<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ವಿದೇಶದಲ್ಲೂ ಮೋದಿ ಕ್ರೇಜ್ ! ಆಕ್ಲೆಂಡ್ ನಲ್ಲಿ ಪ್ರಧಾನಿಯ ಸ್ವಾಗತಕ್ಕೆ ಜನಸಾಗರ

ವಿದೇಶದಲ್ಲೂ ಮೋದಿ ಕ್ರೇಜ್ ! ಆಕ್ಲೆಂಡ್ ನಲ್ಲಿ ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
Summary: Prime Minister Narendra Modi received a grand welcome in Auckland, New Zealand, with the Indian community celebrating with slogans of 'Modi Modi'. Here are the highlights of the Prime Minister's visit.

Belagavi News :

ನ್ಯೂಜಿಲ್ಯಾಂಡ್ ನ ಆಕ್ಲೆಂಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ಸ್ವಾಗತ ದೊರೆತಿದೆ. ಪ್ರಧಾನಿಯ ಆಗಮನದ ಹಿನ್ನೆಲೆಯಲ್ಲಿ ಭಾರತೀಯ ಸಮುದಾಯದವರು ಸೇರಿದಂತೆ ಅಪಾರ ಸಂಖ್ಯೆಯ ಜನರು ಸೇರಿ ''ಮೋದಿ ಮೋದಿ '' ಘೋಷಣೆಗಳೊಂದಿಗೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಪ್ರಧಾನಿ ಮೋದಿ ಅವರ ನ್ಯೂಜಿಲ್ಯಾಂಡ್ ಬೇಟಿಯ ಹಿನ್ನೆಲೆಯಲ್ಲಿ ಆಕ್ಲೆಂಡ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಜನರು ಭಾರತದ ಧ್ವಜಗಳನ್ನು ಹಿಡಿದು, ಸಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಘೋಷಣೆಗಳ ಮೂಲಕ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು.

ವಿದೇಶದಲ್ಲಿರುವ ಭಾರತೀಯ ಸಮುದಾಯಗಳೊಂದಿಗೆ ಪ್ರಧಾನಿ ಮೋದಿ ಅವರ ಸಂವಾದ ಕಾರ್ಯಕ್ರಮಕ್ಕೂ ವಿಶೇಷ ಮಹತ್ವ ನೀಡಲಾಗಿದೆ. ಈ ವೇಳೆ ಭಾರತ - ನ್ಯೂಜಿಲ್ಯಾಂಡ್ ಸಂಬಂಧಗಳ ಬಲವರ್ಧನೆ, ವ್ಯಾಪಾರ, ಹೂಡಿಕೆ , ಶಿಕ್ಷಣ ಹಾಗೂ ವಿವಿಧ ಕ್ಷೇತ್ರಗಳ ಸಹಕಾರದ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.

Sponsored

ಆಕ್ಲೆಂಡ್ ನಲ್ಲಿ ಪ್ರಧಾನಿಗೆ ದೊರೆತ ಸ್ವಾಗತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರತೀಯ ಸಮುದಾಯದ ಉತ್ಸಾಹ ಗಮನ ಸೆಳೆದಿದೆ.

ನ್ಯೂಜಿಲ್ಯಾಂಡ್ ನಲ್ಲಿ ಪ್ರಧಾನಿ ಮೋದಿ - ಆಕ್ಲೆಂಡ್ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಭಾಗಿ :

ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸದ್ಯ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದು, ಕೆಲವೇ ಕ್ಷಣಗಳಲ್ಲಿ ಆಕ್ಲೆಂಡ್ ನಲ್ಲಿ ನಡೆಯಲಿರುವ ಭಾರತೀಯ ಸಮುದಾಯದವರ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗೆ ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನ್ಯೂಜಿಲ್ಯಾಂಡ್ ನಲ್ಲಿರುವ ಭಾರತೀಯ ಸಮುದಾಯದವರು ಪ್ರಧಾನಿಯನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದು, ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ನಿರೀಕ್ಷೆ ಇದೆ.

Sponsored

ಪ್ರಧಾನಿ ಮೋದಿ ಅವರ ನ್ಯೂಜಿಲ್ಯಾಂಡ್ ಭೇಟಿ ಭಾರತ - ನ್ಯೂಜಿಲ್ಯಾಂಡ್ ನಡುವಿನ ದ್ವಿಪಕ್ಷಿಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಮಹತ್ವ ಪಡೆದಿದೆ. ವ್ಯಾಪಾರ, ಹೂಡಿಕೆ, ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಕುರಿತು ಎರಡು ದೇಶಗಳ ನಾಯಕರು ಚರ್ಚಿಸುವ ಸಾಧ್ಯತೆ ಇದೆ.

ಆಕ್ಲೆಂಡ್ ನಲ್ಲಿ ನಡೆಯಲಿರುವ ಸಮುದಾಯ ಕಾರ್ಯಕ್ರಮದತ್ತ ಭಾರತೀಯ ಮೂಲದ ಜನರಲ್ಲಿ ಹೆಚ್ಚಿನ ಕುತೂಹಲ ಮೂಡಿದ್ದು, ಪ್ರಧಾನಿಯ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದೆ.

ಆಕ್ಲೆಂಡ್ ನಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಜನಸಾಗರ - 40 ವರ್ಷಗಳ ಬಳಿಕ ಭಾರತದ ಪ್ರಧಾನಿಯ ನ್ಯೂಜಿಲ್ಯಾಂಡ್ ಭೇಟಿ :

ನ್ಯೂಜಿಲ್ಯಾಂಡ್ ನ ಅಪ್ಲೈಡ್ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಭಾರತೀಯ ಸಮುದಾಯದವರು ಸೇರಿದಂತೆ ಸಾವಿರಾರು ಜನರು ಸೇರಿದ್ದಾರೆ. "ಮೋದಿ ಮೋದಿ " ಘೋಷಣೆಗಳೊಂದಿಗೆ ಜನರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

Sponsored

ಪ್ರಧಾನಿ ಮೋದಿ ಅವರ ನ್ಯೂಜಿಲ್ಯಾಂಡ್ ಭೇಟಿ ಐತಿಹಾಸಿಕ ಮಹತ್ವ ಪಡೆದಿದೆ. ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿ ಒಬ್ಬರು ನ್ಯೂಜಿಲ್ಯಾಂಡ್ ಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಈ ಬೇಟಿಯು ಭಾರತ- ನ್ಯೂಜಿಲ್ಯಾಂಡ್ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.

ಆಕ್ಲೆಂಡ್ ನಲ್ಲಿ ನಡೆಯಲಿರುವ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಕೂಡ ಉಪಸ್ಥಿತರಿರಲಿದ್ದಾರೆ.

ಪ್ರಧಾನಿ ಬೇಟಿಯ ವೇಳೆ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ, ಹೂಡಿಕೆ, ಶಿಕ್ಷಣ, ತಂತ್ರಜ್ಞಾನ ಹಾಗೂ ದ್ವಿಪಕ್ಷಿಯ ಸಹಕಾರದ ಕುರಿತು ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ನ್ಯೂಜಿಲ್ಯಾಂಡ್ ನಲ್ಲಿರುವ ಭಾರತೀಯ ಸಮುದಾಯವು ಈ ಭೇಟಿಯನ್ನು ಸಂಭ್ರಮದಿಂದ ಸ್ವಾಗತಿಸುತ್ತಿದೆ.

ಮೋದಿ - ಕ್ರಿಸ್ಟೋಫರ್ ಲಕ್ಸನ್ ದ್ವಿಪಕ್ತಿಯ ಮಾತುಕತೆ - 2030 ರ ವೇಳೆಗೆ ₹35,000 ಕೋಟಿ ವ್ಯಾಪಾರ ಗುರಿ :

Sponsored

ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಮ್ಯುನಿಟಿ ಇವೆಂಟ್ ಗೂ ಮುನ್ನ ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಿದರು. ಭಾರತ - ನ್ಯೂಜಿಲ್ಯಾಂಡ್ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದರು.

ಮಾತುಕತೆ ಬಳಿಕ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ, 2030ರ ವೇಳೆಗೆ ಉಭಯ ದೇಶಗಳ ನಡುವಿನ ದ್ವಿಪಕ್ಷಿಯ ವ್ಯಾಪಾರವನ್ನು ₹ 35 ,000 ಕೋಟಿ ಮಟ್ಟಕ್ಕೆ ಹೆಚ್ಚಿಸುವ ಗುರಿ ಹೊಂದಿರುವುದಾಗಿ ನಾಯಕರು ತಿಳಿಸಿದ್ದಾರೆ.

ವ್ಯಾಪಾರ, ಹೂಡಿಕೆ, ಶಿಕ್ಷಣ, ತಂತ್ರಜ್ಞಾನ, ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಕುರಿತು ಪ್ರಧಾನಿ ಮೋದಿ ಮತ್ತು ಕ್ರಿಸ್ಟೋಫರ್ ಲಕ್ಸನ್ ಚರ್ಚಿಸಿದ್ದಾರೆ. ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಸ್ನೇಹ ಸಂಬಂಧವನ್ನು ಹೊಸ ಹಂತಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ನ್ಯೂಜಿಲ್ಯಾಂಡ್ ಭೇಟಿ ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿ ಒಬ್ಬರ ಐತಿಹಾಸಿಕ ಭೇಟಿಯಾಗಿದ್ದು, ಅಭಿನಯದ ಎರಡು ವರ್ಷಗಳ ಸಂಬಂಧದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online