BELAGAVI NEWS :
ಆಫ್ಘಾನಿಸ್ತಾನ ವಿರುದ್ಧ ಜೂನ್ 13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಬಾರಿ ಹಿನ್ನಡೆ ಎದುರಾಗಿದೆ.ಭಾರತೀಯ ತಂಡ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಮಾಡಿದೆ .
ವರದಿ ಪ್ರಕಾರ,ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು,ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವುದು ಅನುಮಾನವಾಗಿದೆ. ಈಗಾಗಲೇ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದರು,ಗಾಯದ ಕಾರಣದಿಂದ ಅವರು ಪಂದ್ಯಗಳಿಂದ ದೂರ ಉಳಿಯುವ ಸಾಧ್ಯತೆ ಹೆಚ್ಚಿದೆ.
ಒಂದು ವೇಳೆ ವಿರಾಟ್ ಕೊಹ್ಲಿ ಸರಣಿಯಿಂದ ಹೊರಗುಳಿದರೆ,ಬಿಸಿಸಿಐ ಅವರ ಬದಲಿಕೆಗೆ ಮತ್ತೊಂದು ಆಟಗಾರನನ್ನು ತಂಡಕ್ಕೆ ಸೇರಿಸಬೇಕಾಗುತ್ತದೆ.ಆದರೆ ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ವಿರಾಟ್ ಕೊಹ್ಲಿಯ ಅನುಪಸ್ಥಿತಿ ತಂಡದ ಬ್ಯಾಟಿಂಗ್ ಬಲದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.ಕೊಹ್ಲಿ ಸಂಪೂರ್ಣವಾಗಿ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ? ಬಿಸಿಸಿಐ ಯಾವ ನಿರ್ಧಾರ ಕೈಗೊಳ್ಳಲಿದೆ? ಎಂಬುದನ್ನು ಕಾದು ನೋಡಬೇಕಾಗಿದೆ.
ಐಪಿಎಲ್ 2026ರ ಫೈನಲ್ ಪಂದ್ಯದ ವೇಳೆ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಅಂತಿಮ ಪಂದ್ಯದ ವಿರಾಮದ ಸಮಯದಲ್ಲಿ ವಿರಾಟ್ ಕೊಹ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಂಡುಬಂದಿದ್ದವು.ಅವರಿಗೆ ತರಬೇತಿ ಸಮಯದಲ್ಲಿ ಗಾಯವಾಗಿದಯೇ ಅಥವಾ ಪಂದ್ಯ ವೇಳೆ ಗಾಯಗೊಂಡಿದ್ದಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.ಒಂದು ವೇಳೆ ಕೊಹ್ಲಿ ಸರಣಿಯಿಂದ ಹೊರಗುಳಿದರೆ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಿದೆ ಎಂದು ತಿಳಿಯಲು ಫ್ಯಾನ್ಸ್ ಕಾತುರರಾಗಿದ್ದಾರೆ.
ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾದ ಚಿಂತೆ ಮತ್ತಷ್ಟು ಹೆಚ್ಚಾಗಿದೆ.ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಗೆ ಉಳಿಯುವ ಸಾಧ್ಯತೆ ಇದ್ದರೆ,ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆಯೂ ಇನ್ನು ಸ್ಪಷ್ಟತೆ ಸಿಕ್ಕಿಲ್ಲ.
ಆಯ್ಕೆ ಸಮಿತಿ ಈಗಾಗಲೇ ರೋಹಿತ್ ಶರ್ಮ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದರು,ಅವರ ಫಿಟ್ನೆಸ್ ಪರೀಕ್ಷೆಗಳ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದಾಗಿ ತಿಳಿಸಿದೆ.ಐಪಿಎಲ್ ೨೦೨೬ರ ಕೊನೆಯ ಹಂತದಲ್ಲಿ ರೋಹಿತ್ ಹಲವು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದು,ಕೆಲ ಪಂದ್ಯಗಳಲ್ಲಿ ಕೇವಲ 'ಇಂಪ್ಯಾಕ್ಟ್ ಪ್ಲೇಯರ್' ಆಗಿ ಮಾತ್ರ ಕಾಣಿಸಿಕೊಂಡಿದ್ದರು.ಇದರಿಂದ ಅವರ ಸಂಪೂರ್ಣ ಫಿಟ್ನೆಸ್ ಬಗ್ಗೆ ಪ್ರಶ್ನೆಗಳು ಮೂಡಿವೆ.
ವಿರಾಟ್ ಕೊಹ್ಲಿ ಇತ್ತೀಚಿನ ಐಪಿಎಲ್ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು.16 ಪಂದ್ಯಗಳಲ್ಲಿ 675 ರನ್ ಗಳಿಸಿದ್ದ ವಿರಾಟ್ 1 ಶತಕ ಸೇರಿದಂತೆ ಹಲವು ನಿರ್ಣಾಯಕ ಇನ್ನಿಂಗ್ಸ್ ಗಳನ್ನು ಆಡಿದರು.ಫೈನಲ್ ಪಂದ್ಯದಲ್ಲಿ ಅಜಯ 75ರಂಗಳ ಸಿಡಿಲಬ್ಬರದ ಇನ್ನಿಂಗ್ಸ್ ಮೂಲಕ ತಂಡಕ್ಕೆ ಎರಡನೇ ಪ್ರಶಸ್ತಿ ತಂದುಕೊಟ್ಟ 'ಪಂದ್ಯ ಶ್ರೇಷ್ಠ' ಪ್ರಶಸ್ತಿಗೂ ಬಾಜನರಾಗಿದ್ದರು.
ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ತೋರಿದ ನಂತರ ಅಭಿಮಾನಿಗಳು ವಿರಾಟ್ ಕೊಹ್ಲಿ ಅವರನ್ನು ಶೀಘ್ರದಲ್ಲಿ ಭಾರತೀಯ ಜೇರ್ಸಿ ಯಲ್ಲಿ ಮತ್ತೆ ಕಾಣುವ ನಿರೀಕ್ಷೆಯಲ್ಲಿದ್ದ ರು.ಆದರೆ ಇದೀಗ ಗಾಯದ ಕಾರಣದಿಂದ ಅಪಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಆಡದೆ ಇರುವ ಸಾಧ್ಯತೆಯ ವರದಿಯಾಗಿದೆ.
ಟೆಸ್ಟ್ ಹಾಗೂ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್ ಗೆ ಈಗಾಗಲೇ ವಿದಾಯ ಹೇಳಿರುವ ವಿರಾಟ್ ಕೊಹ್ಲಿ,ಪ್ರಸ್ತುತ ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.ಹೀಗಾಗಿ ಅವರ ಅನುಪಸ್ಥಿತಿ ಭಾರತೀಯ ತಂಡಕ್ಕೆ ದೊಡ್ಡ ಹೊಡೆತವಾಗುವ ಸಾಧ್ಯತೆ ಇದೆ.ಇದೀಗ ಅಭಿಮಾನಿಗಳ ಚಿತ್ತ ಬಿಸಿಸಿಐ ನ ಅಧಿಕೃತ ಪ್ರಕಟಣೆ ಮತ್ತು ಇಬ್ಬರು ಹಿರಿಯ ಆಟಗಾರರ ಫಿಟ್ನೆಸ್ ವರದಿಗಳತ್ತ ನೆಟ್ಟಿದೆ.
Also Read:
ಜಿಲ್ಲೆಗಳ ಸಮಸ್ಯೆಗಳ ಪರಿಹಾರಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್: 25 ದಿನಗಳಲ್ಲಿ ವರದಿ ಸಲ್ಲಿಸಲು ಆದೇಶ