belagavi news :
ರಾಯಗಡ, ಜುಲೈ 9 : ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರಿ ಮಳೆ ಮತ್ತು ಪ್ರವಾಹದ ನಡುವೆ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಖಲಾಪುರ ತಾಲೂಕಿನಲ್ಲಿರುವ ಹಿಂದುಸ್ತಾನ್ ಪೆಟ್ರೋಲಿಯಂ ಗ್ಯಾಸ್ ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದ ಪರಿಣಾಮ, ಸುಮಾರು ಮೂರು ಸಾವಿರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳು ಪಾತಾಳಗಂಗಾ ನದಿಯಲ್ಲಿ ಕೊಚ್ಚಿ ಹೋಗಿದೆ.
ನದಿಯಲ್ಲಿ ತೇಲುತ್ತಿರುವ ಸಿಲಿಂಡರ್ ಗಳ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೆಲವು ಗ್ರಾಮಸ್ಥರು ಈ ಸಿಲಿಂಡರ್ ಗಳನ್ನು ಮನೆಗಳಿಗೆ ಕೊಂಡೊಯ್ಯುತ್ತಿರುವ ವರದಿಗಳು ಕೂಡ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಪ್ರವಾಹದಲ್ಲಿ ಕೊಚ್ಚಿ ಹೋದ ಸಿಲೆಂಡರ್ ಗಳು ಹಾನಿಗೊಳಗಾಗಿರುವ ಸಾಧ್ಯತೆ ಇರುವುದರಿಂದ ಅವುಗಳನ್ನು ಬಳಸುವುದು ಅಥವಾ ಮನೆಗೆ ಸಾಗಿಸುವುದು ಜೀವಕ್ಕೆ ಅಪಾಯಕಾರಿಯಾಗಬಹುದು. ಸಿಲಿಂಡರ್ ಗಳಿಂದ ಅನಿಲ ಸೋರಿಕೆಯಾಗುವ ಅಥವಾ ಸ್ಪೋಟ ಸಂಭವಿಸುವ ಅಪಾಯವನ್ನು ತಳ್ಳಿ ಹಾಕಲಾಗುವುದಿಲ್ಲ.
ಆದ್ದರಿಂದ, ನದಿ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂತಹ ಸಿಲಿಂಡರ್ ಗಳು ಕಂಡು ಬಂದರೆ ಅವುಗಳನ್ನು ಮುಟ್ಟದೆ, ತಕ್ಷಣವೇ ಸ್ಥಳೀಯ ಆಡಳಿತ, ಪೊಲೀಸ್ ಇಲಾಖೆ ಅಥವಾ ಹಿಂದುಸ್ತಾನ್ ಪೆಟ್ರೋಲಿಯಂ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರವಾಹದ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಕೊಚ್ಚಿಹೋದ ಸಿಲಿಂಡರ್ ಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆಯಲು ರಕ್ಷಣಾ ತಂಡಗಳು ಹಾಗೂ ಸಂಬಂಧಿತ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಡೆ, ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ನದಿ ದಡದಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಮನೆಗೆ ಸಾಗಿಸಿದ ಗ್ರಾಮಸ್ಥರು
ಪಾತಾಳಗಂಗಾ ನದಿಯಲ್ಲಿ ಸಾವಿರಾರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳು ತೇಲಿ ಬರುತ್ತಿರುವುದನ್ನು ಕಂಡ ಕೆಲ ಗ್ರಾಮಸ್ಥರು ಮತ್ತು ಸ್ಥಳೀಯ ನಿವಾಸಿಗಳು ಅವುಗಳನ್ನು ದಡಕ್ಕೆ ಎಳೆದು ತಂದು ಮನೆಯೊಳಗೆ ಕೊಂಡೊಯ್ಯುತ್ತಿರುವ ಘಟನೆ ವರದಿಯಾಗಿದೆ. ಈ ಬೆಳವಣಿಗೆ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ.
ಈ ಘಟನೆ ಖಲಾಪುರ ಎಂಐಡಿಸಿ ಕೈಗಾರಿಕಾ ಪ್ರದೇಶದಲ್ಲಿರುವ ಹಿಂದುಸ್ತಾನ್ ಪೆಟ್ರೋಲಿಯಂ ಗ್ಯಾಸ್ ಬಾಟ್ಲಿಂಗ್ ಘಟಕದಲ್ಲಿ ಸಂಭವಿಸಿದೆ. ಬಾರಿ ಪ್ರವಾಹದ ನೀರು ಘಟಕದ ಆವರಣಕ್ಕೆ ನುಗ್ಗಿದ ಪರಿಣಾಮ, ಸಂಗ್ರಹಿಸಿಡಲಾಗಿದ್ದ ಸಾವಿರಾರು ಎಲ್ಪಿಜಿ ಸಿಲೆಂಡರ್ ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಪಾತಾಳ ಗಂಗಾ ನದಿಯಲ್ಲಿ ಹರಿದು ಹೋಗಿವೆ.
ಜಿಲ್ಲಾಧಿಕಾರಿಗಳ ಎಚ್ಚರಿಕೆ : ಸಿಲೆಂಡರ್ ಗಳನ್ನು ಬಳಸಬೇಡಿ
ಘಟನೆಯ ಗಂಭೀರತೆಯನ್ನು ಮನಗಂಡ ರಾಯಗಡ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋದ ಸಿಲೆಂಡರ್ ಗಳು ತುಂಬಿದವೇ ಅಥವಾ ಖಾಲಿಯಾಗಿವೆ ಎಂಬುದು ಇನ್ನು ಖಚಿತವಾಗಿಲ್ಲ. ನೀರಿನ ರಭಸದಿಂದ ಅವುಗಳ ವಾಲ್ವ್ ಗಳಿಗೆ ಹಾನಿಯಾಗಿರುವ ಸಾಧ್ಯತೆ ಇರುವುದರಿಂದ ಅನಿಲ ತೋರಿಕೆ ಅಥವಾ ಸ್ಫೋಟ ಸಂಭವಿಸುವ ಅಪಾಯವಿದೆ.
ಈ ಕಾರಣದಿಂದ ನದಿಯಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಲೆಂಡರ್ ಗಳು ಕಂಡು ಬಂದರೆ ಅವುಗಳನ್ನು ಮನೆಗೆ ಕೊಂಡೊಯ್ಯಬಾರದು, ಬಳಸಲು ಅಥವಾ ತೆರೆಯಲು ಪ್ರಯತ್ನಿಸಬಾರದು ಎಂದು ಜಿಲಾಡಳಿತ ಕಟ್ಟುನಿಟ್ಟಾಗಿ ಸೂಚಿಸಿದೆ. ಬದಲಾಗಿ, ತಕ್ಷಣವೇ ಪೊಲೀಸ್, ಅಗ್ನಿಶಾಮಕ ದಳ ಅಥವಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ ಸುರಕ್ಷಿತವಾಗಿ ವರ್ಷಕ್ಕೆ ಒಪ್ಪಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಮನೆಗೆ ಕೊಂಡೊಯ್ಯಬೇಡಿ
ಯಾವುದೇ ನಾಗರಿಕರು ಈ ಸಿಲಿಂಡರ್ ಗಳನ್ನು ತಮ್ಮ ವೈಯಕ್ತಿಕ ಬಳಕೆಗೆ ಮನೆಗೆ ಕೊಂಡೊಯ್ಯಬಾರದು, ಅವುಗಳನ್ನು ತೆರೆಯಲು ಪ್ರಯತ್ನಿಸಬಾರದು. ಇದು ಭೀಕರ ಸ್ಫೋಟಕ್ಕೆ ಕಾರಣವಾಗಬಹುದು.
ಸಿಲೆಂಡರ್ ಸಿಕ್ಕರೆ ಅಧಿಕಾರಿಗಳಿಗೆ ಒಪ್ಪಿಸಿ
ಪ್ರವಾಹದಲ್ಲಿ ಕೊಚ್ಚಿ ಹೋದ ಎಲ್.ಪಿ.ಜಿ ಗ್ಯಾಸ್ ಸಿಲೆಂಡರ್ ಗಳು ನದಿ ದಡದಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡು ಬಂದರೆ ಅವುಗಳನ್ನು ಮನೆಗೆ ಕೊಂಡೊಯ್ಯದೆ, ತಕ್ಷಣವೇ ಹತ್ತಿರದ ತಹಸೀಲ್ದಾರ್ ಕಚೇರಿ, ಪೊಲೀಸ್ ಇಲಾಖೆ ಅಥವಾ ಸ್ಥಳೀಯ ಗ್ಯಾಸ್ ವಿತರಕರಿಗೆ ಒಪ್ಪಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಸಿಲೆಂಡರ್ ಗಳನ್ನು ಬಳಸಲು ಅಥವಾ ತೆರೆಯಲು ಪ್ರಯತ್ನಿಸಬಾರದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ರಾಯಗಡ ಜಿಲ್ಲೆಯ ಮೂಲಕ ಹರಿಯುವ ಪಾತಾಳ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ನದೀ ತೀರದ ಗ್ರಾಮಗಳ ನಿವಾಸಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ರೈಲ್ವೆ ಹಳಿಗಳು ಮತ್ತು ಕೈಗಾರಿಕಾ ಪ್ರದೇಶಗಳ ಸಮೀಪದಲ್ಲಿ ಹರಿಯುವ ನದಿಯಲ್ಲಿ ಪ್ರವಾಹದ ತೀವ್ರತೆ ಹೆಚ್ಚುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಕೂಡ ವೇಗಗೊಳಿಸಲಾಗಿದೆ.
ಸದ್ಯದ ಮಾಹಿತಿಯ ಪ್ರಕಾರ, ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳ ವರದಿಯಾಗಿಲ್ಲ. ಹಿಂದುಸ್ತಾನ್ ಪೆಟ್ರೋಲಿಯಂ ಸಂಸ್ಥೆಯ ತಜ್ಞರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ದೋಣಿಗಳ ಸಹಾಯದಿಂದ ನದಿಯಲ್ಲಿ ತೇಲುತ್ತಿರುವ ಸಿಲಿಂಡರ್ ಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ವಶಪಡಿಸಿಕೊಳ್ಳುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಪರಿಸ್ಥಿತಿಯನ್ನು ಜಿಲ್ಲಾಡಳಿತ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದು, ಸಾರ್ವಜನಿಕರು ಒದಂತಿಗಳಿಗೆ ಕಿವಿ ಕೊಡದೆ ಅಧಿಕಾರಿಗಳ ಸೂಚನೆಯನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ
Also Read:
ಅಯೋಧ್ಯೆ ರಾಮ ಮಂದಿರದಲ್ಲಿ ಕೋಟಿ ಕೋಟಿ ವಂಚನೆ ಆರೋಪ