belagavi news:
ಮನರೇಗಾ ಯೋಜನೆ ಗ್ರಾಮೀಣ ಜನರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾಗಿದ್ದು, ಸಾರ್ವಜನಿಕ ಹಿತ್ತದೃಷ್ಟಿಯಿಂದ ಅದರ ನಿರಂತರ ಅನುಷ್ಠಾನ ಅಗತ್ಯವಾಗಿದೆ ಎಂದು ಸಚಿವ ಹೆಚ್ .ಕೆ. ಪಾಟೀಲ್ ತಿಳಿಸಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿಕೊಳ್ಳಲು ಸರ್ಕಾರಕ್ಕೆ ಅವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಜಿ ರಾಮ್ ಜಿ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನು ಅಧಿಸೂಚನೆ ಹೊರಡಿಸದ ಹಿನ್ನಲೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರ ನೂತನ ಜಿರಾಂಜಿ ಕಾಯ್ದೆ ಜಾರಿಗೆ ಸಂಬಂಧಿಸಿದ ಅಧಿ ಸೂಚನೆ ಹೊರಡಿಸದೆ ಇರುವುದಲ್ಲದೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ, ಈ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಮುಂದುವರಿಯುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರ ಅಭಿಪ್ರಾಯಪಟ್ಟಿದೆ.
ಈ ಕುರಿತು ಸಮಗ್ರಕ್ರಿಯ ಯೋಜನೆಯ ರೂಪಿಸಿಕೊಳ್ಳಲು ಅವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿಲುವು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳನ್ನು ದಮನಿಸಿದಂತಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ಗ್ರಾಮೀಣ ಭಾಗದ ಜನರಿಗೆ ಮನರೇಗಾ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ಮೇ ತಿಂಗಳು ಬಂದರು, ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದ ಅಧಿಸೂಚನೆ ಇನ್ನೂ ಹೊರ ಬಿದ್ದಿಲ್ಲ ಎಂದು ಸರ್ಕಾರ ಟೀಕಿಸಿದೆ. ಕೇಂದ್ರ ಸರ್ಕಾರ ಮನರೇಗಾ ಅಡಿಯಲ್ಲಿ ಬಾಕಿ ಉಳಿದ ಕೆಲಸಗಳನ್ನು ಮುಂದುವರಿಸುವಂತೆ ಸುತ್ತೋಲೆ ಹೊರಡಿಸಿದ್ದರೂ, ಅದಕ್ಕೆ ಅಗತ್ಯವಾದ ಹಣಕಾಸು ನೆರವು ನೀಡಿಲ್ಲ ಎನ್ನಲಾಗಿದೆ.
ಮುಂದೆ ಮಳೆ ಕೊರತೆ ಉಂಟಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ, ಬಡವರ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಸ್ಪಂದನೆ ತೋರಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ .ಪಾಟೀಲ್ ಆರೋಪಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದ ಕದ ತಟ್ಟಲು ನಿರ್ಧರಿಸಿದೆ ಎಂದು ಅವರು ವಿವರಿಸಿದರು.
ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸುಗಳ ಪರಿಶೀಲನೆಗಾಗಿ ಸಚಿವ ಸಂಪುಟ ಉಪಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.
ಪ್ರೊ. ಸುಖದೇವ್ ಥೋರಾಟ್ ಅವರ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿರುವ ಅಂತಿಮ ವರದಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿತ್ತು. ಇದೇ ವೇಳೆ, ರಾಜ್ಯ ಶಿಕ್ಷಣ ನೀತಿ ಕುರಿತಾಗಿ ಪ್ರೊ. ಥೋರಾಟ್ ಅವರು ಸಂಪುಟದ ಮುಂದೆ ಸಮಗ್ರ ವಿವರನೆ ನೀಡಿದರು ಎಂದು ಪಾಟೀಲ್ ಹೇಳಿದರು.
ಆಯೋಗ ನೀಡಿರುವ ಶಿಫಾರಸುಗಳ ಅನುಷ್ಠಾನ ಕುರಿತು ಆಳವಾದ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲು ಉಪಸಮಿತಿ ರಚಿಸಲಾಗುತ್ತಿದೆ. ಆಯೋಗ ಮಂಡಿಸಿರುವ ಒಟ್ಟು 90 ಶಿಫಾರಸುಗಳನ್ನು ಯಾವುವನ್ನು ಸ್ವೀಕರಿಸಬೇಕು ಎಂಬುದರ ಬಗ್ಗೆ ಈ ಉಪಸಮಿತಿ ಚರ್ಚಿಸಿ ಅಂತಿಮ ಶಿಫಾರಸು ಸಲ್ಲಿಸಲಿದೆ. ಮುಖ್ಯಮಂತ್ರಿ ಶೀಘ್ರದಲ್ಲಿ ಉಪ ಸಮಿತಿಯನ್ನು ರಚಿಸಲಿದ್ದಾರೆ ಎಂದು ಅವರು ತಿಳಿಸಿದರು.
"ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ (ತಿದ್ದುಪಡಿ) ವಿಧೇಯಕ, 2026" ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸಾರಿಗೆ ಇಲಾಖೆ ವಾಹನಗಳ ಮೇಲೆ ವಿಧಿಸಲಾದ ಹೆಚ್ಚುವರಿ ಸೆಸ್ ನಿಂದ 2025 ರ ಏಪ್ರಿಲ್ ತಿಂಗಳನಿಂದ ಡಿಸೆಂಬರ್ ಅಂತ್ಯದವರೆಗೆ ಶೇ. 3ರ ದರದಲ್ಲಿ ₹20.83 ಕೋಟಿ ಸಂಗ್ರಹವಾಗಿದ್ದು, ದ್ವಿಚಕ್ರ ವಾಹನಗಳು ಹಾಗೂ ಮೋಟಾರು ಕಾರುಗಳಿಂದ ₹71.51 ಕೋಟಿ ಸೇರಿ ಒಟ್ಟು ₹92.25 ಕೋಟಿ ಸೆಸ್ ವಸೂಲಿಯಾಗಿದೆ.
ಈ ಮಹತ್ವದ ಮೊತ್ತವನ್ನು ಪರಿಣಾಮಕಾರಿಯಾಗಿ ಬಳಸಿ, ಕರ್ನಾಟಕ ಮೋಟಾರು ಸಾರಿಗೆ ಹಾಗೂ ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಂಡಳಿಯ ಮೂಲಕ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಗೊಳಿಸುವುದು ಮುಕ್ತ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.
ಈ ಹಿನ್ನಲೆ, ಪ್ರಸ್ತುತ ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ಮಂಡಳಿಯನ್ನು ಸಾರಿಗೆ ಇಲಾಖೆಯ ವ್ಯಾಪ್ತಿಗೆ ವರ್ಗಾಯಿಸಿ, ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೆಮಾಭಿವೃದ್ಧಿ ಕಾರ್ಯಕ್ರಮಗಳನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೊಳಿಸಲು "ಕರ್ನಾಟಕ ಮೋಟರು ಸಾರಿಗೆ ಮತ ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಯ ಅಧಿನಿಯಮ, 2024ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ.
ಇತರ ತೀರ್ಮಾನಗಳು:
• ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ರೂ. 22 ಕೋಟಿಗಳ ಅಂದಾಜು ಮೊತ್ತದಲ್ಲಿ ಡಿಜಿಟಲ್ ತಾರಾಲಯವನ್ನು ಸ್ಥಾಪಿಸುವ ಬಗ್ಗೆ - 3D - 8K ರೆಸಲ್ಯೂಷನ್ ಬದಲಿಗೆ 2D - 4K ರೆಸಲ್ಯೂಷನ್ ಪರಿಸ್ಕರಿಸಲು 16.02.2017 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ತಿದ್ದುಪಡಿ ಮಾಡಲು ಅನುಮೋದನೆ.
• ಕೋಲಾರ ಜಿಲ್ಲೆ, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜ್ಯ ಹೆದ್ದಾರಿ -5 ಮತ್ತು ರಾಜ್ಯ ಹೆದ್ದಾರಿ- 95 ರಲ್ಲಿ ಒಟ್ಟು 20.74 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ 2 ಕಾಮಗಾರಿಗಳನ್ನು ರೂ.66 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
• ಮೈಸೂರಿನ ಶ್ರೀ ಜಯದೇವ್ ಹೃದ್ರೋಗ ಆಸ್ಪತ್ರೆಯನ್ನು ಸಮರ್ಥ್ಯದಿಂದ 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು 180 ಕೋಟಿ ರೂ. ಅಂದಾಜು ಮೊತ್ತವನ್ನು ಕೈಗೊಳಲು ಆಡಳಿತಾತ್ಮಕ ಅಸ್ತು.
• ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು 23.76 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
• ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮಾಸ್ಟರ್ ಪ್ಲಾನ್ ಯೋಜನೆಗೆ 3ನೇ ಹಂತದ ಕಾಮಗಾರಿಗಳನ್ನು ರೂ.604.65 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
• ಕಲಬುರ್ಗಿ ಮತ್ತು ಯಾದಗಿರಿ ಭಾಗದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಮತ್ತು ಸ್ಟೇಟ್ ಸೆಕ್ಟರ್ ಯೋಜನೆಯಡಿಯಲ್ಲಿ ಹೊಸ ಮೂರು ಕೈಗಾರಿಕಾ ವಸಾಹತುಗಳನ್ನು ಒಟ್ಟು 200.07 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.
• ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ. 2ರಷ್ಟು ಮೀಸಲಾತಿ ನೀಡಲು "ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳ,2026 "ಕ್ಕೆ ಅನುಭೋನೆ. ಕ್ರೀಡಾ ಸಾಧಕರಿಗೆ ಸರ್ಕಾರ ಹುದ್ದೆಗಳಲ್ಲಿ ಒದಗಿಸಿರುವ 2% ಮೀಸಲಾತಿಯನ್ನು ಮುಂದುವರಿಸಲು, ಪ್ರತಿ ವರ್ಷ ಈ ತಿದ್ದುಪಡಿ ನಿಯಮಗಳಲ್ಲಿ ಅನುಮೋದನೆ ನೀಡಲಾಗಿದೆ.
Also Read: