<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ನೀಟ್ ವಿವಾದದ ನಡುವೆ ಮೋದಿ ಮಾತು : ಪರೀಕ್ಷಾ ವ್ಯವಸ್ಥೆ ರಕ್ಷಣೆ ಎಲ್ಲರ ಜವಾಬ್ದಾರಿ

ನೀಟ್ ವಿವಾದದ ನಡುವೆ ಮೋದಿ ಮಾತು : ಪರೀಕ್ಷಾ ವ್ಯವಸ್ಥೆ ರಕ್ಷಣೆ ಎಲ್ಲರ ಜವಾಬ್ದಾರಿ
Summary: Prime Minister Narendra Modi has said that preventing question paper leaks is not just the government's responsibility; it is the national responsibility of the entire country.

belagavi news :

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ರಾಷ್ಟ್ರೀಯ ಜವಾಬ್ದಾರಿ :ಎನ್ ಡಿ ಎ ಸಭೆಯಲ್ಲಿ ಪ್ರಧಾನಿ ಮೋದಿ

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎನ್.ಡಿ.ಎ ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯಲ್ಲಿ ಗಂಭೀರವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯುವುದು ಕೇವಲ ಸರ್ಕಾರದ ಕರ್ತವ್ಯವಲ್ಲ ,ಅದು 'ರಾಷ್ಟ್ರೀಯ ಜವಾಬ್ದಾರಿ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಭೆಯ ಬಳಿಕ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದ್ದಾರೆ.

ಪರೀಕ್ಷಾ ಕ್ರಮಗಳಲ್ಲಿ ಭಾಗವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಹಿತಾಸಕ್ತಿಯಿಂದ ಪಾರದರ್ಶಕ ಹಾಗೂ ದೋಷರಹಿತ ಪರೀಕ್ಷಾ ವ್ಯವಸ್ಥೆ ರೂಪಿಸಲು ಎಲ್ಲರೂ ಕಡ್ಡಾಯವಾಗಿ ಕೆಲಸ ಮಾಡಬೇಕಿದೆ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ವಿಶ್ವಾಸಾರ್ಹತೆ ಕಾಪಾಡುವುದು ಅತ್ಯಂತ ಮುಖ್ಯವಾಗಿದ್ದು, ಯಾವುದೇ ಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಮೋದಿ ಒತ್ತಿ ಹೇಳಿದ್ದಾರೆ.

ಪರೀಕ್ಷಾ ಅಕ್ರಮ ಆರೋಪಿಗಳಿಗೆ ಕಠಿಣ ಶಿಕ್ಷೆ ಅಗತ್ಯ : ಪ್ರಧಾನಿ ಮೋದಿ ಸೂಚನೆ

ಪರೀಕ್ಷಾ ಆಕ್ರಮಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ಕಾನೂನಿನಡಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕಾಪಾಡಲು ಭವಿಷ್ಯದಲ್ಲಿ ಯಾವುದೇ ರೀತಿಯ ಸೋರಿಕೆ ನಡೆಯದಂತೆ ಪಾರದರ್ಶಕ ಮತ್ತು ದೋಷ ರಹಿತ ಪರೀಕ್ಷಾ ವ್ಯವಸ್ಥೆ ರೂಪಿಸುವ ಅಗತ್ಯವಿದೆಯೆಂದು ಪ್ರಧಾನಿ ಕರೆ ನೀಡಿದ್ದಾರೆ.

ಸರ್ಕಾರ, ಶಿಕ್ಷಣ ಸಂಸ್ಥೆಗಳು ಹಾಗೂ ಸಂಬಂಧಿತ ವ್ಯವಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಪರೀಕ್ಷಾ ಪ್ರಕ್ರಿಯೆಯನ್ನು ಬಲಪಡಿಸಬೇಕು ಎಂದು ಮೋದಿ ಹೇಳಿದ್ದಾರೆ. ಇದೇ ವೇಳೆ ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯುವಂತೆ ಮಾಡಲು ಪ್ರಧಾನಿ ಎನ್ ಡಿ ಎ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಯುವಕರ ಭವಿಷ್ಯವಿ ಆದ್ಯತೆ : ಈ ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಷಯವಲ್ಲ ಎಂದ ಪ್ರಧಾನಿ ಮೋದಿ

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ದೇಶದ ಭವಿಷ್ಯ ಮತ್ತು ಯುವಜನರ ಹಿತಕ್ಕಾಗಿ ಕೆಲಸ ಮಾಡುವುದು ಪ್ರತಿಯೊಬ್ಬ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎನ್ ಡಿ ಎ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಲು ಮೈತ್ರಿಕೂಟದ ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ. ಇದೇ ವೇಳೆ ವಿರೋಧ ಪಕ್ಷಗಳು ಕೂಡ ಗದ್ದಲಕ್ಕೆ ಸೀಮಿತವಾಗದೆ, ದೇಶದ ಹಿತ ದೃಷ್ಟಿಯಿಂದ ರಚನಾತ್ಮಕ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಆಶಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ರಾಜಕೀಯ ವಿಷಯವಾಗಬಾರದು. ಇದು ರಾಷ್ಟ್ರೀಯ ಸಮಸ್ಯೆಯಾಗಿದ್ದು, ಯುವಕರ ಭವಿಷ್ಯ ಮತ್ತು ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಯುವಕರ ಕನಸುಗಳು ಮತ್ತು ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೋದಿ ತಿಳಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಜ ಜನತಾ ಪಾರ್ಟಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online