<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಕನ್ನಡ ಕಡ್ಡಾಯ ಆದೇಶಕ್ಕೆ ಎಂಇಎಸ್ ಆಕ್ರೋಶ : ಬೆಳಗಾವಿಯಲ್ಲಿ ಉದ್ವಿಗ್ನತೆ

ಕನ್ನಡ ಕಡ್ಡಾಯ ಆದೇಶಕ್ಕೆ ಎಂಇಎಸ್ ಆಕ್ರೋಶ : ಬೆಳಗಾವಿಯಲ್ಲಿ ಉದ್ವಿಗ್ನತೆ
Summary: MES has once again expressed its anger against the mandatory Kannada order in Belgaum, creating a tense situation in the city. There is a heated debate going on locally regarding this incident.

Belagavi News:

ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಮತ್ತು ಉದ್ಧಟತನ ಪ್ರದರ್ಶಿಸಿದ್ದು, ಕನ್ನಡ ಕಡ್ಡಾಯ ಆದೇಶದ ವಿರುದ್ಧ ಪ್ರತಿಭಟನೆ ನಡೆಸಿ ಸರ್ಕಾರದ ಆದೇಶ ಪತ್ರವನ್ನು ಹರಿದು ಹಾಕಿದ ಘಟನೆ ನಡೆದಿದೆ. ಪೊಲೀಸರ ಸಮ್ಮುಖದಲ್ಲಿ ನಡೆದ ಈ ಘಟನೆ ನಗರದಲ್ಲಿ ಉದ್ವಿಗ್ನತೆ ಮೂಡಿಸಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂಇಎಸ್ ಕಾರ್ಯಕರ್ತರು ಸರ್ಕಾರದ ಕನ್ನಡ ಕಡ್ಡಾಯ ಆದೇಶವನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಾರ್ಯಕರ್ತರು ನೇರವಾಗಿ ಆದೇಶ ಪತ್ರಗಳನ್ನು ಹರಿದು ಹಾಕಿ ತಮ್ಮ ವಿರೋಧಿಗವನ್ನು ತೀವ್ರವಾಗಿ ದಾಖಲಿಸಿದರು ಎಂದು ತಿಳಿದುಬಂದಿದೆ.

ಇದೇ ವೇಳೆ, ಮರಾಠಿ ಭಾಷೆಯಲ್ಲಿ ನಾಮಫಲಕ ಹಾಗೂ ಸರ್ಕಾರಿ ದಾಖಲೆಗಳನ್ನು ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Sponsored

ಎಂಇಎಸ್ ಕಾರ್ಯಕರ್ತರ ಹುಂಡಾಟಿಕೆಯನ್ನು ಖಂಡಿಸಿದ ಕರವೇ ಕಾರ್ಯಕರ್ತರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳು ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎಬ್ಬಿಸುತ್ತಿದ್ದು, ಪೊಲೀಸರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ - ಕನ್ನಡ ಕಡ್ಡಾಯ ಆದೇಶ ಪ್ರತಿಯನ್ನು ಹರಿದು ಹಾಕಿ ಘೋಷಣೆ - ಉದ್ವಿಗ್ನ ಪರಿಸ್ಥಿತಿ :

ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಮತ್ತೆ ಉದ್ದಟತನ ಪ್ರದರ್ಶಿಸಿದ್ದು, ಕನ್ನಡ ಕಡ್ಡಾಯ ಆದೇಶದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆಭರಣದಲ್ಲಿ ನಡೆದ ಈ ಘಟನೆ ನಗರದಲ್ಲಿ ಉದ್ವಿಗ್ನತೆಯ ಉಂಟು ಮಾಡಿದೆ.

Sponsored

ಡಿಸಿ ಕಚೇರಿ ಮುಂದೆ ಜಮಾವಣೆಗೊಂಡ ಎಂಇಎಸ್ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲಿ ಸರ್ಕಾರದ ಕನ್ನಡ ಕಡ್ಡಾಯ ಆದೇಶ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು ಘೋಷಣೆಗಳನ್ನು ಕೂಗಿ ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು "ಕರ್ನಾಟಕ ಸರ್ಕಾರದ ದಾದಾಗಿರಿ ನಡೆಯುವುದಿಲ್ಲ" ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ "ಬೆಳಗಾವಿ, ಖಾನಾಪುರ್, ನಿಪ್ಪಾಣಿ, ಕಾರವಾರ, ಬೀದರ್ ಹಾಗೂ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ" ಎಂಬ ವಿವಾದಾತ್ಮಕ ಘೋಷಣೆಗಳನ್ನು ಕೂಗಿದ ಘಟನೆ ತಳಿಯವಾಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಕಡ್ಡಾಯ ನೀತಿಯನ್ನು ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಮತ್ತೆ ಕ್ಯಾತೆ ತೆಗೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಸರ್ಕಾರದ ಆದೇಶ ಪ್ರತಿಯನ್ನು ಹರಿದು ಹಾಕಿ ತಮ್ಮ ವಿರೋಧವನ್ನು ತೀವ್ರವಾಗಿ ದಾಖಲಿಸಿದ್ದಾರೆ. ಈ ವೇಳೆ ಪೊಲೀಸರು ಸ್ಥಳದಲ್ಲೇ ಇದ್ದರೂ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಕರವೇ(ಕರ್ನಾಟಕ ರಕ್ಷಣಾ ವೇದಿಕೆ) ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಎಂಇಎಸ್ ಕಾರ್ಯಕರ್ತರನ್ನು ಬಂಧಿಸಬೇಕು ಹಾಗೂ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರವೇ ಒತ್ತಾಯಿಸಿದೆ.

Sponsored

ಬೆಳಗಾವಿಯಲ್ಲಿ ಈ ಘಟನೆ ನಂತರ ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ನಿಗಾದಿಂದ ಗಮನಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ವಿರುದ್ಧ ಕರವೆ ಆಕ್ರೋಶ - ಪುಂಡರ ಬಂಧನಕ್ಕೆ ಒತ್ತಾಯ, ಎಸ್ ಪಿ ಕಚೇರಿಯಿಂದ ಬಿಸಿ ಕಚೇರಿ ವರೆಗೆ ಪ್ರತಿಭಟನೆ:

ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಹರಿದು ಹಾಕಿ ಎಂಇಎಸ್ ಕಾರ್ಯಕರ್ತರ ವಿರುದ್ಧ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತೀವ್ರ ಕೃಷ ವ್ಯಕ್ತಪಡಿಸಿದ್ದಾರೆ. ಕರವೇ ರಾಜ್ಯದ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನಗರದ ಎಸ್ ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಎಂಇಎಸ್ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇತ್ತೀಚೆಗೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾರ್ಯಕರ್ತರು ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಹರಿದು ಹಾಕಿದ್ದು, ಈ ನಡೆ ಕನ್ನಡಿಗರ ಭಾವನೆಗಳಿಗೆ ದಕ್ಕೆ ತಂದಿದೆ ಎಂದು ಕರವೇ ಆರೋಪಿಸಿದೆ. ಕನ್ನಡ ಭಾಷೆ ಮತ್ತು ರಾಜ್ಯದ ಗೌರವಕ್ಕೆ ಅವಮಾನ ಮಾಡುವ ಯಾವುದೇ ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Sponsored

ಪ್ರತಿಭಟನೆಯ ವೇಳೆ ಕರವೇ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು, ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಮುಂದುವರಿಸಿದರು. ಕನ್ನಡದ ವಿರುದ್ಧದ ಚಟುವಟಿಕೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.

ಡಿಸಿ ಕಚೇರಿ ಆವರಣದಲ್ಲಿ ಸರ್ಕಾರದ ಆದೇಶವನ್ನು ಹರಿದು ಹಾಕಿರುವುದು ಕನ್ನಡಿಗರಿಗೆ ಮಾಡಿದ ನೇರ ಅವಮಾನ ಎಂದು ಕರಬೇ ಮುಖಂಡರು ಆರೋಪಿಸಿದರು. ಸರ್ಕಾರಿ ಆದೇಶಕ್ಕೆ ಗೌರವ ತೋರದೆ ಕಾನೂನು ಸುವ್ಯ ರಸ್ತೆಗೆ ದಕ್ಕಿತರು ಆ ರೀತಿಯಲ್ಲಿ ವರ್ತಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಕರವೇ ಕಾರ್ಯಕರ್ತರು ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಏಕತೆ ಮತ್ತು ಭಾಷಾ ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ನಂತರ ಜಿಲ್ಲಾಡಳಿತದ ಪರವಾಗಿ ಬೆಳಗಾವಿ ಉಪ ವಿಭಾಗಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದ ಕರವೇ ಮುಖಂಡರು,ತ್ವರಿತ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

Sponsored

ಬೆಳಗಾವಿಯಲ್ಲಿ ಭಾಷಾ ವಿಚಾರಕ್ಕೆ ಸಂಬಂಧಿಸಿದ ಈ ಬೆಳವಣಿಗೆಗಳು ಮತ್ತೆ ರಾಜಕೀಯ ಮತ್ತು ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಆಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರಂತೆ ಎಲ್ಲರ ಗಮನ ನೆಟ್ಟಿದೆ.

Also Read:

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಖಾಲಿ: ಸಿಎಂ ಡಿಕೆಶಿ ಸೂಚನೆಗೆ ನಿರ್ಲಕ್ಷ್ಯವೇ?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online