belagavi news :
ಬೆಂಗಳೂರಿನಲ್ಲಿ ಪಡಿತರ ಅಕ್ಕಿ ಹಾಗೂ ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿರುವ ಬಾರಿ ಅಕ್ರಮವನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ. ಲೋಕಾಯುಕ್ತ ನಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣಿಂದ್ರ ಮತ್ತು ಬಿ ವೀರಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ 22 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐದು ಸೇರಿ ಒಟ್ಟು 27 ಆಹಾರ ಸರಬರಾಜು ನಿಗಮ ಗೋದಾಮುಗಳ ಮೇಲೆ ಏಕಾಏಕಿ ದಾರಿ ನಡೆಸಲಾಯಿತು.
ಪರಿಶೀಲನೆ ವೇಳೆ ಶಾಂತಿನಗರ, ಬಸವನಗುಡಿ ಸೇರಿದಂತೆ ಹಲವು ಬೋಧಮ್ಮುಗಳಲ್ಲಿ ಸಾವಿರಾರು ಮೂಟೆ ಪಡಿತರ ಅಕ್ಕಿ ಮತ್ತು ರಾಗಿ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ದಾಖಲೆಗಳು ಮತ್ತು ದಾಸ್ತಾನು ಪ್ರಮಾಣದಲ್ಲಿ ಬಾರಿ ವ್ಯತ್ಯಾಸ ಕಂಡು ಬಂದಿದ್ದು, ಅಧಿಕಾರಿಗಳ ನಿರ್ಲಕ್ಷ ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಗಂಭೀರ ಅನುಮಾನಗಳು ಮೂಡಿವೆ.
ದಾಳಿ ಬೇರೆ ಅನೇಕ ಗೋಧಾಮಗಳಲ್ಲಿ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗದಿರುವುದು ತಿಳಿದುಬಂದಿದೆ. ಜೊತೆಗೆ ನಗದು ವಹಿವಾಟಿನಲ್ಲಿ ಅಕ್ರಮ, ದಾಖಲೆ ನಿರ್ವಹಣೆಯಲ್ಲಿ ಲೋಕ ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಹಮಾಲಿ ಕಾರ್ಮಿಕರಿಗೆ ಕಡ್ಡಾಯವಾಗಿ ನೀಡಬೇಕಾಗಿದ್ದ ಜೀವವಿಮೆ ಮತ್ತು ಇ .ಎಸ್.ಐ ಸೌಲಭ್ಯಗಳನ್ನು ನೀಡದೆ ವಂಚಿಸಿರುವುದು ತನಿಕೆಯಲ್ಲಿ ತಿಳಿದು ಬಂದಿದೆ.
ಬಡವರಿಗಾಗಿ ಮೀಸಲಾದ ಪಡಿತರ ಧಾನ್ಯಗಳ ಸಂಗ್ರಹಣೆ ಮತ್ತು ವಿತರಣೆಯಲ್ಲಿ ನಡೆಯುತ್ತಿರುವ ಈ ಅಕ್ರಮ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಸಂಬಂಧಿತ ದಾಖಲೆಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದು, ತಪ್ಪಿತಸ್ಥರ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಬಡವರ ಅನ್ನಕ್ಕೆ ಕನ್ನ ಹಾಕಿದವರ ವಿರುದ್ಧ ಲೋಕಾಯುಕ್ತ ಈ ಕಾರ್ಯಾಚರಣೆ ರಾಜ್ಯದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಆಹಾರಧಾನ್ಯ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮಗಳ ಕರಾಳ ಮುಖವನ್ನು ಮತ್ತೊಮ್ಮೆ ಬಯಲಿಗೆ ತಂದಿದೆ.
ಶಾಂತಿನಗರದ ಆಹಾರ ಇಲಾಖೆ ಗೋಡೌನ್:
ಶಾಂತಿನಗರದ ಗೋದಾಮಿನಲ್ಲಿ ಪರಿಶೀಲನೆ ನಡೆಸಿದಾಗ ದಾಖಲೆಗಳಲ್ಲಿಯೂ ಅಲ್ಲಿನ ದಾಸ್ತಾನಿಗೂ ಬಾರಿ ವ್ಯತ್ಯಾಸ ಕಂಡು ಬಂದಿದೆ. ಇಲ್ಲಿ 50 ಕೆಜಿಯ ಸುಮಾರು 1,130 ಅಕ್ಕಿ ಮೂಟೆಗಳಿಗೂ ನೀಡಿದ ಲೆಕ್ಕಕ್ಕೂ ಸಂಬಂಧವೇ ಇಲ್ಲ. ಈ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಯನ್ನು ಕೇಳಿದರೆ ಅವರ ಬಳಿ ಉತ್ತರವೇ ಇಲ್ಲ. ಅಷ್ಟೇ ಅಲ್ಲದೆ, ಗೋದಾಮಿನಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದ ಐದು ಜನ ಹಮಾಲಿ ಕಾರ್ಮಿಕರಿಗೆ ಯಾವುದೇ ಜೀವವಿಮೆ ಸೌಲಭ್ಯ ಕಲ್ಪಿಸಲಾಗಿಲ್ಲ ಎಂಬುವುದು ಬೆಳಕಿಗೆ ಬಂದಿದೆ. ಈ ಮೂಲಕ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯ ಲೋಕ ಹೆಸಗಿರುವುದು ಸ್ಪಷ್ಟವಾಗಿದೆ.
ಬೆಂಗಳೂರು ದಕ್ಷಿಣ ಬೊಮ್ಮನಹಳ್ಳಿ ಸಗಟು ಮಳಿಗೆಯ ಮೇಲೆ ಲೋಕಾಯುಕ್ತ ದಾಳಿಗಳು ನಡೆಸಿದ ವೇಳೆ ಹಲವು ಗಂಭೀರ ಅಕ್ರಮಗಳು ಬೆಳಕಿಗೆ ಬಂದಿದೆ. ಬದಾಮಿನ ಉಸ್ತುವಾರಿ ಅಧಿಕಾರಿ ಅಚ್ಯುತ್ ಯಾವುದೇ ಪೂರ್ವ ಮಾಹಿತಿ ನೀಡದೆ ಅನಧಿಕೃತವಾಗಿ ಗೈರು ಹಾಜರಾಗಿರುವುದು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ಬಂದಿದೆ.
ಸ್ಥಳದಲ್ಲಿದ್ದ ಸಿಬ್ಬಂದಿ ಶಿವಲಿಂಗಯ್ಯ ಅವರು ಬದಾಮಿಗೆ ಸ್ವೀಕರಿಸಲಾದ ಅಕ್ಕಿ ಮೂಟೆಗಳ ವಿವರಗಳನ್ನು ಸಮರ್ಪಕವಾಗಿ ನೀಡಲು ವಿಫಲರಾಗಿದ್ದು, ದಾಖಲೆಗಳ ನಿರ್ವಹಣೆಯಲ್ಲಿಯೂ ಲೋಪ ಕಂಡು ಬಂದಿದೆ. ಇದೇ ವೇಳೆ ನಿಯಮಬಾಹಿರವಾಗಿ ಲಾರಿ ಒಂದಕ್ಕೆ ಸುಮಾರು 25 ಟನ್ ಅಕ್ಕಿ ಮೂಟೆಗಳನ್ನು ಲೋಡ್ ಮಾಡಲಾಗುತಿತ್ತು ಎಂಬುದು ಲೋಕಾಯುಕ್ತ ಪರಿಶೀಲನೆಯಲ್ಲಿ ಪತ್ತೆಯಾಗಿದೆ.
ಇದಕ್ಕಿಂತಲೂ ಆತಂಕಕಾರಿ ಸಂಗತಿ ಎಂದರೆ, ಗೋದಾಮಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 10 ಮಂದಿ ಹಮಾಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾದ ಜೀವವಿಮೆ ಸೌಲಭ್ಯವೇ ದೊರೆಯುತ್ತಿರಲಿಲ್ಲ. ಕಾರ್ಮಿಕರ ಸುರಕ್ಷತೆ ಹಾಗೂ ಕಲ್ಯಾಣದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿದ್ದಾರೆ.
ಲೋಕಾಯುಕ್ತ ದಾಳಿಗಳು ಸಂಬಂಧಿತ ಅಧಿಕಾರಿಗಳನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದು, ಅಕ್ಕಿ ಸಂಗ್ರಹಣೆ ಮತ್ತು ಸಾಗಾಟದಲ್ಲಿ ನಡೆದಿರುವ ಅಕ್ರಮಗಳ ಕುರಿತು ವಿವರವಾದ ವರದಿ ಸಿದ್ಧಪಡಿಸಿದ್ದಾರೆ. ಬಡವರ ಪಾಲಿನ ಆಹಾರ ಧಾನ್ಯಗಳ ನಿರ್ವಹಣೆಯಲ್ಲಿ ನಡೆಯುತ್ತಿರುವ ಈ ಲೋಕಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಅಕ್ವೇಶಕ್ಕೆ ಕಾರಣವಾಗಿದೆ.
ಬಸವನಗುಡಿ ಗೋಡೌನ್:
ಬಸವನಗುಡಿ ಗೋದಾಮಿನಲ್ಲಿ ಅಧಿಕಾರಿಗಳು ನೀಡಿದ ಲಿಖಿತ ಲೆಕ್ಕಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದ ಅಕ್ಕಿ ಮೂಟೆಗಳು ಇರುವುದು ಪತ್ತೆಯಾಗಿದೆ. ದಾಳಿಯ ವೇಳೆ ಅಧಿಕಾರಿಗಳ ಬಳಿ ಇದ್ದ ನಗರಿಗೆ ಸಂಬಂಧಿಸಿದಂತೆ ಯಾವುದೇ ಸರಿಯಾದ ದಾಖಲೆ ಅಥವಾ ಸಮಜಾಯಿಷಿ ನೀಡಿಲ್ಲ. ಅದರೊಂದಿಗೆ ಗೋದಾಮಿನ ಹಮಾಲಿ ಕಾರ್ಮಿಕರಿಗೆ ಕನಿಷ್ಠ ಅಗತ್ಯಗಳಾದ ಜೀವವಿಮೆ, ಇಎಸ್ಐ ಹಾಗೂ ಪಿಎಫ್ ಸೌಲಭ್ಯಗಳನ್ನು ನೀಡದೇ ವಂಚಿಸಿರುವುದು ತಿಳಿದುಬಂದಿದೆ.
ಹನುಮಂತನಗರದ ಆಹಾರ ಗೋದಾಮಿನ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪಡಿತರ ಧಾನ್ಯಗಳ ಸಂಗ್ರಹಣೆ ಮತ್ತು ನಿರ್ವಹಣೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ಗೋದಾಮಿನ ರಿಜಿಸ್ಟರ್ ಗಳು ಮತ್ತು ದಾಸ್ತಾನು ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸರ್ಕಾರಿ ದಾಖಲೆಗಳಲ್ಲಿ ನಮೂದಿಸಲಾಗಿದ್ದ ಅಕ್ಕಿ ಹಾಗೂ ರಾಗಿ ಪ್ರಮಾಣ ಮತ್ತು ವಾಸ್ತವಿಕ ದಾಸ್ತಾನು ನಡುವೆ ಬಾರಿ ವ್ಯತ್ಯಾಸ ಕಂಡುಬಂದಿದೆ.
ದಾಖಲೆಗಳ ಪ್ರಕಾರ ಗೋದಾಮಿನಲ್ಲಿ ಇರಬೇಕಿದ್ದ ಸಾವಿರಾರು ಮೂಟೆಗಳ ಅಕ್ಕಿ ಮತ್ತು ರಾಗಿ ವಾಸ್ತವವಾಗಿ ಲಭ್ಯವಾಗಿರಲಿಲ್ಲ. ಇದರಿಂದ ಪಡಿತರ ಧಾನ್ಯಗಳ ದುರ್ಬಳಕೆ ಅಥವಾ ಅಕ್ರಮ ಸಾಗಾಟ ನಡೆದಿರುವ ಸಾಧ್ಯತೆ ದೃಢಪಟ್ಟಿದ್ದು, ಲೋಕಾಯುಕ್ತ ಅಧಿಕಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಇದರ ಜೊತೆಗೆ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಹಮಾಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾದ ಜೀವವಿಮೆ, ಇಎಸ್ಐ ಮತ್ತು ಪಿಎಫ್ ಸೌಲಭ್ಯಗಳನ್ನು ನೀಡದೆ ಶೋಷಣೆ ಮಾಡಲಾಗುತ್ತಿತ್ತು ಎಂಬ ಸಂಗತಿಯೂ ದಾಳಿ ವೇಳೆ ತಿಳಿದು ಬಂದಿದೆ. ಕಾರ್ಮಿಕರ ಹಕ್ಕುಗಳ ಉಲ್ಲಂಘನೆ ಹಾಗೂ ಕಲ್ಯಾಣ ಕ್ರಮಗಳ ನಿರ್ಲಕ್ಷವು ಅಧಿಕಾರಿಗಳ ವಿರುದ್ಧ ಮತ್ತೊಂದು ಗಂಭೀರ ಆರೋಪವಾಗಿ ಕಂಡುಬಂದಿದೆ.
ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು ಮತ್ತು ದಾಸ್ತಾನುಗಳ ನಡುವಿನ ವ್ಯತ್ಯಾಸದ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದು, ಕಾರ್ಮಿಕರ ಶೋಷಣೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.
Also Read: