belagavi news :
ಕೇರಳದ ಕೊಟ್ಟಿಯೂರು ದೇವಾಲಯದಲ್ಲಿ ನಡೆಯುತ್ತಿರುವ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರೊಂದಿಗೆ ದುರ್ವರ್ತನೆ ನಡೆದಿದೆ ಎಂದು ಆರೋಪಗಳು ಕೇಳಿ ಬಂದಿವೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕೆಲ ಭಕ್ತರು ಆರೋಪಿಸಿದ್ದು, ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡುವುದು, ಅವಮಾನಿಸುವುದು ಹಾಗೂ ಕಾಲಿನಿಂದ ನೀರು ಎರಚಿದಂತೆ ಕಾಣುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಘಟನೆಗಳ ಬಗ್ಗೆ ಕನ್ನಡಿಗ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಕ್ತರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ, ವಿಐಪಿ ಟಿಕೆಟ್ ವ್ಯವಸ್ಥೆ ಮತ್ತು ದೇವಸ್ಥಾನದಲ್ಲಿನ ವ್ಯವಸ್ಥಾಪನೆ ಕುರಿತು ಕೆಲವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳ ಆಧಾರದ ಮೇಲೆ ಹಲವರು ತಮ್ಮ ಅಸಮಾಧಾನ ಹೊರಹಾಕಲಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ಹಾಗೂ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಆದಾಗ್ಯೂ, ಈ ಆರೋಪಗಳ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಸಂಬಂಧಿತ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಘಟನೆಯ ಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ತನಿಕೆಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗ ಭಕ್ತನೊರ್ವನಿಗೆ ದುರ್ವರ್ತನೆ ನಡೆದಿದೆ ಎಂದು ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇವಸ್ಥಾನದ ಸಿಬ್ಬಂದಿ ಮಹಿಳಾ ಭಕ್ತರನ್ನು ತಲ್ಲಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕೆಲ ಭಕ್ತರು ಆರೋಪಿಸಿದ್ದು, ಈ ಸಂಬಂಧದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಘಟನೆಯಿಂದ ಬೇಸರಗೊಂಡಿರುವ ಕೆಲ ಕನ್ನಡಿಗರು, ಪರಿಸ್ಥಿತಿ ಸುಧಾರಾಹಿಸುವವರಿಗೆ ಯಾರು ಕೊಟ್ಟಿಯೂರಿಗೆ ಭೇಟಿ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
ಪ್ರತಿ ವರ್ಷ ನಡೆಯುವ ವೈಶಾಖ ಮಹೋತ್ಸವದ ವೇಳೆ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ಈ ಬಾರಿ ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ವರ್ಷ ಸಾಮಾಜಿಕ ಜಾಲತಾಣಗಳಲ್ಲಿ ಈ ಕ್ಷೇತ್ರದ ಬಗ್ಗೆ ಹೆಚ್ಚಿನ ಪ್ರಚಾರ ಸಿಕ್ಕ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಅಲ್ಲಿ ಕನ್ನಡಿಗರಿಗೆ ಸೂಕ್ತ ಗೌರವ ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಕ್ತರೊಂದಿಗೆ ಅನುಚಿತ ವರ್ತನೆ ನಡೆದಿರುವ ಆರೋಪಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.
ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ವಿಐಪಿ ಟಿಕೆಟ್ ಸ್ಕ್ಯಾಮ್:
ಶಿವನ ದರ್ಶನಕ್ಕೆ 8 ರಿಂದ 10 ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದ್ದು, ಇಲ್ಲಿ 1000 ರೂಪಾಯಿ ಮುಖ ಬೆಲೆಯ ವಿಐಪಿ ಟಿಕೆಟ್ ಹೆಸರಿನಲ್ಲಿ ದೊಡ್ಡ ಸ್ಕ್ಯಾಮ್ ನಡೆಯುತ್ತಿದೆ. ಹಣ ಕೊಟ್ಟರು ಸರಿಯಾಗಿ ದರ್ಶನ ಭಾಗ್ಯ ಸಿಗುತ್ತಿಲ್ಲ. ಹೆಣ್ಣು ಮಕ್ಕಳು ಗಂಟೆಗಟ್ಟಲೆ ಸಾಲಿನಲ್ಲಿ ನಿಂತಿದ್ದರೂ ಮುಂದೆ ಹೋಗಲು ಬಿಡದೆ, ಕೈ ಹಿಡಿದು ಕೆಟ್ಟದಾಗಿ ನೂಕುತ್ತಿದ್ದಾರೆ ಎಂದು ಕರ್ನಾಟಕದ ಭಕ್ತರು ಅಳಲು ತೋಡಿಕೊಂಡಿದ್ದಾರೆ. ಇದೇ ವೇಳೆ ದೇವಸ್ಥಾನದ ಸಿಬ್ಬಂದಿ ಮಹಿಳೆಯರ ಮೇಲೆ ಕಾಲಿನಿಂದ ನೀರು ಎರಚುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ಭಕ್ತರ ಹೇಳಿಕೆಯ ಪ್ರಕಾರ, ದರ್ಶನಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೆ ಗೇಟ್ ಬಳಿ ಭಕ್ತರು ಗಂಟಗಟ್ಟಲೆ ಕಾಯುವಂತಾಗಿದೆ. ತಮಗೆ ಬೇಕಾದವರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಜೊತೆಗೆ, ಕೆಲವು ಸಿಬ್ಬಂದಿ ಭಕ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪಗಳು ಕೂಡ ಹೊರ ಬಂದಿದೆ.
ಈ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ದೇವರ ಸನ್ನಿಧಿಯಲ್ಲಿ ನಡೆದಿರುವ ಈ ರೀತಿಯ ವರ್ತನೆಗೆ ಕನ್ನಡಿಗ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಿತ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಹೆಚ್ಚಾಗಿದೆ.
Also Read:
ಸ್ಯಾಂಡಲ್ ವುಡ್ ನೆಪೋಟಿಸಂ ವಿವಾದಕ್ಕೆ ಬ್ರೇಕ್ ಹಾಕಿದ ಶಿವಣ್ಣ: ಖಡಕ್ ಸ್ಟೇಟ್ಮೆಂಟ್ ವೈರಲ್