Belagavi News:
ವ್ಯಾಪಾರಿಗಳ ವಿರೋಧದ ನಡುವೆಯೂ ಫುಟ್ಪಾತ್ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ನಗರದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಫುಟ್ಪಾತ್ ಒತ್ತೂವರೆ ತೆರವು ಕಾರ್ಯಾಚರಣೆಗೆ ಕೆಲವು ಬೀದಿ ಬದಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಕುರಿತು ಖಡಕ್ ನೀಲುವು ವ್ಯಕ್ತಪಡಿಸಿದ್ದಾರೆ. ಪಾದಚಾರಿಗಳಿಗೆ ಮೀಸಲಾಗಿರುವ ಜಾಗವನ್ನು ಅತಿಕ್ರಮಣದಿಂದ ಮುಕ್ತಗೊಳಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಫುಟ್ಪಾತ್‌ಗಳ ಮೇಲೆ ಅಂಗಡಿಗಳು ಮತ್ತು ಇತರ ಅತಿಕ್ರಮಣಗಳು ಹೆಚ್ಚುತ್ತಿರುವುದರಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಹಿನ್ನಲೆಯಲ್ಲಿ ತೆರೆವು ಕಾರ್ಯಾಚರಣೆ ನಿರಂತರವಾಗಿ ಮುಂದುವರೆಯಲಿದೆ ಎಂದು ಸಚಿವರು ಹೇಳಿದ್ದಾರೆ.
ಅದೇ ವೇಳೆ, ಬಾಧಿತ ವ್ಯಾಪಾರಿಗಳ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಹಿಡಿಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸಾರ್ವಜನಿಕ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಯಾವುದೇ ತಡವಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಬೆಂಗಳೂರು ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ - ಜಿಬಿಎ ಅಧಿಕಾರಿಗಳು ಅಖಾಡಕ್ಕೆ, ಐದು ನಗರ ಪಾಲಿಕೆಗಳಲ್ಲಿ ಡ್ರೈವ್ :
ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಸೂಚನೆ ಮೇರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದು, ರಾಜಧಾನಿಯಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ.
ಜಿಬಿಎ ವ್ಯಾಪ್ತಿಯ ಎಲ್ಲಾ ಐದು ನಗರ ಪಾಲಿಕೆಗಳಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಏಕಕಾಲದಲ್ಲಿ ನಡೆಯುತ್ತಿದ್ದು, ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಫುಡ್ ಪಾತ್ ಮೇಲೆ ಹಾಕಲಾಗಿದ್ದ ಅಂಗಡಿಗಳು, ತತ್ಕಾಲಿಕ ಶೆಡ್ ಗಳು ಹಾಗೂ ಇತರ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸುವುದೇ ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫುಟ್ಪಾತ್ ಗಳಲ್ಲಿ ಅತಿಕ್ರಮಣ ಹೆಚ್ಚುತ್ತಿರುವ ಕಾರಣ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಿರಂತರ ಕಾರ್ಯಾಚರಣೆ ನಡೆಸಲು ಜಿಬಿಎ ಮುಂದಾಗಿದೆ. ಎಲ್ಲಾ ಪಾಲಿಕೆಗಳಲ್ಲಿ ಕ್ರಮಬದ್ಧವಾಗಿ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶಗಳಲ್ಲಿ ಒತ್ತುವರಿ ತೆರವು ಮುಂದುವರೆಯುವ ಸಾಧ್ಯತೆ ಇದೆ.
ಬೆಂಗಳೂರು ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮಾ - ಅಧಿಕಾರಿಗಳಿಗೆ ಬೀದಿ ವ್ಯಾಪಾರಿಗಳ ತೀವ್ರ ವಿರೋಧ :
ನಗರದಲ್ಲಿ ಫುಡ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಹೋಟೆಲ್ ಗಳು, ಕೆಫೆಗಳು ಹಾಗೂ ಸಣ್ಣ ಅಂಗಡಿಗಳಿಂದ ಹಿಡಿದು ಬೀದಿ ಬದಿ ವ್ಯಾಪಾರಿಗಳವರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಈ ವೇಳೆ ಹಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಫುಟ್ಪಾತ್ ಗಳನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದವರ ವಿರುದ್ಧ ಅಧಿಕಾರಿಗಳು ಚುರುಕು ಕ್ರಮ ಕೈಗೊಂಡಿದ್ದಾರೆ. ಜೆಸಿಬಿ ಮತ್ತು ಸಿಬ್ಬಂದಿ ನೆರವೇನಿಂದ ತಾತ್ಕಾಲಿಕ ಅಂಗಡಿಗಳು ಹಾಗೂ ಶಡ್ ಗಳನ್ನು ತೆರವುಗೊಳಿಸಲಾಗುತ್ತಿದೆ.
ಆದರೆ ಕಾರ್ಯಾಚರಣೆ ವೇಳೆ ಕೆಲವು ಸ್ಥಳಗಳಲ್ಲಿ ಹೈಡ್ರಾಮ ಸಂಭವಿಸಿದ್ದು, ಬೀದಿ ವ್ಯಾಪಾರಿಗಳು ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. "ಫುಟ್ಪಾತ್ ತೆರವು ಮಾಡಬೇಡಿ. ನೀವು ತೆಗೆದರು ಮತ್ತೆ ಇಲ್ಲೇ ವ್ಯಾಪಾರ ಮಾಡುತ್ತೇವೆ. ಈ ಸ್ಥಳ ಬಿಟ್ಟು ಹೋಗುವುದಿಲ್ಲ " ಎಂದು ಕೆಲ ವ್ಯಾಪಾರಿಗಳು ಹಠ ಹಿಡಿದಿದ್ದಾರೆ.
ಈ ಕಾರಣದಿಂದ ಕೆಲಕಾಲ ಸ್ಥಳದಲ್ಲಿ ತೀವ್ರ ವಾಗ್ವಾದ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸ್ಥಳದಲ್ಲೇ ಹಾಜರಿದ್ದು ಭದ್ರತೆ ಒದಗಿಸಿದ್ದಾರೆ.
ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ಸಂಚಾರ ಸುಗಮತೆ ಒತ್ತುವರಿ ತೆರವು ಅಗತ್ಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು, ಕಾರ್ಯಾಚರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಫುಟ್ಪಾತ್ ತೆರವು ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ - 'ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕ್ರಮ ' :
ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್ಪಾತ್ ಒತ್ತೂವರೆ ತೆರವು ಕಾರ್ಯಾಚರಣೆ ಕುರಿತು ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಈ ಕ್ರಮವನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅವರು ಮಾತನಾಡಿ, ಪುಟ್ ಪಾತ್ ಒತ್ತೂವರೆಯಿಂದ ನಾಗರಿಕರಿಗೆ ತೊಂದರೆ ಉಂಟಾಗುತ್ತಿದ್ದು, ಹಲವಡೆ ಅಪಘಾತಗಳು ಸಂಭವಿಸುತ್ತಿವೆ. ಈ ಕಾರಣದಿಂದಲೇ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಅಗತ್ಯ ಬಂದಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಒಟ್ಟು ಸುಮಾರು 15 ಕಿ.ಮೀ ಫುಟ್ಪಾತ್ ಇದ್ದರು, ಸರ್ಕಾರವು ಪ್ರಾಥಮಿಕವಾಗಿ ಸುಮಾರು 2,000 km ಪ್ರದೇಶವನ್ನು ಮಾತ್ರ ತೆರವುಗೊಳಿಸುವ ಯೋಜನೆ ಹೊಂದಿದೆ ಎಂದು ಅವರು ಹೇಳಿದ್ದಾರೆ. ಇದರಲ್ಲಿ ಕೂಡ ಹೆಚ್ಚು ಜನ ಸಂಚಾರ ಮಾಡುವ ಪ್ರಮುಖ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.
ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಗರದಲ್ಲಿ ಸಂಪೂರ್ಣವಾಗಿ ಅಲ್ಲ, ಆಯ್ತಾ ಹಾಗೂ ಪ್ರಮುಖ ಸ್ಥಳಗಳಲ್ಲಿ ಮಾತ್ರ ನಡೆಯುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳುಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಪ್ರದೇಶಗಳಲ್ಲಿ ಫುಡ್ ಪಾತ್ ಒತ್ತುವರಿ ಅಪಾಯಕಾರಿ ಆಗಿರುವುದರಿಂದ , ಸಾರ್ವಜನಿಕರೇ ಈ ತೆರವು ಕಾರ್ಯಾಚರಣೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.