belagavi news:
ಹುಬ್ಬಳ್ಳಿ ಧಾರವಾಡದಲ್ಲಿ ಪೊಲೀಸ್ ವಿರುದ್ಧ ಆರೋಪ: ಆಡಳಿತ ಪಕ್ಷದ ಶಾಸಕರಿಂದಲೇ ಅಸಮಾಧಾನ
ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ ಹಾಗೂ ಶಿಕ್ಷಣ ಕಾಶಿ ಧಾರವಾಡ ನಗರಗಳಲ್ಲಿ ಕಾನೂನು ಅವಸ್ಥೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ."ರಕ್ಷಕರೇ ಭಕ್ಷಕರಾಗುತ್ತಿದ್ದಾರಾ?"ಎಂಬ ಆರಪ್ಪವನ್ನು ವಿಪಕ್ಷ ಬಿಜೆಪಿ ನಾಯಕರು ಮುಂದಿಟ್ಟಿದ್ದಾರೆ.
ಇದು ಸಾಮಾನ್ಯ ರಾಜಕೀಯ ಆರೋಪವೆಂದು ನೋಡಲಾಗುತ್ತಿದ್ದರು ಇದೀಗ ಸ್ವತಃ ಆಡಳಿತ ಪಕ್ಷದ ಶಾಸಕರೇ ಪೊಲೀಸರ ಕಾರ್ಯವೈಖರಿಯ ವಿರುದ್ಧ ಅಸಮಧಾನ ವ್ಯಕ್ತಪಡಿಸಿದಿರುವುದು ಗಮನಾರ್ಹ ವಾಗಿದೆ. ಅವರ ಪೊಲೀಸರ ಮೇಲೆ ಹಲವು ಆರೋಪಗಳನ್ನು ಮಾಡಿದ್ದು, ಅವಳಿ ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆ: ಶಾಸಕ ಪ್ರಸಾದ್ ಅಬ್ಬಯ್ಯ ಅಸಮಾಧಾನ.
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳು ವ್ಯಾಪಾರ ಮತ್ತು ಶಿಕ್ಷಣ ಕ್ಷೇತ್ರಗಳಿಂದ ಪ್ರಸಿದ್ಧಿ ಪಡೆದಿವೆ. ಧಾರವಾಡ ಕಿ ರಾಜದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ ಹುಬ್ಬಳ್ಳಿಗೆ ದೇಶದ ವಿವಿಧ ಭಾಗಗಳಿಂದ ವ್ಯಾಪಾರಕ್ಕಾಗಿ ಜನರು ಆಗಮಿಸುತ್ತಿದ್ದಾರೆ. ಇಂತಹ ಮಹತ್ವದ ನಗರಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಕಮಿಷನರೆಟ್ ವ್ಯವಸ್ಥೆ ಇದ್ದು ಪೊಲೀಸ್ ಕಮಿಷನರ್, ಡಿಸಿಪಿ ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಸ್ವತಃ ಕೆಲವು ಪೊಲೀಸ್ ಸಿಬ್ಬಂದಿ ವಸೂಲಿ ನಡೆಸುವುದು, ರೌಡಿ ಶೀಟರ್ ಗಳಿಗೆ ನೇರವಾಗಿ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನಲೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದು ಪರಿಸ್ಥಿತಿ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸ್ ರ ವರ್ತನೆಗೆ ಕೈ ಶಾಸಕರ ಅಸಮಾಧಾನ: ಧಾರವಾಡದಲ್ಲಿ ವಿದ್ಯಾರ್ಥಿಯೋರ್ವರು ಪೊಲೀಸರ ಹಣದ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂತರ ಪೊಲೀಸ್ ಇಲಾಖೆಯ ವಿರುದ್ಧ ಆರೋಪಗಳು ಮತ್ತಷ್ಟು ಹೆಚ್ಚಾಗಿವೆ. ಅನ್ಯಾಯ ಕ್ಕೊ ಳಗಾದವರಿಗೆ
ನ್ಯಾಯ ಒದಗಿಸಿ, ಅಕ್ರಮದಲ್ಲಿ ತೊಡಗಿದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕಾದ ಪೊಲೀಸರೇ ಹಣಕ್ಕಾಗಿ ತಪ್ಪು ಮಾರ್ಗ ಹಿಡಿದಿದ್ದಾರೆ ಎಂಬ ಆರೋಪಗಳನ್ನು ಬಿಜೆಪಿ ಶಾಸಕರು ಮಾಡಿದ್ದರು. ಇದೀಗ, ಇದೇ ವಿಚಾರದಲ್ಲಿ ಆಡಳಿತ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವುದು ಗಮನಾರ್ಹವಾಗಿದೆ. ಅವಳಿ ನಗರದ ಪೊಲೀಸರ ವರ್ತನೆ ಹಾಗೂ ಕಾರ್ಯವೈಖರಿಯ ಬಗ್ಗೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಪರಿಸ್ಥಿತಿ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳ ಬೇಡಿಕೆ: ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಪೊಲೀಸರ ಕಾರ್ಯ ವೈಖರಿಯ ಬಗ್ಗೆ ತೀವ್ರ ಸಮಾಧಾನ ವ್ಯಕ್ತಪಡಿಸಿದ್ದಾರೆ. ಅವಳಿ ನಗರದಲ್ಲಿ ಪೊಲೀಸ್ ಇಲಾಖೆಯಲ್ಲಿ ಹಲವಾರು ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸಹಕಾರ ನೀಡುತ್ತಿರುವುದು ಸೇರಿದಂತೆ ಗಂಭೀರ ವಿಚಾರಗಳನ್ನು ಅವರು ಪ್ರಸ್ತಾಪಿಸಿದ್ದಾರೆ.
ನಗರದಲ್ಲಿ ಕಾನೂನು ಸು ವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆ, ಎಲ್ಲಾ ಪೊಲೀಸ್ ಅಧಿಕಾರಿಗಳನ್ನು, ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದಾಗ ತಿಳಿಸಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತರಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂಬ ವಿಶ್ವಾಸ. ಅವಳಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವರ್ಗಾವಣೆ ಬೇಗನೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೆಳ ಪೊಲೀಸ್ ಸಿಬ್ಬಂದಿ ಹಣಕ್ಕಾಗಿ ಜನರನ್ನು ಪೀಡಿಸುತ್ತಿದ್ದಾರೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. ಗುಂಡಾಗಳು ಪೊಲೀಸ್ ಠಾಣೆಗಳಲ್ಲಿ ಯಾವುದೇ ಹಂಚಿಕೆ ಇಲ್ಲದೆ ವರ್ತಿಸುತ್ತಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎಬ್ಬಿಸಿದೆ.
ಕ್ರಿಕೆಟ್ ಬೆಟ್ಟಿಂಗ್, ಅಕ್ರಮ ಅಕ್ಕಿ ಸಾಗಾಟ ಸೇರಿದಂತೆ ಹಲವು ಪ್ರಕರಣಗಳು ಪೊಲೀಸರ ಮೂಗಿನ ನೇರದಲ್ಲೇ ನಡೆದ್ದರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಟಿಕೆಟ್ಗಳು ಕೇಳಿ ಬರುತ್ತಿವೆ. ಇನ್ನು ನ್ಯಾಯಕ್ಕಾಗಿ ಠಾಣೆಗೆ ಹೋಗುವ ಜನರಿಂದಲೇ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕರಲ್ಲಿ ಅಸಮಾಧಾನ ಉಂಟು ಮಾಡಿವೆ. ಇದಕ್ಕೂ ಮೊದಲು ಪೊಲೀಸ್ ಕಮಿಷನರ್ ರೌಡಿ ಫರೆಡ ನಡೆಸಿ , ರೌಡಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರು. ಡ್ರಗ್ಸ್ ಪೆಡ್ಲ ರಗಳ ವಿರುದ್ಧವು ಕ್ರಮ ಕೈಗೊಳ್ಳಲಾಗಿತ್ತು. ಆದರೆ,
ಈ ಕಾರ್ಯಾಚರಣೆಗಳಲ್ಲೂ ಕೆಲ ಅಧಿಕಾರಿಗಳು ಹಣಕ್ಕಾಗಿ ತೊಡಗಿರುವ ವಿಚಾರಗಳು ಬಹಿರಂಗವಾಗಿದ್ದು, ಪೊಲೀಸ್ ಇಲಾಖೆಯ ಮೇಲೆ ಮತ್ತಷ್ಟು ಅನುಮಾನ ಹುಟ್ಟಿಸಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೆಳ ಲಕ್ಷ ಮತ್ತು ಪ್ರಾಮಾಣಿಕ ಪೊಲೀಸರು ಪೋಲಿಸ್ ಅಧಿಕಾರಿಗಳು ಇದ್ದಾರೆ. ಆದ್ರೆ ಕೆಲ ಪೊಲೀಸರು ಹಣಕ್ಕಾಗಿ ಅಡ್ಡದಾರಿ ಹಿಡಿದಿದ್ದರಿಂದ ಇಲಾಖೆಗೆ ಕೆಟ್ಟ ಹೆಸರು ಬರ್ತಿದೆ. ಹೀಗಾಗಿ ಗೃಹ ಇಲಾಖೆ ಅವಳಿ ನಗರದ ಪರಿಸರ ಮೇಲೆ ಯಾವ ಕ್ರಮ ಕೈಗೊಳ್ಳುತ್ತದೆ. ಯಾರೆಲ್ಲರ ವರ್ಗಾವಣೆ ಆಗುತ್ತದೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿವೆ.
Also Read:
ಚೆನ್ನೈ ವಿಮಾನ ನಿಲ್ದಾಣ : ಎಕ್ಸಿಟ್ ಡೋರ್ ಓಪನ್ ಮಾಡಿ ಹಾರಿದ ಪ್ರಯಾಣಿಕ