belagavi news :
ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಅಂತ್ಯದ ಹಂತಕ್ಕೆ ತಲುಪಿರುವ ಸೂಚನೆಗಳು ಸಿಕ್ಕಿವೆ. ಎರಡು ದೇಶಗಳ ನಡುವಿನ ಶಾಂತಿ ಒಪ್ಪಂದವು ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಇರಾನ್ ಮೇಲಿನ ದಾಳಿಗಳನ್ನು ರದ್ದುಗೊಳಿಸು ಇರುವುದಾಗಿ ಅಮೇರಿಕಾ ಅಧ್ಯಕ್ಷರು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಶ್ವೇತ ಭವನದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ಒಪ್ಪಂದಕ್ಕೆ ಯುರೋಪ್ನಲ್ಲಿ ಈ ವಾರಾಂತ್ಯ ಸಹಿ ಹಾಕುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಮಹತ್ವದ ಸಭೆಯಲ್ಲಿ ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು ಶಾಂತಿ ಮಾತು ಕಥೆಗಳು ವಿಫಲವಾದ ಹಿನ್ನೆಲೆಯಲ್ಲಿ ಬುದುವಾರ ಉದ್ವಿಗ್ನತೆ ತೀವ್ರಗೊಂಡಿತ್ತು. ಅಮೆರಿಕ ಮತ್ತು ಇರಾನ್ ನಡುವಿನ ಪರಿಸ್ಥಿತಿ ಮತ್ತಷ್ಟು ಬಿಗುಡಾಯಿಸುವ ಸಾಧ್ಯತೆಗಳ ಬಗ್ಗೆ ಆತಂಕ ವ್ಯಕ್ತವಾಗಿತ್ತು. ಆದರೆ ಈಗ ಒಪ್ಪಂದದ ದಿಕ್ಕಿನಲ್ಲಿ ಮಹತ್ವದ ಪ್ರಗತಿ ಕಂಡು ಬಂದಿರುವುದರಿಂದ, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಕಡಿಮೆಯಾಗುವ ನಿರೀಕ್ಷೆ ಮೂಡಿದೆ.
ಟ್ರಂಪ್ ಅವರ ಈ ಘೋಷಣೆ ಜಾಗತಿಕ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಹಲವು ದೇಶಗಳು ಈ ಬೆಳವಣಿಗೆಯನ್ನು ಆಸಾದಾಯಕ ಹೆಜ್ಜೆಯಾಗಿ ನೋಡುತ್ತಿವೆ. ಯುರೋಪ್ ನಲ್ಲಿ ನಡೆಯಲಿರುವ ಸಭೆಯ ಬಳಿಕ ಒಪ್ಪಂದದ ಅಂತಿಮ ರೂಪ ಸ್ಪಷ್ಟವಾಗುವುದು ಸಾಧ್ಯತೆ ಇದೆ.
"ನಾವು ಇರಾನ್ ನೊಂದಿಗಿನ ಯುದ್ಧವನ್ನು ಇತ್ಯರ್ಥ ಪಡಿಸಿಕೊಂಡಿದ್ದೇವೆ. ಒಪ್ಪಂದದ ದಾಖಲೆಗಳು ಸಿದ್ಧವಾಗುತ್ತಿದ್ದು ಅಂತಿಮ ಹಂತದಲ್ಲಿವೆ. ನೋಡೋಣ. ಅದನ್ನು ಬಹಳ ಬೇಗನೆ ಮಾಡಬೇಕು" ಎಂದು ಟ್ರಂಪ್ ತಿಳಿಸಿದರು.
ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಆತಂಕದ ಹಂತ ತಲುಪಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆ ಎಂದು ನಡೆದಿದೆ.ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದದಿರಲು ಹಾಗೂ ಅವುಗಳನ್ನು ಖರೀದಿಸದಿರಲು ಇರಾನ್ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಒಪ್ಪಂದದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧ ನಿಗದಿಯಾಗಿದ್ದ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ರದ್ದುಗೊಳಿಸಿರುವುದಾಗಿ ಅವರು ಘೋಷಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟ್ರಂಪ್, "ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ನಡೆದ ಚರ್ಚೆಗಳು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಇರಾನ್ ವಿರುದ್ಧದ ಎಲ್ಲಾ ನಿಗದಿತ ದಾಳಿಗಳನ್ನು ರದ್ದುಗೊಳಿಸಿದ್ದೇನೆ" ಎಂದು ತಿಳಿಸಿದ್ದಾರೆ.
ಒಪ್ಪಂದದ ಪ್ರಮುಖ ಅಂಶವೆಂದರೆ, ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಿರುವುದು ಹಾಗೂ ಯಾವುದೇ ರೀತಿಯಲ್ಲಿ ಅದನ್ನು ಪಡೆಯದಿರುವುದು.ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಹಲವು ವಿಷಯಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಪರಮಾಣು ವಿವಾದಕ್ಕೆ ಪರಿಹಾರ ಸಿಗುವ ನಿರೀಕ್ಷೆ ಮೂಡಿದೆ.
ಟ್ರಂಪ್ ಅವರ ಪ್ರಕಾರ,ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಆರಂಭಿಸಿದ್ದ ಸೇನಾ ಕಾರ್ಯಾಚರಣೆಯ ಬಳಿಕ ಈಗ ಯುದ್ಧವನ್ನು ಕೊನೆಗೊಳಿಸುವ ಅಂತಿಮ ಒಪ್ಪಂದದ ಶರತುಗಳಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.ಒಪ್ಪಂದಕ್ಕೆ ಸಹಿ ಹಾಕುವ ಸ್ಥಳ ಮತ್ತು ಸಮಯವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆದಾಗ್ಯೂ,ಅಂತಿಮ ಒಪ್ಪಂದಕ್ಕೆ ಸಹಿ ಬೀಳುವವರೆಗೆ ಇರಾನ್ ವಿರುದ್ಧ ಅಮೆರಿಕಾದ ನೌಕ ದಿಗ್ಬಂದನ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಬೆಳವಣಿಗೆ ಜಾಗತಿಕ ರಾಜಕೀಯದಲ್ಲಿ ಮಹತ್ವದ ತಿರುಗು ಎಂದು ವಿಶ್ಲೇಷಿಸಲಾಗುತ್ತಿದ್ದು,ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇದು ನಿರ್ಣಾಯಕ ಹೆಜ್ಜೆಯಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇರಾನ್ ಮತ್ತು ಅಮೆರಿಕ ನಡುವಿನ ದೀರ್ಘಕಾಲದ ಸಂಘರ್ಷ ಅಂತ್ಯದ ಹಂತಕ್ಕೆ ತಲುಪಿರುವ ಸೂಚನೆಗಳು ದೊರಕಿವೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರಲು ಇರಾನ್ ಒಪ್ಪಿಕೊಂಡಿರುವ ಬೆನ್ನಲ್ಲಿ,ಇರಾನ್ ವಿರುದ್ಧ ನಿಗದಿಯಾಗಿದ್ದ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ರದ್ದುಗೊಳಿಸಿರುವುದಾಗಿ ಅಮೇರಿಕಾ ಅಧ್ಯಕ್ಷ ಡ್ರೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಆದರೆ ಈ ಘೋಷಣೆಗೆ ಸಂಬಂಧಿಸಿದಂತೆ ಇರಾನ್ ಸರ್ಕಾರದಿಂದ ತಕ್ಷಣದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ,ಹೀಗಾಗಿ ಒಪ್ಪಂದದ ಅಂತಿಮ ರೂಪ ಹಾಗೂ ಅದರ ಅನುಷ್ಠಾನದ ಕುರಿತು ಇನ್ನು ಸ್ಪಷ್ಟತೆ ದೊರಕಬೇಕಿದೆ.
ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆ ಆರಂಭಿಸಿದ್ದವು.ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಹಲವು ಪ್ರದೇಶಗಳಲ್ಲಿ ಪ್ರತಿ ದಾಳಿ ನಡೆಸಿತು. ಪರಿಣಾಮವಾಗಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿ, ಯುದ್ಧದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಯ ಮೇಲು ಗಂಭೀರ ಪರಿಣಾಮ ಬೀರಿತ್ತು. ಪ್ರಮುಖ ಸಾಗರ ಮಾರ್ಗಗಳು ಮತ್ತು ಇಂಧನ ಪೂರೈಕೆ ಸರಪಳಿಗಳ ಮೇಲೆ ಒತ್ತಡ ಹೆಚ್ಚಾಗಿ, ಹಲವು ದೇಶಗಳು ಆರ್ಥಿಕ ಸವಾಲುಗಳನ್ನು ಎದುರಿಸಿದ್ದವು. ಯುದ್ಧವನ್ನು ಕೊನೆಗೊಳಿಸಲು ಹಲವು ಸುತ್ತಿನ ಶಾಂತಿ ಮಾತುಕತೆಗಳು ನಡೆದಿದ್ದರೂ ಇದುವರೆಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿರಲಿಲ್ಲ.
ಈಗ ಯುರೋಪ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ ಇದೆ ಎಂದು ಟ್ರಂಪ್ ತಿಳಿಸಿದ್ದಾರೆ. ಒಪ್ಪಂದ ಯಶಸ್ವಿಯಾದರೆ,ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯತ್ತ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
Also Read:
ಉಚಿತ ಬಸ್ ಪಾಸ್ ಯೋಜನ ಘೋಷಣೆ : ವಿದ್ಯಾರ್ಥಿಗಳಿಗೆ ದೊಡ್ಡ ಸಿಹಿ ಸುದ್ದಿ