<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಸರ್ಕಾರಿ ನೇಮಕಾತಿಯಲ್ಲಿ ಭಾರೀ ಅಕ್ರಮ ? 3 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕದ ಮೇಲೆ ಪ್ರಶ್ನೆ

ಸರ್ಕಾರಿ ನೇಮಕಾತಿಯಲ್ಲಿ ಭಾರೀ ಅಕ್ರಮ ? 3 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕದ ಮೇಲೆ ಪ್ರಶ್ನೆ
Summary: Serious allegations have been made that there has been irregularities in the recruitment of more than three thousand posts in the last two years. Questions have been raised about the transparency of the recruitment process, and a thorough investigation has been demanded. Here is the complete information about the case.

Belagavi News :

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ MLC ಸಿಟಿ ರವಿ, ಪ್ರಕರಣದ ಬಗ್ಗೆ ಸಮಗ್ರ ಹಾಗೂ ವಿಸ್ಪಕ್ಷಪಾತ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಳ ವ್ಯಾಪಾರ ನಡೆದಿರುವುದನ್ನು ಸೂಚಿಸುವ ಆಡಿಯೋ ಹಾಗೂ ವಿಡಿಯೋಗಳು ಲೀಕ್ ಆಗಿರುವುದಾಗಿ ಅವರು ಉಲ್ಲೇಖಿಸಿದ್ದಾರೆ. ಈ ಆರೋಪಗಳು ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ ಎಂದು ಹೇಳಿದ್ದಾರೆ.

ಸಾಮಾನ್ಯ ಸ್ಪರ್ದಾತ್ಮಕ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಗಳಿಸಿದ್ದ ಕೆಲವು ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆಯಲ್ಲಿ ಸಾಧಾರಣವಾಗಿ ಹೆಚ್ಚು ಅಂಕ ಗಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

KPSC requirement scam - ವೆಟನರಿ ಇನ್ಸ್ಪೆಕ್ಟರ್ ಮಾತ್ರವಲ್ಲ, AWE ಮತ್ತು PDO ನೇಮಕಾತಿಯಲ್ಲೂ ಅಕ್ರಮ ಆರೋಪ :

ಕೆಪಿಎಸ್ ಸಿ ನೇಮಕಾತಿ ಅಕ್ರಮದ ಆರೋಪವು ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂದು ಬಿಜೆಪಿ MLC ಸಿಟಿ ರವಿ ಆರೋಪಿಸಿದ್ದಾರೆ. ಈ ಹಿಂದೆ ನಡೆದ AWE ಹಾಗೂ PDO ನೇಮಕಾತಿ ಪ್ರಕ್ರಿಯೆಗಳಲ್ಲಿಯೂ ಇದೇ ರೀತಿಯ ಅಕ್ರಮಗಳು ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಸಾವಿರಾರು ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕೊರತೆಯಾಗಿದೆ ಎಂದು ಆರೋಪಿಸಿರುವ ಅವರು, ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಅಗ್ರಹಿಸಿದ್ದಾರೆ.

3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ - ಆಡಳಿತರೂಢ ಪಕ್ಷದ ವಿರುದ್ಧ ಸಿ.ಟಿ ರವಿ ಗಂಭೀರ ಆರೋಪ :

ಕಳೆದ ಎರಡು ವರ್ಷಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯ ಮೂಲಗಳಿಂದ ಲಭ್ಯವಾಗಿದೆ ಎಂದು ಬಿಜೆಪಿ MLC ಸಿ.ಟಿ. ರವಿ ಆರೋಪಿಸಿದ್ದಾರೆ.

ಈ ನೇಮಕಾತಿ ಅಕ್ರಮಗಳಲ್ಲಿ ಆಡಳಿತಾರೂಢ ಪಕ್ಷದ ಪಾರುಗಾರಿಕೆಯೂ ಇದೆ ಎಂದು ಗಂಭೀರ ಆರೋಪ ಮಾಡಿರುವ ಅವರು, ಪ್ರಕರಣದ ಕುರಿತು ಸ್ವತಂತ್ರ ಮತ್ತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದ್ದಾರೆ.

Also Read :

ಕರ್ನಾಟಕ - ತಮಿಳುನಾಡು ನಡುವೆ ಕಾವೇರಿ ಸಂಧಾನ : ಆ. 3 ರಂದು ಎರಡು ರಾಜ್ಯಗಳ ಸಿಎಂ ಸಭೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online