<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಬಿಹಾರದಲ್ಲಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್

ಬಿಹಾರದಲ್ಲಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್
Summary: Thousands of candidates took to the streets to protest against the delay in the teacher recruitment process in Bihar. The situation became tense and the police resorted to lathi-charge. The protesters expressed anger against the government and demanded that the recruitment be completed immediately.

belagavi news :

ಬಿಹಾರ ರಾಜಕೀಯದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಿ ಇನ್ನು ಒಂದು ದಿನವೂ ಕಳೆದಿಲ್ಲ. ಆದರೆ ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಶಿಕ್ಷಕರ ನೇಮಕಾತಿ ವಿಚಾರ ಭಾರಿ ಉದ್ವಿಗ್ನತೆಗೆ ಕಾರಣವಾಗಿದೆ. ನೇಮಕಾತಿ ಪರೀಕ್ಷೆಯ ಜಾಹೀರಾತಿಗಾಗಿ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳು ಇಂದು ಜೆಪಿ ಗೋಲಾಂಬರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಅಭ್ಯರ್ಥಿಗಳು ಸರಕಾರದ ವಿರುದ್ಧ ಘರ್ಷಣೆಗಳನ್ನು ಕೂಲಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣ ತಪ್ಪುತಿದ್ದಂತೆ ಪೊಲೀಸರು ಮಧ್ಯ ಪ್ರವೇಶಿಸಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆಯಿತು. ಬಳಿಕ ಪೊಲೀಸರು ಲಾಟಿಚಾರ್ಜ್ ನಡೆಸಿ ಪ್ರತಿಭಟನೆಯನ್ನು ಚದುರಿಸಿದರು.ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದು, ಘಟನೆ ಪಾಟ್ನಾದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಹಾರದಲ್ಲಿ ಶಿಕ್ಷಣ ನೇಮಕಾತಿ ಪರೀಕ್ಷೆ ಅಧಿಸೂಚನೆ ವಿಳಂಬವಾಗಿರುವುದನ್ನು ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. ಪಾಟ್ನಾದಲ್ಲಿ ಸಾವಿರಾರು ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಬಿಹಾರ್ ಸಾರ್ವಜನಿಕ ಸೇವಾ ಆಯೋಗ ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ಸಾಮೂಹಿಕ ಪ್ರತಿಭಟನೆ ನಡೆಸಿದರು.

Sponsored

ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳು ಮುಳಗಿದರೆ, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪೊಲೀಸರ ಕ್ರಮದಿಂದ ಪ್ರತಿಭಟನಾ ಕಾರರಲ್ಲಿ ಆಕ್ರೋಶ ಹೆಚ್ಚಾಗಿದ್ದು, ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬದ ವಿರುದ್ಧ ವಿದ್ಯಾರ್ಥಿಗಳು ತಮ್ಮ ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದ್ದಾರೆ.

ಏಪ್ರಿಲ್ ಮುಗಿದು ಮೇ ಎರಡನೇ ವಾರ ಆರಂಭವಾದರೂ ಅಧಿಕೃತ ನೇಮಕಾತಿ ಅಧಿಸೂಚನೆ ನಾನು ಬಂದಿಲ್ಲ ಪೋರ್ಟಲ್ ನಲ್ಲಿ ಪ್ರಕಟವಾಗದ ಹಿನ್ನೆಲೆ ಸಾವಿರಾರು ಅಭ್ಯರ್ಥಿಗಳು ಪಾಟ್ನಾ ಕಾಲೇಜು ಆವರಣದಲ್ಲಿ ಬಾರಿ ಪ್ರತಿಭಟನೆ ಆರಂಭಿಸಿದರು. ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಬಂಕರ್ ಗಂಜ್ ಹಾಗೂ ಮಚುವಾ ಟೋಲಿ ಮಾರ್ಗವಾಗಿ ಸಾಗುತ್ತಾ? ಜೆಪಿ ಗೋಲಾಂಬರ್ ಗೆ ತಲುಪಿತು. ಈ ವೇಳೆ ಅಭ್ಯರ್ಥಿಗಳು ಸರ್ಕಾರ ಮತ್ತು ಬಿಹಾರ್ ಸಾರ್ವಜನಿಕ ಸೇವೆ ಆಯೋಗ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಿ ಅಧಿಕೃತ ಅಧಿ ಸೂಚನೆ ಬಿಡುಗಡೆ ಮಾಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದು, ಪಾಟ್ನಾದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಶುಕ್ರವಾರ ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಮಾಹಿತಿ ಮತ್ತು ಅಧಿಸೂಚನೆಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಾವಿರಾರು ಅಭ್ಯರ್ಥಿಗಳು ಒಟ್ಟುಗೂಡಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಮಧ್ಯ ಪ್ರವೇಶಿಸಿದರು. ಬಳಿಕ ಜನ ಸಮೂಹವನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಲಾಠಿಚಾರ್ಜ್ ಹಲವರು ಸ್ಥಳದಿಂದ ಓಡಿಹೋಗಿದ್ದು, ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, BPSCತಕ್ಷಣ ಅಧಿಕೃತ ಅಧಿಸೂಚನೆ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

Also Read:

Sponsored

ಬಿ.ಎಲ್.ಸಂತೋಷ್ ಪೋಸ್ಟ್ ನಂತರ ತಮಿಳುನಾಡು ರಾಜಕೀಯದಲ್ಲಿ ಗೊಂದಲ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online