Belagavi News:
ಕರ್ನಾಟಕದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದೆ ಎಂಬ ಹೇಳಿಕೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಯಿತು.
ಶ್ರೀರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಲಾಯಿತು. ಸಮವಸ್ತ್ರ ನೀತಿ ಹಾಗೂ ಧಾರ್ಮಿಕ ಗುರುತುಗಳ ವಿಚಾರದಲ್ಲಿ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುತಾಲಿಕ್ , ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಶಾಲೆ ಮತ್ತು ಕಾಲೇಜುಗಳಿಗೆ ತೆರಳಬೇಕು ಎಂದು ಕರೆ ನೀಡಿದರು. ಈ ಹೇಳಿಕೆ ಮತ್ತಷ್ಟು ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದೆ.
ಹುಬ್ಬಳ್ಳಿ ಮೇ 14: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರ ಇದೀಗ ಮತ್ತೆ ರಾಜ್ಯ ರಾಜಕೀಯದಲ್ಲಿ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರ ಶಾಲಾ - ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ನಿರ್ಧಾರವು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರದ ಈ ಕ್ರಮವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಶ್ರೀ ರಾಮ್ ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿ ಘೋಷಣೆಗಳನ್ನು ಕೂಗಿದರು .
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕು ಎಂದು ಕರೆ ನೀಡಿದರು. ಈ ಹೇಳಿಕೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಮುಖ್ಯಾಂಶಗಳು:
ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಹಿನ್ನೆಲೆಗೆ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ
ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಶ್ರೀರಾಮ್ ಸೇನೆ ಬೃಹತ್ ಪ್ರತಿಭಟನೆ
ಸರ್ಕಾರದ ನಿರ್ಧಾರವನ್ನು ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದ ಪ್ರಮೋದ್ ಮುತಾಲಿಕ್
2022 ರಲ್ಲಿ ಬಿಜೆಪಿ ಸರ್ಕಾರವಿದ್ದಾಗ, ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗಿತ್ತು. ಪರ- ವಿರೋಧ ಹೋರಾಟಗಳು, ಆರೋಪ, ಪ್ರತ್ಯಾರೋಪಗಳು ನಡೆದಿದ್ದವು. ನಂತರ ವಿವಾದ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದೆ. ಸರ್ಕಾರ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನಡೆ ನೀಡಲಾಗಿದೆ ಅನ್ನೋ ಅಧಿಸೂಚನೆ ಹೊರಡಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ಬೆನ್ನಲ್ಲೇ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಶ್ರೀ ರಾಮ್ ಸೇನೆ ಸಂಘಟನೆ ಸರ್ಕಾರದ ಹಿಜಾಬ್ ಸಂಬಂಧಿತ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು , ಈ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟ ನಡೆಸಲಾಗಿದೆ. ಶ್ರೀರಾಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಸರ್ಕಾರದ ವಿರೋಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಹಿಜಾಬ್ ಧರಿಸಿರುವ ಫೋಟೋಗಳನ್ನು ಪ್ರದರ್ಶಿಸಿ ನಂತರ ಅವುಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಜೊತೆಗೆ ಸರ್ಕಾರದ ಆದೇಶ ಪ್ರತಿಗಳನ್ನು ಹರಿದು ಹಾಕಿ ತಮ್ಮ ವಿರೋಧವನ್ನು ತೀವ್ರ ವ್ಯಕ್ತಪಡಿಸಿದರು.
ಕೇಸರಿ ಶಾಲು ಧರಿಸಿಕೊಂಡು ಹೋಗುವಂತೆ ವಿದ್ಯಾರ್ಥಿಗಳಿಗೆ ಪ್ರಮೋದ್ ಮುತಾಲಿಕ್ ಕರೆ
ಕೇಸರಿ ಶಾಲು ಧರಿಸಿಕೊಂಡು ಶಾಲೆ ಹಾಗೂ ಕಾಲೇಜುಗಳಿಗೆ ತೆರಳವಂತೆ ವಿದ್ಯಾರ್ಥಿಗಳಿಗೆ ಶ್ರೀ ರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿ ಕರೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು ಎಲ್ಲೆಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರುತ್ತಾರೋ ಅಲ್ಲೆಲ್ಲಾ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಹೋಗಬೇಕು ಎಂದು ಹೇಳಿದ್ದಾರೆ. ನಿಮ್ಮ ರಕ್ಷಣೆಗೆ ನಾವು ಇರುತ್ತೇವೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಎಷ್ಟು ಪ್ರಕರಣ ಹಾಕಿದರೂ ನಾವು ಎದುರಿಸುತ್ತೇವೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಹಿಜಾಬ್ ಸಂಬಂಧಿತ ನಿರ್ಧಾರವನ್ನು ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಅವರು ಹೇಳಿದ್ದಾರೆ. ಶೀಘ್ರದಲ್ಲೇ ಈ ಕುರಿತು ಪಿಐಎಲ್ (PIL) ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಇಂದಿರಾಗಾಂಧಿಯವರು ಮಕ್ಕಳಲ್ಲಿ ಬೇಧ ಭಾವ ಇರಬಾರದು ಎಂಬ ಕಾರಣಕ್ಕೆ ಸಮವಸ್ತ್ರ ನಿಯಮ ಜಾರಿಗೆ ತಂದಿದ್ದರು. ಆದರೆ ಅದೇ ಪಕ್ಷದ ಸರ್ಕಾರ ಇದೀಗ ಹಿಜಾಬ್ ಗೆ ಅವಕಾಶ ನೀಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಹಿಜಾಬ್ ಧರಿಸಿದರೆ ಅದು ಧರ್ಮ ಗುರುತು ಸ್ಪಷ್ಟವಾಗುತ್ತದೆ ಎಂದು ಹೇಳಿದವರು, ಏತಕ್ಕೆ ಮೂಡಿಸಬೇಕಿದ್ದ ಸರ್ಕಾರವೇ ಮಕ್ಕಳ ಮನಸ್ಸು ಒಡೆಯುವ ಕೆಲಸ ಮಾಡುತ್ತಿದ್ದೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಆರಂಭವಾಗಿದೆ. ಪರ-ವಿರೋಧ ಚರ್ಚೆಗಳು, ಆರೋಪ- ಪ್ರತ್ಯಾರೋಪಗಳು ಆರಂಭವಾಗಿವೆ. ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.
Also Read:
ಬೆಂಗಾವಲು ಪಡೆ ವಾಹನ ಕಡಿತಕ್ಕೆಸಿಎಂ ಗ್ರೀನ್ ಸಿಗ್ನಲ್? ಸಿದ್ದರಾಮಯ್ಯ ಸ್ಪಷ್ಟನೆ