H16 News
Logo

By Samreen | Published on November 19, 2025

Image Not Found
Trending / November 19, 2025

ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಕಲ್ಯಾಣ ಕರ್ನಾಟದಲ್ಲಿ ಇನ್ನಷ್ಟು ಕುಸಿದ ತಾಪಮಾನ

Karnataka Weather: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತುಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕದ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯೆತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather Forecast) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿಯ ವಾತಾವರಣ ಇರಲಿದೆ. ರಾಜ್ಯದ ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ: ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಂತರ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲೂ ಲಘು ಮಳೆ: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಶೀತ: ಕಲ್ಯಾಣ ಕರ್ನಾಟಕದ ಬೀದರ್, ಬಾಗಲಕೋಟೆ, ಬೆಳಗಾವಿ ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು ವಿಜಯನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 7 ರಿಂದ 9 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನದಲ್ಲಿ ಕುಸಿತವಾಗಲಿದ್ದು, ಸೋಮವಾರ ಬೀದರ್ನಲ್ಲಿ ಈಗಾಗಲೆ 9.5°C ನಷ್ಟು ತಾಪಮಾನ ವರದಿಯಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ನವೆಂಬರ್ 18 ರಿಂದ 21ರ ವರೆಗೆ ರಾಜ್ಯದಲ್ಲಿ, ಅದರಲ್ಲಿಯೂ ಉತ್ತರ ಒಳನಾಡು ಪ್ರದೇಶಗಳಲ್ಲಿ ವಿಪರೀತ ಚಳಿ ಕಂಡುಬರಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದ್ದು, ಜನರಿಗೆ ಮನೆಯಿಂದ ಹೊರಬರದೆ ಸುರಕ್ಷಿತವಾಗಿರುವಂತೆ ಪ್ರಾಧಿಕಾರ ಸೂಚಿಸಿದೆ. ನವೆಂಬರ್ 21ರ ನಂತರ ತಾಪಮಾನ ಸುಧಾರಿಸಬಹುದೆಂದು ಹೇಳಲಾಗಿದೆ. ಇನ್ನಷ್ಟು ಓದಿರಿ: ಈ ಮಾರ್ಗಗಳಲ್ಲಿ ಇಂದು ಹೆವಿ ಟ್ರಾಫಿಕ್; ಬದಲಿ ಮಾರ್ಗ ಇಲ್ಲಿವೆ
Sponsored Ads
image computer academy
image computer academy
image computer academy
image computer academy
LANDSCAPING IN CAD
LANDSCAPING IN CAD
HSRNEWS
HSRNEWS

Related News

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy