Belagavi news:
ಮಂಡೆ ವಿಶ್ವವಿದ್ಯಾಲಯ ಮುಚ್ಚುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನೊಬ್ಬ ಸ್ವಪಕ್ಷದ ಸಚಿವರ ವಿರುದ್ಧವೇ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.
ಮಂಡ್ಯ ವಿವಿಯನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ವರದಿಗಳ ನಡುವೆಯೇ,"ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚುತ್ತೇವೆ" ಎಂದು ಶಾಸಕ ಗುಡುಗಿದ್ದು, ರಾಜಕೀಯ ವಾತಾವರಣವನ್ನು ಉಗ್ರಗೊಳಿಸಿದೆ. ಶಿಕ್ಷಣ ಸಂಸ್ಥೆಯ ಭವಿಷ್ಯವನ್ನು ಹಾಳು ಮಾಡುವ ಯಾವುದೇ ಕ್ರಮವನ್ನು ಸೈಸೋದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಸ್ಥಳೀಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಭಾವನೆಗಳನ್ನು ಪ್ರತಿಬಿಂಬಿಸುವಂತೆ ಈ ಹೇಳಿಕೆ ಹೊರಬಂದಿದ್ದು, ಮಂಡ್ಯ ಜಿಲ್ಲೆಯಲ್ಲಿಯೂ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ. ವಿಶ್ವವಿದ್ಯಾಲಯ ಉಳಿಸಬೇಕೆಂಬ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದರಿಂದ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಸರ್ಕಾರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಹೆಚ್ಚಿದ್ದು, ವಿವಿ ಭವಿಷ್ಯ ಕುರಿತ ನಿರ್ಧಾರಕ್ಕೆ ಎಲ್ಲರ ಕಣ್ಣು ನೆಟ್ಟಿದೆ.
ಒಟ್ಟಿನಲ್ಲಿ ಮಂಡ್ಯ ವಿವಿ ವಿಚಾರವೂ ಶಿಕ್ಷಣದ ಜೊತೆಗೆ ರಾಜಕೀಯ ಕಿಚ್ಚನ್ನು ಹಚ್ಚಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುಗು ಪಡೆಯಲಿದೆ ಎಂಬುದು ಗಮನಾರ್ಹವಾಗಿದೆ.
ಮಂಡ್ಯ ವಿಶ್ವವಿದ್ಯಾಲಯ ಮುಖ್ಯ ಸಾಧ್ಯತೆ ಕುರಿತಾಗಿ ರಾಜಕೀಯ ಕಿಡಿ ಹತ್ತಿಕೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದವರು,"ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚುತ್ತೇವೆ. ಸಚಿವರನ್ನು ಮಂಡ್ಯ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಅಭಿಪ್ರಾಯಗಳನ್ನು ಬಹಿರಂಗಪಡಿಸಿದೆ.
ಇದೇ ವೇಳೆ ಅವರು,"ನಾನು ಶಾಸಕನಾಗಿ ಇರ್ತೀನೋ ಇಲ್ವೋ ಗೊತ್ತಿಲ್ಲ. ಆದರೆ ಮಂಡ್ಯ ವಿಶ್ವವಿದ್ಯಾಲಯವನ್ನು ಮುಚ್ಚಲು ಬಿಡುವುದಿಲ್ಲ. ನಾವು ಮೈಸೂರಿನ ಗುಲಾಮರಾಗಿ ಇರೋದಿಲ್ಲ. ಮಂಡ್ಯಕ್ಕೆ ಸ್ವಂತ ವಿಶ್ವವಿದ್ಯಾಲಯ ಬೇಕು, ಇದು ನಮ್ಮ ಸ್ವಾಭಿಮಾನ"ಎಂದು ಭಾವನಾತ್ಮಕವಾಗಿ ಮಾತನಾಡಿದರು.
ಸ್ಥಳೀಯ ಜನತೆ, ವಿದ್ಯಾರ್ಥಿಗಳು ಹಾಗೂ ಯುವಕರ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಅವರು ಮಾತುಗಳು ಇದ್ದವು. ಮಂಡ್ಯ ಜಿಲ್ಲೆಯ ಅಭಿವೃದ್ಧಿ ಮತ್ತು ಶಿಕ್ಷಣದ ದೃಷ್ಟಿಯಿಂದ ಈ ವಿಶ್ವವಿದ್ಯಾಲಯ ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.
ಮಂಡ್ಯ ಬಿವಿ ಉಳಿಸಬೇಕೆಂಬ ಬೇಡಿಕೆ ಈಗ ಜನಮಟ್ಟದಲ್ಲಿ ಗಟ್ಟಿಯಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ಈ ಬೆಳವಣಿಗೆ ಸರ್ಕಾರದ ಮೇಲೆ ಒತ್ತಡವನ್ನು ಹೆಚ್ಚಿಸುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮಂಡ್ಯ ವಿಶ್ವವಿದ್ಯಾಲಯ ಮುಚ್ಚುವ ಕುರಿತು ನಡೆಯುತ್ತಿರುವ ಚರ್ಚೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರು ಮಂಡ್ಯ ಸೇರಿದಂತೆ ಕೆಲವು ಹೊಸ ವಿಶ್ವವಿದ್ಯಾಲಯಗಳನ್ನು ಹಣಕಾಸಿನ ಕಾರಣಗಳಿಂದ ಮುಚ್ಚುವ ಸಾಧ್ಯತೆಗಳ ಬಗ್ಗೆ ಪ್ರಸ್ತಾಪಿಸಿದ್ದರು.
ಮಂಡ್ಯಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಬೇಕು ಎಂಬುದು ಹಲವು ವರ್ಷಗಳ ಹೋರಾಟದ ಫಲವಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ವಿವಿ ಘೋಷಣೆಯಾಗಿತ್ತು. ಆದರೆ ಈಗ ಹಣಕಾಸು ಹೊರೆ ಮತ್ತು ನಿರ್ವಹಣಾ ಕಾರಣಗಳನ್ನು ಉಲ್ಲೇಖಿಸಿ ಈ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬೆಳವಣಿಗೆಗೆ ವಿದ್ಯಾರ್ಥಿಗಳು, ಸ್ಥಳೀಯರು ಹಾಗೂ ಶಿಕ್ಷಣ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ನಡುವೆ ಕಾಂಗ್ರೆಸ್ ಪಕ್ಷದೊಳಗೆ ಭಿನ್ನ ದ್ವನಿಗಳು ಕೇಳಿಬಂದಿದ್ದು, ಸ್ವಪಕ್ಷದ ಶಾಸಕ ಗಾಣಿಗ ರವಿಕುಮಾರ್ ಸಚಿವರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಬಿವಿ ಉಳಿಸಬೇಕೆಂಬ ಹೋರಾಟವನ್ನು ಮತ್ತಷ್ಟು ಇವರ ಗೊಳಿಸುವ ಸೂಚನೆ ನೀಡಿದ್ದಾರೆ.
ಮಂಡ್ಯ ವಿವಿ ಸ್ಥಾಪನೆ ಹಿಂದೆ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ನೀಡುವ ಉದ್ದೇಶವಿತ್ತು. ಆದರೆ ಈಗಿನ ಮುಚ್ಚುವ ಪ್ರಸ್ತಾವನೆಯೂ ಆ ಉದ್ದೇಶಕ್ಕೆ ಹಿನ್ನಡೆ ಆಗಬಹುದು ಎಂಬ ಆತಂಕ ವ್ಯಕ್ತವಾಗಿದೆ.
ಸ್ಥಳೀಯ ಜನತೆ ಮತ್ತು ವಿದ್ಯಾರ್ಥಿ ಸಂಘಟನೆಗಳು ಕೂಡ ಈ ನಿರ್ಧಾರಗಳನ್ನು ವಿರೋಧಿಸುತ್ತಿದ್ದು, ಮಂಡ್ಯ ವಿವಿ ಉಳಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿವೆ. ಹಣಕಾಸು ಕಾರಣಗಳ ನೆಪದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು ಸರಿಯಲ್ಲ ಎಂಬ ಅಭಿಪ್ರಾಯವೂ ಬಲವಾಗುತ್ತಿದೆ.
ಒಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಭವಿಷ್ಯ ಇದೀಗ ಸರ್ಕಾರದ ನಿರ್ಧಾರ ಮತ್ತು ರಾಜಕೀಯ ಒತ್ತಡಗಳ ನಡುವೆ ತು ಗಾಡುಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಿಷಯ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.
Also Read: