<?= $pageTitle ?>
Logo
ಮುಖಪುಟ ಓದುವುದು ಕೇಳು
Politics

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ? ಸಿಎಂಗೆ ಜೋಶಿ ಬರೆದ ಪತ್ರ ವೈರಲ್

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ? ಸಿಎಂಗೆ ಜೋಶಿ ಬರೆದ ಪತ್ರ ವೈರಲ್
Summary: Joshi has written a letter to CM regarding the allegations of KPSC Chairman's abuse of power. Here are the main allegations, demands and full details of the controversy in the letter.

Belagavi News :

ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಹಾಗೂ ನೇಮಕಾತಿ ಅಕ್ರಮಗಳ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ಕಾರ್ಯದರ್ಶಿಕ ತನಿಖೆ ನಡೆಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಪತ್ರದಲ್ಲಿ, ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್ . ಸಾಹುಕಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರಿಗೆ ಅನುಕೂಲವಾಗುವಂತೆ ನಡೆದುಕೊಂಡಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಲಾಗಿದೆ. ಒಬ್ಬ ಪುತ್ರಿಗೆ ಈಗಾಗಲೇ ಸರ್ಕಾರಿ ಉದ್ಯೋಗ ದೊರಕುವಂತೆ ಮಾಡಿದ್ದು, ಮತ್ತೊಬ್ಬ ಪುತ್ರಿಗೆ ಸರ್ಕಾರಿ ಹುದ್ದೆ ದೊರಕಿಸಲು ಯತ್ನ ನಡೆಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಇದಕ್ಕಾಗಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆಗೆ ಸಹಕರಿಸಿದ್ದಾರೆ ಎಂಬ ಆರೋಪವು ಕೇಳಿಬಂದಿದೆ.

ಇದರ ಜೊತೆಗೆ, ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವಿಷಯವನ್ನು ಉಲೇಖಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದ್ದು, ಕೆಪಿಎಸ್‌ಸಿ ಅಂತಹ ಸಂವಿಧಾನದ ಸಂಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸ ಉಳಿಸಬೇಕಾದರೆ ಸ್ವತಂತ್ರ ಹಾಗೂ ಸಮಗ್ರ ತನಿಕೆ ಅಗತ್ಯ ಎಂದು ಪ್ರಲ್ಹಾದ್ ಜೋಶಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಕರಣದ ಸತ್ಯತೆ ಬಹಿರಂಗವಾಗಲು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಹಾಗೂ ರಾಜ್ಯಪಾಲರನ್ನು ಮನವಿ ಮಾಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷ ಶಿವಶಂಕರಪ್ಪ ಎಸ್ . ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ ಆರೋಪದ ಬೆನ್ನಲ್ಲೇ ಮತ್ತಷ್ಟು ಗಂಭೀರ ಆರೋಪಗಳು ಕೇಳಿ ಬಂದಿವೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನ್ಯಾಯ ತತ್ವ ಉಲ್ಲಂಘನೆ, ಸ್ವಜನ ಪಕ್ಷಪಾತ ಹಾಗೂ ಮೀಸಲಾತಿ ನಿಯಮಗಳ ದುರ್ಬಳಕೆ ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡ ಆರೋಪ :

ಪತ್ರದಲ್ಲಿನ ಮಾಹಿತಿಯ ಪ್ರಕಾರ, ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರೇ ಅಭ್ಯರ್ಥಿಗಳಾಗಿದ್ದರು. ಅದಾಗಿಯೂ, ತಾವೇ ಆಯೋಗದ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಇತ್ತೀಚೆಗೆ ಪ್ರಕಟಗೊಂಡ ಆಯ್ಕೆ ನಡಾವಳಿಗಳಿಗೆ ಸಹ ಸಹಿ ಹಾಕಿರುವುದು ಗಂಭೀರ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಈ ನಡೆ ನ್ಯಾಯದ ಮೂಲ ತತ್ವಗಳಾದ "principals of natural justice" ಗೆ ವಿರುದ್ಧವಾಗಿದ್ದು, ಸಾರ್ವಜನಿಕ ಸಂಸ್ಥೆಯ ನೈತಿಕ ಮೌಲ್ಯಗಳಿಗೆ ಧಕ್ಕೆ ತರುವಂತದ್ದು ಎಂದು ಪ್ರಲ್ಹಾದ್ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೀಸಲಾತಿ ಹಾಗೂ ಆದಾಯ ಪ್ರಮಾಣ ಪತ್ರದ ದುರ್ಬಳಕೆ ಆರೋಪ :

ಇದಲ್ಲದೆ, ಅಧ್ಯಕ್ಷರ ಪುತ್ರಿಯರ ಪೈಕಿ ಒಬ್ಬರು ಪಡೆದಿರುವ ಮೀಸಲಾತಿ ಅರ್ಹತೆ ಬಗ್ಗೆಯೂ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ನಿಗದಿಪಡಿಸಿದ ಆದಾಯ ಮಿತಿಯನ್ನು ಪೂರೈಸದೆ ಇದ್ದರೂ ಮೀಸಲಾತಿ ಸೌಲಭ್ಯ ಪಡೆದಿರುವ ಸಾಧ್ಯತೆಯಿದ್ದು, ಸುಳ್ಳು ಮಾಹಿತಿ ಹಾಗೂ ಆದಾಯ ಪ್ರಮಾಣ ಪತ್ರದ ಮೂಲಕ ಮೀಸಲಾತಿ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪವು ಕೇಳಿಬಂದಿದೆ.

ಈ ರೀತಿಯ ಬೆಳವಣಿಗೆಗಳು ಅರ್ಹ ಮತ್ತು ಪ್ರಾಮಾಣಿಕ ಕೆಪಿಎಸ್ ಸಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಇಡೀ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ದಕ್ಕೆ ತರುವಂತಿದೆ ಎಂದು ಜೋಶಿ ತಮ್ಮ ಪತ್ರದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಆಗ್ರಹ :

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೋಪದ ಬಗ್ಗೆ ಸ್ವತಂತ್ರ, ಪಾರದರ್ಶಕ ಹಾಗೂ ಉನ್ನತ ಮಟ್ಟದ ತನಿಖೆಗಳು ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿ ಬಂದಿರುವ ಸೃಜನ ಪಕ್ಷಪಾತ ಹಾಗೂ ಅಧಿಕಾರ ದುರುಪಯೋಗ ಆರೋಪಗಳ ಕುರಿತು ಉನ್ನತ ಮಠದ ಪಾರದರ್ಶಕ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೆಪಿಎಸ್‌ಸಿ ಅಂತಹ ಸಂವಿಧಾನಾತ್ಮಕ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಜೋಶಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸಮಗ್ರ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದಾರೆ.

ಲಕ್ಷಾಂತರ ಕೆಪಿಎಸ್ಸಿ ಉದ್ಯೋಗ ಆಕಾಂಕ್ಷಿಗಳಿಗೆ ನ್ಯಾಯ ಒದಗಿಸಲು ಹಾಗೂ ನೇಮಕಾತಿ ಪ್ರಕ್ರಿಯೆಯ ಮೇಲಿನ ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಲು ಈ ತನಿಖೆ ಅಗತ್ಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online