<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಜಮೀರ್ ವಿರುದ್ಧ ಲೋಕಾಯುಕ್ತಕ್ಕೆ ಹಿನ್ನಡೆ; ಪ್ರಾಸಿಕ್ಯೂಷನ್ ಅನುಮತಿ ಮನವಿ ರಾಜ್ಯಪಾಲರಿಂದ ತಿರಸ್ಕಾರ

ಜಮೀರ್ ವಿರುದ್ಧ ಲೋಕಾಯುಕ್ತಕ್ಕೆ ಹಿನ್ನಡೆ; ಪ್ರಾಸಿಕ್ಯೂಷನ್ ಅನುಮತಿ ಮನವಿ ರಾಜ್ಯಪಾಲರಿಂದ ತಿರಸ್ಕಾರ
Summary: The Governor has rejected the plea filed by the Lokayukta seeking permission for prosecution against Housing Minister Zameer Ahmed Khan. Know the background to this decision, details of the case, Lokayukta's argument and further legal developments here.

belagavi news :

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ಕಾನೂನಾತ್ಮಕ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದು, ಸಂಬಂಧಿತ ಕಡತವನ್ನು ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐಎಂಎ (IMA) ಹಗರಣ ಹಾಗೂ ಆಕ್ರಮ ಆಸ್ತಿಗಳಿಗೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ಮತ್ತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಪ್ರಕರಣದ ದಾಖಲೆಗಳು ಹಾಗೂ ಕಾನೂನು ಅಂಶಗಳನ್ನು ಪರಿಶೀಲಿಸಿದ ಬಳಿಕ ಈ ಹಂತದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ಈ ನಿರ್ಧಾರದಿಂದ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ಸಿಕ್ಕಂತಾಗಿದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಕುತೂಹಲ ಮೂಡಿದೆ. ತಾಂತ್ರಿಕ ಮತ್ತು ಕಾನೂನಾತ್ಮಕ ಅಂಶಗಳನ್ನು ಸರಿಪಡಿಸಿದ ಬಳಿಕ ಲೋಕಾಯುಕ್ತ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಯೂ ಇದೆ ಎಂದು ಕಾನೂನು ವಲಯದಲ್ಲಿ ಚರ್ಚೆಯಾಗುತ್ತಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಮುಂದಿನ ಹಂತದಲ್ಲಿ ಲೋಕಾಯುಕ್ತ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ .

ರಾಜ್ಯಪಾಲರ ಈ ತೀರ್ಮಾನವು ರಾಜ್ಯ ರಾಜಕೀಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ದೊರೆತಿರುವ ಈ ಕಾನೂನಾತ್ಮಕ ನಿರಾಳತೆ ಮಹತ್ವ ಪಡೆದುಕೊಂಡಿದೆ.

ಲೋಕಾಯುಕ್ತ ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಮನವಿಯನ್ನು ರಾಜ್ಯಪಾಲರು ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ವಾಪಸ್ ಕಳುಹಿಸಿರುವುದರಿಂದ, ಜಮೀರ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇಂದು ಪ್ರಕರಣದ ಅಂತಿಮ ತೀರ್ಪಲ್ಲ. ಅಗತ್ಯ ಕಾನೂನು ಮತ್ತು ತಾಂತ್ರಿಕ ಅಂಶಗಳನ್ನು ಸರಿಪಡಿಸಿದ ಬಳಿಕ ಲೋಕಾಯುಕ್ತ ಮತ್ತೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವ ಅವಕಾಶವಿದೆ ಎಂಬ ಅಭಿಪ್ರಾಯವೂ ಕೇಳಿ ಬರುತ್ತಿದೆ.

ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ರಾಜಕೀಯ ಮತ್ತು ಕಾನೂನು ಎರಡು ವಲಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online