BELAGAVI NEWS :
Krishi Thapanda: ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಉದ್ಯಮಿ ವೈಶಾಖ್ ನಿಧನ ಹೊಂದಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವೈಶಾಖ್ ಅವರು ಕೃಷಿ ತಾಪಂಡ ಅವರಿಗೆ ಕೊನೆಯದಾಗಿ ಸಂದೇಶ ಕಳುಹಿಸಿದ ಬಳಿಕ ಅವರ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವೈಶಾಖ್ ಅವರು ಉದ್ಯಮಿಯಾಗಿದ್ದು, ಪತ್ನಿ ಹಾಗೂ ತಂದೆ- ತಾಯಿಯನ್ನು ಅಗಲಿದ್ದಾರೆ. ಈ ದುರ್ಘಟನೆಯ ಬೆನ್ನಲ್ಲೇ ಅವರ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಪ್ರಕರಣದ ಸುತ್ತ ಹಲವು ಪ್ರಶ್ನೆಗಳು ಉದ್ಭವವಾಗಿದ್ದು, ವೈಶಾಖ್ ಅವರ ಸಾವಿಗೆ ಕಾರಣವಾದ ಸಂದರ್ಭಗಳು ಹಾಗೂ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವೇ ಘಟನೆಯ ನಿಖರ ಸತ್ಯಾಂಶ ಹೊರಬೀಳುವ ಸಾಧ್ಯತೆಯಿದೆ.
ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಉದ್ಯಮಿ ವೈಶಾಖ್ ನಿಧನ ಹೊಂದಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವರದಿಗಳ ಪ್ರಕಾರ, ವೈಶಾಖ್ ಅವರು ಕೃಷಿ ತಾಪಂಡ ಅವರಿಗೆ ಕೊನೆಯದಾಗಿ ಸಂದೇಶ ಕಳುಹಿಸಿದ ಬಳಿಕ ಅವರ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವೈಶಾಖ್ ಅವರಿಗೆ ಪತ್ನಿ, ತಂದೆ- ತಾಯಿ ಇದ್ದು, ಅವರ ಅಕಾಲಿಕ ನಿಧನ ಕುಟುಂಬವನ್ನು ಶೋಕದಲ್ಲಿ ಮುಳುಗಿಸಿದೆ. ಘಟನೆ ನಡೆದ ತಕ್ಷಣ ಕೃಷಿ ತಾಪಂಡ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಮೃತ ವೈಶಾಖ್ ಅವರ ಪತ್ನಿ ಮೇಘನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವೈಶಾಖ್ ಅವರ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅವರು ಕೃಷಿ ತಾಪಂಡ ಅವರ ಮನೆಯಲ್ಲಿ ಏಕೆ ಆತ್ಮಹತ್ಯೆ ಮಾಡಿಕೊಂಡರು? ಇದಕ್ಕೆ ಕಾರಣಗಳೇನು? ಎಂಬ ಅಂಶಗಳ ಬಗ್ಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ. ತನಿಖೆಯ ಬಳಿಕವೇ ಘಟನೆಯ ಹಿಂದಿನ ನಿಜಾಂಶ ಹೊರಬೀಳುವ ಸಾಧ್ಯತೆಯಿದೆ.
ಇದೇ ವೇಳೆ, ಕೃಷಿ ತಾಪಂಡ ಹಾಗೂ ಅರವಿಂದ್ ರೆಡ್ಡಿ ನಡುವಿನ ಹಿಂದಿನ ವಿವಾದದಲ್ಲೂ ವೈಶಾಖ್ ಬಂಧನಕೊಳ್ಳಗಾಗಿದ್ದರು ಎನ್ನಲಾಗಿದೆ. ಅಲ್ಲದೆ, ತಮ್ಮಿಂದ ಹಣ ದೋಚಲು ಯತ್ನಿಸಿದ್ದಾರೆ ಎಂದು ಅರವಿಂದ್ ರೆಡ್ಡಿ ದೂರು ದಾಖಲಿಸಿದ್ದರು ವರದಿಯಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವೈಶಾಖ ಸಾವಿನ ಪ್ರಕರಣ ಮತ್ತಷ್ಟು ಕುತೂಹಲ ಮತ್ತು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ ತನಿಖೆಯತ್ತ ಸಾರ್ವಜನಿಕರ ಗಮನ ಕೇಂದ್ರೀಕೃತವಾಗಿದೆ.
ವೈಶಾಖ್, ಗೆಳೆಯರೊಬ್ಬರು ಖಾಸಗಿ ಮಾಧ್ಯಮ ಒಂದರಲ್ಲಿ ಮಾತನಾಡಿದ್ದು, ವೈಶಾಖ್, ಖಿನ್ನತೆಗೆ ಜಾರುವ ವ್ಯಕ್ತಿಯಲ್ಲ. ವೈಶಾಖ್ ಧೈರ್ಯವಂತ, ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ನಂಬಲು ಅಗತ್ಯವಿಲ್ಲ ಎಂದಿದ್ದಾರೆ.
Also Read: