Belagavi News:
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ನಂತರ ಸಿಎಂ ಆಗುವ ಅರ್ಹತೆ ಮಲ್ಲಿಕಾರ್ಜುನ್ ಖರ್ಗೆಗೆ ಮಾತ್ರ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಖರ್ಗೆಯವರ ಅನುಭವ, ಪಕ್ಷದ ಮೇಲಿನ ಹಿಡಿತ ಮತ್ತು ರಾಷ್ಟ್ರೀಯ ಮಟ್ಟದ ನಾಯಕತ್ವವನ್ನು ಉಲ್ಲೇಖಿಸಿದ ರಾಯರೆಡ್ಡಿ, ಕಾಂಗ್ರೆಸ್ ನಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣರಾಗಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದು,, ಕಾಂಗ್ರೆಸ್ ಒಳಗಲ್ಲು ಹೊಸ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ.
ರಾಯರೆಡ್ಡಿ ಅವರ ಈ ಹೇಳಿಕೆ ಬಳಿಕ ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಅವರ ಎಐಸಿಸಿ ಅಧ್ಯಕ್ಷ ರಾಗಿರುವ ಹಿನ್ನೆಲೆ, ಅವರ ಹೆಸರು ಸಿಎಂ ಸ್ಥಾನಕ್ಕೆ ಕೇಳಿ ಬಂದಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಬಳಿಕ ರಾಜ್ಯದ ನಾಯಕತ್ವ ಯಾರ ವಯಸ್ಸಲ್ಲಿದ್ದಾರೆ ಎಂಬ ಪ್ರಶ್ನೆಗೆ ಈ ಹೇಳಿಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತು ತೀವ್ರಗೊಂಡಿರುವ ನಡುವೆಯೇ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ. "ನನಗೆ ಗೊತ್ತಿರುವ ಮಟ್ಟಿಗೆ ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಇದು ನನ್ನ ನಂಬಿಕೆ", ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ರಾಯರೆಡ್ಡಿ, ಸಿಎಂ ಬದಲಾವಣೆ ಕುರಿತು ಯಾವುದೇ ಪರಿಸ್ಥಿತಿ ಈಗಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, "ಒಂದು ವೇಳೆ ಸಿಎಮ್ ಬದಲಾವಣೆ ಮಾಡುವ ಅನಿವಾರ್ಯತೆ ಎದುರಾದರೆ, ಸಿದ್ದರಾಮಯ್ಯ ಬಿಟ್ಟರೆ ಮುಖ್ಯಮಂತ್ರಿಯಾಗುವ ಅರ್ಹತೆ ಮಲ್ಲಿಕಾರ್ಜುನ್ ಖರ್ಗೆಗೆ ಮಾತ್ರ ಇದೆ" ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣರಾದರು. ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರ ಅನುಭವ ಮತ್ತು ನಾಯಕತ್ವವನ್ನು ಉಲ್ಲೇಖಿಸಿದ ರಾಯರೆಡ್ಡಿ, ಅವರೇ ಆಯ್ಕೆ ಎಂದು ಅಭಿಪ್ರಾಯಪಟ್ಟರು.
"ವರಿಷ್ಠರು ಬದಲಾವಣೆ ಮಾಡಬೇಕು ಅಂದರೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಆದರೆ ಅಂತಹ ಪರಿಸ್ಥಿತಿ ಈಗ ಉದ್ಭವಿಸಿಲ್ಲ" ಎಂದು ಅವರು ಹೇಳಿದರು. ಬಸವರಾಜ್ ರಾಯರೆಡ್ಡಿ ಅವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದ್ದು, ಸಿಎಂ ಕುರ್ಚಿ ಕುರಿತ ಚರ್ಚೆಗೆ ಮತ್ತಷ್ಟು ವೇಗ ನೀಡಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ಅಥವಾ ವಿಸ್ತರಣೆ ಕುರಿತು ಚರ್ಚೆ ಮತ್ತು ಜೋರಾಗಿದೆ. ಮೇ 30ರ ಒಳಗೆ ಸಂಪುಟ ಪುನ ರಚನೆ ಅಥವಾ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೂರು ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಅಭಿಪ್ರಾಯವೂ ಪಕ್ಷದ ಒಳಗೆ ಕೇಳಿ ಬರುತ್ತಿದೆ.
ಈ ಕುರಿತು ಮಾತನಾಡಿದ ನಾಯಕರು," ಮೂರು ವರ್ಷ ಆಯ್ತು. ಈಗ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು. ಜನಪರ ಆಡಳಿತ ನೀಡಿದರೆ 2028ರ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಹಾಯಕವಾಗುತ್ತದೆ," ಎಂದು ಹೇಳಿದ್ದಾರೆ. ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಾರಣವಾಗಿದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಹೆಚ್ಚಿಸಿದೆ.
ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆದರೆ ಹಲವು ಹೊಸ ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನ ಲಾಗುತ್ತಿದೆ. ಇದೆ ವೇಳೆ, ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಜನರಲ್ಲಿ ವಿಶ್ವಾಸ ಹೆಚ್ಚಿಸಿಕೊಂಡರೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎಂಬ ಲೆಕ್ಕಾಚಾರ ನಾಯಕರು ಮಾಡುತ್ತಿದ್ದಾರೆ.
Also Read: