Belagavi news:
ಪೊಲೀಸರಿಗೆ ದೊರೆತ ಖಚಿತ ಸುಳಿವಿನ ಆಧಾರದ ಮೇಲೆ ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಚಲನವಲನಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದಾನೆ ಎಂಬ ಅನುಮಾನವೇ ವ್ಯಕ್ತವಾಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಹೈವೇ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ ಸೇನಾ ವಾಹನಗಳ ಓಡಾಟ ಮತ್ತು ಚಟುವಟಿಕೆಗಳ ಮಾಹಿತಿ ಸಂಗ್ರಹಿಸಲಾಗುತ್ತಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ದೇಶದ ಭದ್ರತಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಬಂಧಿತನ ಸಂಪರ್ಕಗಳು ಹಾಗೂ ಇನ್ನಷ್ಟು ಮಾಹಿತಿಗಾಗಿ ಪೊಲೀಸರು ಮತ್ತು ಗುಪ್ತಚರ ಇಲಾಖೆ ತನಿಖೆ ಮುಂದುವರಿಸಿದೆ.
ಹೈವೇಯಲ್ಲಿ ಸಿಸಿಟಿವಿ ಅಳವಡಿಸಿ ಪಾಕಿಸ್ತಾನಕ್ಕೆ ಮಾಹಿತಿ ರವಾನೆ: ಡ್ರಗ್ಸ್ ಚಟಕ್ಕೆ ದಾಸನಾಗಿದ್ದ ಆರೋಪಿ ಬಂಧನ
ದೇಶದ ಭದ್ರತೆಗೆ ಗಂಭೀರ ಅಪಾರ ಉಂಟುಮಾಡುವ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪಾಕಿಸ್ತಾನಕ್ಕೆ ನೇರ ದೃಶ್ಯಗಳನ್ನು ರವಾನಿಸುತ್ತಿದ್ದ ಆರೋಪದ ಮೇಲೆ ಬಂಧಿತನಾದ ವ್ಯಕ್ತಿ ಮಾದಕ ದ್ರವ್ಯಗಳ ಚಟಕ್ಕೆ ದಾಸನಾಗಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.
ಸುಜನ್ ಪುರ ಸೇತುವೆ ಸಂಖ್ಯೆ 4 ಮತ್ತು ಸೇತುವೆ ಸಂಖ್ಯೆ 5ರ ನಡುವಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಆರೋಪಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದನು. ಈ ಕ್ಯಾಮೆರಾಗಳ ಮೂಲಕ ಭಾರತೀಯ ಸೇನೆಯ ವಾಹನಗಳ ಚಲನವಲನ ಸೇರಿದಂತೆ ಪ್ರಮುಖ ಮಾಹಿತಿಗಳನ್ನು ಪಾಕಿಸ್ತಾನದಲ್ಲಿರುವ ವ್ಯಕ್ತಿಗಳಿಗೆ ನೇರವಾಗಿ ಕಳುಹಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಾದಕ ದ್ರವ್ಯಗಳ ಅಮಿಷ ಹಾಗೂ ಹಣದ ಲಾಲಸೆಯಿಂದ ಆರೋಪಿ ಈ ರೀತಿ ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ಬಂಧಿತನ ಕೃತ್ಯ ರಾಷ್ಟ್ರದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿತ್ತು ಎಂದು ಭದ್ರತಾ ಸಂಸ್ಥೆಗಳು ಆತಂಕ ವ್ಯಕ್ತಪಡಿಸಿವೆ.
ಪ್ರಾಥಮಿಕ ತನಿಖೆಯಲ್ಲಿ ಈತನ ಜೊತೆಗೆ ಮೂವರು ಸಹಚರರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹಾಗೂ ಗುಪ್ತಚರ ಇಲಾಖೆ ಹೆಚ್ಚಿನ ತನಿಕೆ ಮುಂದುವರಿಸಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.
ಪಠಾಣ್ ಕೋಟ್ ಗೂಢಚೆಯೇ ಪ್ರಕರಣ: ಮೂವರು ಸಹಚರರೊಂದಿಗೆ ಸೇರಿ ಹೈವೇಯಲ್ಲಿ ಸಿಸಿಟಿವಿ ಅಳವಡಿಸಿದ್ದ ಆರೋಪಿ.
ರಾಷ್ಟ್ರೀಯ ಹೆದ್ದಾರಿಯಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪಾಕಿಸ್ತಾನಕ್ಕೆ ಮಾಹಿತಿ ರವಾಣಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನನ್ನು ಧಾರಿವಾಲ್ ಚಕ್ ನಿವಾಸಿ ಬಲ್ಜಿತ್ ಸಿಂಗ್ ಜೀತು ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿ ತನ್ನ ಮೂವರು ಸಹಚರರೊಂದಿಗೆ ಸೇರಿಕೊಂಡ ಪಠಾಣ್ ಕೋಟ್ ನಿಂದ ಜಮ್ಮುವಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಸುಜನ್ ಪುರ ಪ್ರದೇಶದಲ್ಲಿ ಬೇಹುಗಾರಿಕೆ ಉದ್ದೇಶದಿಂದ ಕ್ಯಾಮೆರಾ ಗಳನ್ನು ಅಳವಡಿಸಿದ್ದನು. ಇದು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಭಾರತೀಯ ಸೇನೆ ಹಾಗೂ ಇತರ ಪ್ರಮುಖ ಚಟುವಟಿಕೆಗಳನ್ನು ಸೆರೆಹಿಡಿಯುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂಬ ಗೌಪ್ಯ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ವಿಚಾರಣೆ ವೇಳೆ ಆರೋಪಿಯಿಂದ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾ ಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಯಲ್ಲಿ ಮತ್ತಷ್ಟು ಆತಂಕಕಾರಿ ಮಾಹಿತಿಗಳು ಬೆಳಕಿಗೆ ಬಂದಿದ್ದು, ಆರೋಪಿಯ ಮೂವರು ಸಹಚರರಲ್ಲಿ ಒಬ್ಬನು ಅಗತ್ಯ ಸರಕುಗಳನ್ನು ಪೂರೈಸುತ್ತಿದ್ದರೆ, ಉಳಿತಾ ಇಬ್ಬರೂ ವಿದೇಶದಲ್ಲಿರುವ ಏಜೆನ್ಸಿಗಳೊಂದಿಗೆ ಸಂಪರ್ಕ ಹೊಂದಿದರು ಎಂದು ತಿಳಿದುಬಂದಿದೆ.
ಈ ಪ್ರಕರಣವನ್ನು ದೇಶದ ವಿರುದ್ಧದ ಗಂಭೀರ ಬೇಹುಗಾರಿಕೆ ಪ್ರಕರಣವೆಂದು ಪರಿಗಣಿಸಿರುವ ಪೊಲೀಸರು ಹಾಗೂ ಗುಪ್ತಚರ ಇಲಾಖೆ ಆಳವಾದ ತನಿಖೆ ನಡೆಸುತ್ತಿವೆ. ಇನ್ನಷ್ಟು ಬಂಧನಗಳು ಹಾಗೂ ಕಠಿಣ ಕ್ರಮಗಳ ಸಾದ್ಯತೆ ಇದೆ ಎಂದು ಹಿರಿಯ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.
Also Read:
ಕಾರು ಖರೀದಿಸುವವರಿಗೆ ಶಾಕ್! Maruti Suzuki ಮಿಡಿದ ಹೊಸ ಘೋಷಣೆ ಏನು?