಗೆ ನೆರವು ಅಗತ್ಯವಾಗಿದೆ. ಈ ಸಂದರ್ಭದಲ್ಲಿ ಕಾರ್ತಿಕ್ ಆರ್ಯನ್ ನೀಡಿರುವ ಸಹಾಯವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಫಿಸಿ, ನಟನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರತಿಕ್ರಿಯಿಸಿ, ಕಾರ್ತಿಕ್ ಆರ್ಯನ್ ಅವರ ಉದಾರ ಕೊಡುಗೆ ಅಸ್ಸಾಂ ಜನರ ನೆರವಿಗೆ ಹೆಚ್ಚಿನ ಸಹಾಯ ನೀಡಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಕಚೇರಿಯು ನಟನ ಸಹಾಯವನ್ನು ಉಲ್ಲೇಖಿಸಿ, ಪ್ರವಾಹ ಪರಿಹಾರ ಕಾರ್ಯಗಳಿಗೆ ನೀಡಿದ ಸಮಯೋಚಿತ ಬೆಂಬಲಕ್ಕಾಗಿ ಧನ್ಯವಾದಗಳು ಅರ್ಪಿಸಿದೆ. ಕಾರ್ತಿಕ್ ಆರ್ಯನ್ ಅವರ ಈ ಮಾನವೀಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಅಸ್ಸಾಂ ಪ್ರವಾಹ ನೆರವಿಗೆ ಸೆಲೆಬ್ರಿಟಿಗಳ ಬೆಂಬಲ : ಕಾರ್ತಿಕ್ ಆರ್ಯನ್ ಬಳಿಕ ಹಲವು ತಾರೆಯರಿಂದ ಸಹಾಯ
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ನಡುವೆಬಾಲಿವುಡ್ ತಾರೆಯರು ನೆರವಿನ ಹಸ್ತ ಚಾಚುತ್ತಿದ್ದಾರೆ.ನಟ ಕಾರ್ತಿಕ್ ಆರ್ಯನ್ ಅವರು ಅಸ್ಸಾಂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1 ಕೋಟಿ ರೂಪಾಯಿ ಇದೆ ದೇಣಿಗೆ ನೀಡಿದ ಬೆನ್ನಲ್ಲೇ, ಹಲವು ಸೆಲೆಬ್ರಿಟಿಗಳು ಪ್ರವಾಹ ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ.
ಇದಕ್ಕೂ ಮೊದಲು ನಟ ಆಯುಷ್ಮಾನ್ ಖುರಾನಾ ಮತ್ತು ಅವರ ಪತ್ನಿ, ಫಿಲಂ ಮೇಕರ್ ತಾಹಿರಾ ಕಶ್ಯಪ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹11ಲಕ್ಷ ರೂಪಾಯಿ ಕೊಡುಗೆ ನೀಡಿದ್ದಾರೆ. ನಟ ಸಲ್ಮಾನ್ ಖಾನ್ ಅವರ ಎನ್ ಜಿ ಒ ' ಬೀಯಿಂಗ್ ಹ್ಯೂಮನ್' ಮೂಲಕವೂ ಅಸ್ಸಾಂನಲ್ಲಿ ಪರಿಹಾರ ಕಾರ್ಯಗಳಿಗೆ ಬೆಂಬಲ ನೀಡಲಾಗುತ್ತಿದೆ.
ಇನ್ನು ನಟಿಯರಾದ ಆಲಿಯಾ ಭಟ್ ಮತ್ತು ಭೂಮಿ ಪಡ್ನೆಕರ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ಅಗತ್ಯ ನೆರವು ನೀಡುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಸ್ಸಾಂನಲ್ಲಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿಯೂ ಬಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಭಾರತ ಹವಾಮಾನ ಇಲಾಖೆ ಅಸ್ಸಾಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿತು, ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹಾಗೂ ಅಧಿಕೃತ ಹವಾಮಾನ ಮಾಹಿತಿಯನ್ನು ಗಮನಿಸುವಂತೆ ಸೂಚಿಸಿದೆ. ಟೆನ್ಸುಕಿಯಾ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನೆರೆಯ ಕೆಲವು ಪ್ರದೇಶಗಳ ಮೇಲು ಮಳೆಯ ಪರಿಣಾಮ ಬೀರುವ ಸಾಧ್ಯತೆ ಇದೆ.
ಅಸ್ಸಾಂ ಪ್ರವಾಹಕ್ಕೆ ತೀವ್ರ ಹೊಡೆತ : ಸಾವಿನ ಸಂಖ್ಯೆ 80ಕ್ಕೆ ಏರಿಕೆ,ಕಾರ್ತಿಕ್ ಆರ್ಯನ್ ನೆರವಿಗೆ ಮುಂದಾದರು
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಮಾಹಿತಿಯ ಪ್ರಕಾರ, ಶಿವಸಾಗರ ಜಿಲ್ಲೆಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷ ಅಸ್ಸಾಂನಲ್ಲಿ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 80ಕ್ಕೆ ತಲುಪಿದೆ:
ಪ್ರವಾಹದಲ್ಲಿ ಚರೈಡಿಯೋ,ಗೋಲಾಘಾಟ್, ಜೊರ್ಹತ್ ಮತ್ತು ಶಿವಸಾಗರ್ ಜಿಲ್ಲೆಗಳಲ್ಲಿ 2.12 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ.ಇದರಲ್ಲಿ ಚರೈಡಿಯೋ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದ್ದು,ಸುಮಾರು 80000ಕ್ಕೂ ಹೆಚ್ಚು ಜನರು ಪ್ರವಾಹದ ಪರಿಣಾಮ ಎದುರಿಸುತ್ತಿದ್ದಾರೆ.
ಪ್ರವಾಹ ಸಂತ್ರಸ್ತರ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಬರದಿಂದ ಸಾಗುತ್ತಿವೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತದ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.
ಸ್ಥಳಾಂತರಗೊಂಡ ಜನರಿಗೆ ಆಶ್ರಯ, ಆಹಾರ ಮತ್ತು ಅಗತ್ಯ ವಸ್ತುಗಳನ್ನು ಒದಗಿಸಲು ಅಸ್ಸಾಂ ಸರ್ಕಾರವು ನೂರಕ್ಕೂ ಹೆಚ್ಚು ಪರಿಹಾರ ಮತ್ತು ವಿತರಣಾ ಶಿಬಿರಗಳನ್ನು ಆರಂಭಿಸಿದೆ.
ಈ ನಡುವೆ, ಪ್ರವಾಹ ಸಂತ್ರಸ್ತರ ನೆರವಿಗೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ₹1ಕೋಟಿ ರೂಪಾಯಿ ದೇಣಿಗೆ ನೀಡಿದ್ದು, ಅವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗೆ 'ಚಂದು ಚಾಂಪಿಯನ್'ಚಿತ್ರದ ಅಭಿನಯಕ್ಕಾಗಿ ಕಾರ್ತಿಕ್ ಆರ್ಯನ್ ಅವರಿಗೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಟ ಸಾಮಾಜಿಕ ಕಾಳಜಿ ಮತ್ತಷ್ಟು ಗಮನ ಸೆಳೆದಿದೆ.
ಕಾರ್ತಿಕ್ ಆರ್ಯನ್ ಹೊಸ ಸಿನಿಮಾಗೆ ಸಜ್ಜು : ಅನುರಾಗ್ ಬಸು ನಿರ್ದೇಶನದ ರೋಮ್ಯಾಂಟಿಕ್ ಡ್ರಾಮದಲ್ಲಿ ಶ್ರೀಲೀಲಾ ನಾಯಕಿ
ಬಾಲಿವುಡ್ ನಟ ಸೂಪರ್ ಸ್ಟಾರ್ ಕಾರ್ತಿಕ್ ಆರ್ಯನ್ ಅವರು ನಿರ್ದೇಶಕ ಅನುರಾಗ ಬಸು ಅವರ ಮುಂಬರುವ ರೋಮ್ಯಾಂಟಿಕ್ ಡ್ರಾಮಾ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರದ ಮೂಲಕ ದಕ್ಷಿಣದ ಖ್ಯಾತ ನಟಿ ಶ್ರೀ ಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.