<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಕೊಲ್ಕತ್ತಾ ಗೋದಾಮು ಅವಘಡ : ಮೃತರ ಸಂಖ್ಯೆ 9ಕ್ಕೆ ಏರಿಕೆ

ಕೊಲ್ಕತ್ತಾ ಗೋದಾಮು ಅವಘಡ : ಮೃತರ ಸಂಖ್ಯೆ 9ಕ್ಕೆ ಏರಿಕೆ
Summary: The death toll in the horrific warehouse disaster in Kolkata has risen to 9. Rescue operations are ongoing and it is feared that more people are trapped under the debris.

Belagavi News:

ತರಾತಲಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ಗೋದಾಮು ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆ ಆಗಿದೆ. ಅವಘಡದ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಲಾಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದುರಂತದಲ್ಲಿ ಮುರಿತ ಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ ₹ಒಂದು ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಹಲವಾರು ಕುಟುಂಬಗಳು ದುಃಖಕ್ಕೆ ಒಳಗಾಗಿದ್ದು, ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಲಾಗಿದೆ.

ಈ ನಡುವೆ ಆರೋಗ್ಯ ಸಚಿವ ಶರದ್ವತ್ ಮುಖರ್ಜಿ ಗುರುವಾರ ಬೆಳಗ್ಗೆ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ವೈದ್ಯರೊಂದಿಗೆ ಚರ್ಚೆ ನಡೆಸಿದವರು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

Sponsored

ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ. ಗೋದಾಮು ಕುಸಿತದ ಈ ದುರಂತ ಕೊಲ್ಕತ್ತಾದಲ್ಲಿ ಆತಂಕವನ್ನು ಸೃಷ್ಟಿಸಿದ್ದು, ಕಟ್ಟಡ ಸುರಕ್ಷತೆ ಕುರಿತ ಪ್ರಶ್ನೆಗಳನ್ನು ಎಬ್ಬಿಸಿದೆ.

ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು , ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊಲ್ಕತ್ತಾ ಗೋದಾಮು ಕುಸಿತ ದುರಂತ - ಮೃತರ ಸಂಖ್ಯೆ 9ಕ್ಕೆ ಏರಿಕೆ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸಿಎಂ ಸೂಚನೆ :

ಕೊಲ್ಕತ್ತಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ಗೋದಾಮು ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Sponsored

ಆಸ್ಪತ್ರೆಗೆ ಭೇಟಿ ನೀಡಿದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶರದ್ವಾತ್ ಮುಖರ್ಜಿ, ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು. ಅವರಲ್ಲಿ ಒಬ್ಬರು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ.

ಕೆಲವು ಗಾಯಾಳುಗಳ ತೋಳು, ಕಾಲು ಹಾಗೂ ಎದೆಯ ಮೂಳೆಗಳು ಗಂಭೀರವಾಗಿ ಹಾನಿಗೊಳಗಾಗಿದ್ದು, ಹಲವು ಶಸ್ತ್ರ ಚಿಕಿತ್ಸೆಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳಿಗೆ ಯಾವುದೇ ರೀತಿಯ ಚಿಕಿತ್ಸಾ ಕೊರತೆ ಉಂಟಾಗದಂತೆ ಎಲ್ಲಾ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ದುರಂತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಮೃತಪಟ್ಟವರ ಕುಟುಂಬಗಳಿಗೆ ಕಲಾ 10 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ಒಂದು ಲಕ್ಷ ಆರ್ಥಿಕ ನೆರವು ಘೋಷಿಸಿದೆ. ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಗೊದಾಮು ಕುಸಿತಕ್ಕೆ ಕಾರಣವಾದ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

ಕೊಲ್ಕತ್ತಾದ ಈ ದುರಂತ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಕಟ್ಟಡ ಸುರಕ್ಷತೆ ಹಾಗೂ ಕಾರ್ಯನಿರ್ವಹಣೆ ಕುರಿತು ಪ್ರಶ್ನೆಗಳನ್ನು ಮತ್ತೆ ಮುನ್ನಲೆಗೆ ತಂದಿದೆ.

Sponsored

ಕೊಲ್ಕತ್ತಾ ಕಟ್ಟಡ ದುರಂತ - ಮೃತರ ಸಂಖ್ಯೆ 9ಕ್ಕೆ ಏರಿಕೆ, ಕುಟುಂಬಗಳಿಗೆ 10 ಲಕ್ಷ ಪರಿಹಾರ ಘೋಷಣೆ:

ತರಾತಲಾ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಭೀಕರ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮೃತಪಟ್ಟವರಲ್ಲಿ ಐದು ಜನರ ಹೃದಯಗಳನ್ನು ಈಗಾಗಲೇ ಕುಟುಂಬಗಳಿಗೆ ಹಸ್ತಾಂತರಿಸಲಾಗಿದ್ದು, ಉಳಿದ ನಾಲ್ವರು ಶವಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ದುರಂತದಲ್ಲಿ ಗಾಯಗೊಂಡ 20ಕ್ಕೂ ಹೆಚ್ಚು ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಅವರಲ್ಲಿ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದು, ಒಬ್ಬರು ಆರೋಗ್ಯ ಸ್ಥಿತಿ ಅತ್ಯಂತ ಚಿಂತಾ ಜನಕವಾಗಿದೆ ಎಂದು ತಿಳಿಸಿದರು.

Sponsored

ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ಸಲ ಹತ್ತು ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ಆರ್ಥಿಕ ನೆರವು ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಈ ವೇಳೆ ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಇಂದಿನ ಆಡಳಿತದ ನಿರ್ಲಕ್ಷ ಮತ್ತು ಅವ್ಯವಸ್ಥೆಯೇ ಇಂತಹ ದುರಂತ ಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಜನರು ಸುರಕ್ಷತೆಗೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಟ್ಟಡ ಕುಸಿತದ ಈ ದುರಂತ ಕೊಲ್ಕತ್ತಾದಲ್ಲಿ ಆತಂಕ ಸೃಷ್ಟಿಸಿದ್ದು, ನಗರದಲ್ಲಿನ ಕಟ್ಟಡಗಳ ಸುರಕ್ಷತೆ ಮತ್ತು ನಿಯಮ ಪಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಕೊಲ್ಕತ್ತಾ ಕಟ್ಟಡ ದುರಂತ - ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿದ ಸುವೆಂದು ಅಧಿಕಾರಿ, ಸರ್ಕಾರ ಬೆಂಬಲಕ್ಕೆ ನಿಲ್ಲಲಿದೆ ಭರವಸೆ :

Sponsored

ತರಾತರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಟ್ಟಡ ದುರಂತ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸುವೇಂದ್ರ ಅಧಿಕಾರಿ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ,"ಮೃತರ ಆತ್ಮಗಳಿಗೆ ಚಿರಶಾಂತಿ ಸಿಗಲಿ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

ಇದೇ ವೇಳೆ, ಸಂಕಷ್ಟದಲ್ಲಿರುವ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ನಿಲ್ಲಲಿದೆ ಎಂದು ಭರವಸೆ ನೀಡಿದ ಅವರು," ಈ ದುಃಖದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮೃತರ ಮತ್ತು ಗಾಯಾಳುಗಳ ಕುಟುಂಬಗಳ ಬೆಂಬಲಕ್ಕೆ ಸದಾ ಇರುತ್ತದೆ " ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರವು ದುರಂತದಲ್ಲಿ ಅಮೃತ ಪಟ್ಟವರ ಕುಟುಂಬಗಳಿಗೆ ಸಲ ಹತ್ತು ಲಕ್ಷ ಹಾಗೂ ಗಾಯಗೊಂಡವರಿಗೆ ತಲ ಒಂದು ಲಕ್ಷ ಆರ್ಥಿಕ ನೆರವು ಘೋಷಿಸಿದೆ.ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Sponsored

ಕಟ್ಟಡ ಕುಸಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಹಲವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ತನಿಖೆ ಮುಂದುವರೆದಿದ್ದು, ದುರಂತದ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

Also Read:

ವಿಶ್ವಕಪ್ ರಣರಂಗದಲ್ಲಿ ಭಾರತ vs ಬಾಂಗ್ಲಾದೇಶ!ಯಾರಿಗೆ ಜಯ?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online