<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Sports

ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ : ನಾಯಕತ್ವ ಜಿತೇಶ್ ಶರ್ಮಾಗೆ

ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ : ನಾಯಕತ್ವ ಜಿತೇಶ್ ಶರ್ಮಾಗೆ
Summary: The news of a surprise change in the RCB team has caused a lot of discussion in the cricket world. The news that Jitesh Sharma has been given the captaincy responsibility as per the new decision has increased curiosity among the fans.

Belagavi news:

ಐಪಿಎಲ್ 2026ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಆರ್‌ಸಿಬಿ ಮೈದಾನಕ್ಕಿಳಿಯಬೇಕಾಗಿದ್ದು, ಪಂದ್ಯ ಆರಂಭಕ್ಕೂ ಮುನ್ನವೇ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ರಜತ್ ಪಟಿದಾರ್ ತಂಡದಿಂದ ಹೊರಗೂಳಿದಿದ್ದು, ಅವರ ಬದಲಿಗೆ ಜಿತೇಶ್ ಶರ್ಮಾ ಅವರಿಗೆ ನಾಯಕತ್ವ ವಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಅಚ್ಚರಿಯ ಬದಲಾವಣೆ ಆರ್ ಸಿಬಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ತಂಡದ ತಂತ್ರ ಮತ್ತು ಹೊಸ ನಾಯಕತ್ವದ ಪ್ರದರ್ಶನದ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆರ್‌ಸಿಬಿ ಉತ್ತಮ ಆರಂಭ ಪಡೆಯುವುದು ಮಹತ್ವದ್ದಾಗಿದೆ.

Sponsored

ಪಂದ್ಯ ಮುಂದುವರೆದಂತೆ ಎರಡು ತಂಡಗಳ ಪ್ರದರ್ಶನ ಕುತೂಹಲಕ್ಕೆ ಕಾರಣವಾಗಿದ್ದು, ಪಾಯಿಂಟ್ಸ್ ಟೇಬಲ್ ಮೇಲೆ ಈ ಪಂದ್ಯ ಮಹತ್ವದ ಪರಿಣಾಮ ಬೀರುವ ನಿರೀಕ್ಷೆ ಇದೆ.

ಐಪಿಎಲ್ 2026ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಂತಿಮ ಪ್ಲೇಯಿಂಗ್ ಇಲೆವೆನ್ ಪ್ರಕಟವಾಗಿದೆ. ಈ ಪಂದ್ಯದಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದ್ದು, ಜಿತೇಶ್ ಶರ್ಮಾ ವಿಕೆಟ್ ಕೀಪರ್ ಜೊತೆಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಆರ್ಸಿಬಿ ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಜೊತೆ ಜಾಕೋಬ್ ಬೆಥೆಲ್ ಮತ್ತು ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಲ ಹೆಚ್ಚಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್, ಟಿಮ್ ಡೇವಿಡ್ ಹಾಗೂ ರೋಮಾರಿಯೋ ಶಫರ್ಡ್ ತಂಡಕ್ಕೆ ಬಲ ತುಂಬಲಿದ್ದಾರೆ.

ಆಲ್ರೌಂಡರ್ ಕ್ರುನಲ್ ಪಾಂಡ್ಯ ತಂಡದ ಸಮತೋಲನ ಕಾಯ್ದುಕೊಳ್ಳಲಿದ್ದು, ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ ವುಡ್ ಮತ್ತು ಸುಯಶ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದಾರೆ.

Sponsored

RCB ಅಂತಿಮ ತಂಡ :

ಜಾಕೋಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್/ನಾಯಕ), ಟಿಮ್ ಡೇವಿಡ್, ರೊಮಾರಿಯೂ ಶಫರ್ಡ್, ಕ್ರುನಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ ವುಡ್ , ಸುಯಶ್ ಶರ್ಮಾ.

ಈ ಪಂದ್ಯದಲ್ಲಿ ಹೊಸ ನಾಯಕತ್ವದಲ್ಲಿ ಆರ್‌ಸಿಬಿ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದರ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದೆ.

ಐಪಿಎಲ್ 20261ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ತನ್ನ ಅಂತಿಮ ಪ್ಲೇಯಿಂಗ್ ಅನ್ನು ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕನಕ ತಿಳಿಯುತ್ತಿರುವ ಪಂಜಾಬ್ ತಂಡ ಸಮತೋಲನ ಯುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯೊಂದಿಗೆ ಸಜ್ಜಾಗಿದೆ.

Sponsored

ತಂಡದ ಆರಂಭಿಕರಾಗಿ ಪ್ರಿಯಾಂ ಆರ್ಯ ಮತ್ತು ಪ್ರಭಾಸಿಮ್ರಾನ್ ಸಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ವಿಕೆಟ್ ಕೀಪರ್ ಆಗಿರುವ ಪ್ರಭಾಸಿಮ್ರಾನ್ ಸಿಂಗ್ ಮೇಲೆ ಉತ್ತಮ ಆರಂಭ ನೀಡುವ ನಿರೀಕ್ಷೆ ಇದೆ. ಮಧ್ಯಮ ಕ್ರಮಾಂಕದಲ್ಲಿ ಕೂಪರ್ ಕೊನೋಲಿ, ನಾಯಕ ಶ್ರೇಯಸ್ ಅಯ್ಯರ್, ಸೂರ್ಯಾಂಶ ಶೆಡ್ಜ್ ಹಾಗೂ ಶಶಾಂಕ್ ಸಿಂಗ್ ತಂಡಕ್ಕೆ ಬಲ ತುಂಬಲಿದ್ದಾರೆ.

ಆಲ್ ರೌಂಡರ್ ಅಜ್ಮತುಲ್ಲಾ ಒಮರ್ಜಾಯ್ ಹಾಗೂ ಹರ್ಪ್ರೀತ್ ಬ್ರಾರ್ ತಂಡದ ಸಮತೋಲನ ಕಾಯ್ದುಕೊಳ್ಳಲಿದ್ದು, ಬೌಲಿಂಗ್ ವಿಭಾಗದಲ್ಲಿ ಲಾಕಿ ಫರ್ಗುಸನ್, ಅರ್ಶ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್ ಪ್ರಮುಖ ಪಾತ್ರ ವಯಸ್ಸಲ್ಲಿದ್ದಾರೆ.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ :

ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಸೂಪರ್ ಕೊನೋಲಿ, ಶ್ರೇಯಸ್ ಅಯ್ಯರ್ (ನಾಯಕ), ಹರ್ಪ್ರೀತ್ ಬ್ರಾರ್, ಲಾಕಿ ಪರ್ಗುಸನ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

Sponsored

ಆರ್ ಸಿ ಬಿ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವಿನ ಲಯ ಮುಂದುವರಿಸಬಹುದೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

Also Read:

ಪ್ರಧಾನಿ ಮೋದಿ ಸಂದೇಶದ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ- ಇಂಧನ ಮಾರಾಟ ಅರ್ಧಕ್ಕೆ ಇಳಿಕೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online