belagavi news :
ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರದ ಮೇಲೆ ನಡೆದ ಪೊಲೀಸ್ ಕ್ರಮವನ್ನು ಉಲ್ಲೇಖಿಸಿ, ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ವಿಧೆಯಕದ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ ಖರ್ಗೆ, ಪ್ರತಿಭಟನಾಕಾರದ ಮೇಲಿನ ಹಲ್ಲೆ ಮತ್ತು ನೀಟ್ ಪರೀಕ್ಷೆಯಲ್ಲಿನ ಕ್ರಮಗಳ ಕುರಿತು ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿದರು. "ಈ ಘಟನೆ ಕುರಿತು ಅಮಿತ್ ಶಾ ದೇಶದ ಜನರ ಕ್ಷಮೆಯಾಚಿಸಬೇಕು. ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು" ಎಂದು ಆಗ್ರಹಿಸಿದರು.
ಸಂಸತ್ ಕಲಾಪಕ್ಕೆ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿ ಗೈರಾಗಿರುವುದನ್ನೂ ಖಂಡಿಸಿದ ಖರ್ಗೆ, "ಇಂತಹ ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಸರ್ಕಾರದ ಪ್ರಮುಖ ನಾಯಕರು ಸದನದಲ್ಲಿರಬೇಕು. ಜನರ ಪ್ರಶ್ನೆಗಳಿಗೆ ಉತ್ತರ ನೀಡುವ ಜವಾಬ್ದಾರಿ ಅವರದ್ದಾಗಿದೆ" ಎಂದು ಹೇಳಿದರು.
ಖರ್ಗೆ ಅವರ ಹೇಳಿಕೆ ವೇಳೆ ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಆಡಳಿತ ಪಕ್ಷದ ಸದಸ್ಯರು ಖರ್ಗೆ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರೆ, ವಿರೋಧ ಪಕ್ಷದ ಸದಸ್ಯರು ಪ್ರತಿಭಟನಾಕಾರರ ಮೇಲಿನ ಕ್ರಮದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು.
ಜುಲೈ 20ರಂದು ದೆಹಲಿಯಲ್ಲಿ ನಡೆದ ಸಿಜೆಪಿ ಪ್ರತಿಭಟನೆ ಹಾಗೂ ಪರೀಕ್ಷೆಯ ಅಕ್ರಮಗಳ ವಿಚಾರವು ಇದೀಗ ಸಂಸತ್ತಿನಲ್ಲೂ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ ಸಮರಕ್ಕೆ ಮತ್ತಷ್ಟು ವೇಗ ನೀಡಿದೆ.
ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ಸಂಸದ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮವನ್ನು ಉಲ್ಲೇಖಿಸಿದ ಖರ್ಗೆ, "ವಿದ್ಯಾರ್ಥಿಗಳ ವಿರುದ್ಧ ನಡೆದ ಹಿಂಸಾಚಾರದ ಕುರಿತು ಸರ್ಕಾರ ಸತ್ಯವನ್ನು ದೇಶದ ಮುಂದೆ ಬಹಿರಂಗಪಡಿಸಬೇಕು. ಅಮಿತ್ ಶಾ ಅವರು ಮುಚ್ಚಿದ ಬಾಗಿಲಿನ ಹಿಂದೆ ಅಡಗಿರಲು ಸಾಧ್ಯವಿಲ್ಲ" ಎಂದು ಹೇಳಿದರು.
ಜುಲೈ 20ರಂದು ಬಿಜೆಪಿ ಆಯೋಜಿಸಿದ್ದ ' ಚಲೋ ಸಂಸತ್' ಮೆರವಣಿಗೆಯ ಬೆಲೆ ಪ್ರತಿಭಟನಾಕಾರರ ವಿರುದ್ಧ ಭದ್ರತಾ ಪಡೆಗಳು ಕೈಗೊಂಡ ಕ್ರಮದ ಬಗ್ಗೆ ಗೃಹ ಸಚಿವ ವಹಿಸಿರುವುದನ್ನು ಪ್ರಶ್ನಿಸಿದ ಖರ್ಗೆ, "ಯಾರಾದರೂ ನಿಮ್ಮ ಬಾಯಿಯನ್ನು ಹೊಲಿದಿದ್ದಾರೆ? ನೀವು ದೇಶದ ಗೃಹ ಸಚಿವರು. ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ. ಇಷ್ಟೆಲ್ಲಾ ನಡೆದರೂ ನೀವು ಒಂದೇ ಮಾತು ಆಡುತ್ತಿಲ್ಲ. ಏಕೈ ಮೌನವಾಗಿದ್ದೀರಿ?" ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ಈ ಹೇಳಿಕೆ ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ವಿರೋಧ ಪಕ್ಷದ ಸದಸ್ಯರು ಪ್ರತಿಭಟನಾಕಾರರ ಮೇಲಿನ ಕ್ರಮದ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರೆ, ಆಡಳಿತ ಪಕ್ಷದ ಸದಸ್ಯರು ಖರ್ಗೆ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪರೀಕ್ಷಾ ಅಕ್ರಮ, ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಜಂತರ್ ಮಂತರ್ ಘಟನೆಗಳ ಕುರಿತು ಚರ್ಚೆ ಸಂಸತ್ತಿನಲ್ಲಿ ರಾಜಕೀಯ ಕಾವೇರಿದ್ದು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ - ಪ್ರತ್ಯಾರೋಪಗಳು ಮುಂದುವರೆದಿವೆ.
ರಾಜ್ಯಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಜಯದ ಕುರಿತು ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮವನ್ನು ಉಲ್ಲೇಖಿಸಿದ ಖರ್ಗೆ," ಹಳ್ಳಿಗಳಿಂದ ಮತ್ತು ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಗಳನ್ನು ಬಳಸಲಾಗಿದೆ. ಕೆಲವರು ಕಣ್ಣು ಕಿವಿ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದೆ. ಈ ಘಟನೆಗೆ ಯಾರು ಹೊಣೆ? ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ. ಅವರು ಸದಾ ಮುಚ್ಚಿದ ಬಾಗಿಲಿನ ಹಿಂದೆ ಅಡಗಿರಲು ಸಾಧ್ಯವಿಲ್ಲ. ಒಂದಲ್ಲೊಂದು ದಿನ ಜನರ ಮುಂದೆ ಉತ್ತರ ನೀಡಲೇಬೇಕು"ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಖರ್ಗೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಸರ್ಕಾರದ ಮೌನವನ್ನು ಪ್ರಶ್ನಿಸಿ,"ಸರ್ಕಾರ ವಿದ್ಯಾರ್ಥಿಗಳ ಆತಂಕಗಳಿಗೆ ಸ್ಪಂದಿಸದಿದ್ದರೆ, ಯುವಜನತೆ ಮತ್ತು ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೂಲಕ ತಕ್ಕ ಉತ್ತರ ನೀಡುತ್ತಾರೆ" ಎಂದು ಹೇಳಿದರು.
ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧಯಕದ ಬಗ್ಗೆ ಮಾತನಾಡಿದ ಖರ್ಗೆ, ಕೇವಲ ಶಿಕ್ಷೆಯ ಪ್ರಮಾಣ ಹೆಚ್ಚಿಸುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ ಎಂದು ಅಭಿಪ್ರಾಯ ಪಟ್ಟರು. "ಹೆಚ್ಚಿನ ದಂಡ, ಕಠಿಣ ಶಿಕ್ಷೆ, ವಿಶೇಷ ಕಾರ್ಯಪಡೆ ಮತ್ತು ಶೀಘ್ರಗತಿ ನ್ಯಾಯಾಲಯಗಳಂತ ನಿರ್ಬಂಧನೆಗಳನ್ನು ಸೇರಿಸಿದ್ದೀರಿ. ಆದರೆ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವುದು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳುವುದೇ ಮುಖ್ಯ. ಇಂತಹ ಕಠಿಣ ಕಾನೂನು ತರಬೇಕೆಂದು ನಾವು 2024ರಲ್ಲಿ ಆಗ್ರಹಿಸಿದ್ದೇವು. ಆಗ ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲಿಲ್ಲ" ಎಂದು ಹೇಳಿದರು.
ಇದೆ ವೇಳೆ, ದೇಶದ ವಿವಿಧ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರ ನೇಮಕಾತಿ ಕುರಿತು ಆರೋಪ ಮಾಡಿರುವ ಖರ್ಗೆ, ಆರ್ ಎಸ್ ಎಸ್ ಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಪ್ರಮುಖ ಹುದ್ದೆಗಳಿಂದ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮೇಲ್ಮನೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಬಾರಿ ಗದ್ದಲ ಉಂಟಾಯಿತು.