<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ವಿದ್ಯಾರ್ಥಿಗಳ ಭವಿಷ್ಯ ಸುರಕ್ಷಿತಗೊಳಿಸಲು ಮೋದಿ ಸರ್ಕಾರ ಬದ್ಧ : ಪ್ರಲ್ಹಾದ್ ಜೋಶಿ

ವಿದ್ಯಾರ್ಥಿಗಳ ಭವಿಷ್ಯ ಸುರಕ್ಷಿತಗೊಳಿಸಲು ಮೋದಿ ಸರ್ಕಾರ ಬದ್ಧ : ಪ್ರಲ್ಹಾದ್ ಜೋಶಿ
Summary: Prime Minister Narendra Modi is giving top priority to the future of students, Union Minister Pralhad Joshi has said. His important statement on education, youth development and future.

Belagavi News :

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಹಾಗೂ ತ್ವರಿತ ಶಿಕ್ಷೆ ಖಚಿತಪಡಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ರಾಜ್ಯ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದರು. ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.

ಪರೀಕ್ಷಾ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಪುನರುಚ್ಚರಿಸಿದ ಜೋಶಿ, ಈ ವಿಷಯದಲ್ಲಿ ಸರ್ಕಾರ ಮುಕ್ತ ಚರ್ಚೆಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ವಿರೋಧ ಟೀಕೆಗೆ ಪ್ರತಿಕ್ರಿಸಿದ ಅವರು, ಪರೀಕ್ಷಾ ಅಕ್ರಮಗಳಂತಹ ಗಂಭೀರ ವಿಷಯಗಳನ್ನು ರಾಜಕೀಯ ಪ್ರಚಾರದ ಸಾಧನವನ್ನಾಗಿ ಬಳಸಬಾರದು ಎಂದು ಹೇಳಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವನ್ನು ವೇಗಗೊಳಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ದ, ಆದರೆ ವಿರೋಧ ಪಕ್ಷವೇ ಹಿಂದೆ ಸರಿಯುತ್ತಿದೆ - ಪ್ರಲ್ಹಾದ್ ಜೋಶಿ :

ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದಂತಹ ಮಹತ್ವದ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಸಂಸತ್ತಿನಲ್ಲಿ ಚರ್ಚೆ ನಡೆಯದಂತೆ ವಿವಿಧ ಶರತ್ತುಗಳನ್ನು ವಿಧಿಸುತ್ತಿದ್ದಾರೆ ಎಂದು ಟೀಕಿಸಿದರು.

"ನಾವು ಸಂಸತ್ತಿನಲ್ಲಿ ಚರ್ಚೆಗೆ ಸಂಪೂರ್ಣ ಸಿದ್ದರಾಗಿದ್ದೇವೆ. ಆದರೆ ಚರ್ಚೆ ಕೇಳಿದ್ದವರೇ ಈಗ ಹಿಂದೆ ಸರಿಯುತ್ತಿದ್ದಾರೆ" ಎಂದು ಜೋಶಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅತ್ಯಂತ ಕಾಳಜಿ ಮತ್ತು ಸಂವೇದನಾಶೀಲತೆ ಹೊಂದಿದೆ ಎಂದು ಅವರು ತಿಳಿಸಿದರು. ದೇಶದಲ್ಲಿ ಪಾರದರ್ಶಕ ಮತ್ತು ವಿಶ್ವಾಸಾರ್ಹ ಯುವಜನರ ಭವಿಷ್ಯವನ್ನು ಭದ್ರಗೊಳಿಸುವ ಸಂಕಲ್ಪದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

'ವಿಕಸಿತ ಭಾರತ 2047' ಗುರಿ ಸಾಕಾರಗೊಳಿಸುವಲ್ಲಿ ದೇಶದ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ಹಾಗೂ ನ್ಯಾಯ ಸಮ್ಮತ ಪರೀಕ್ಷಾ ವ್ಯವಸ್ಥೆ ಒದಗಿಸುವುದು ಕೇಂದ್ರ ಸರ್ಕಾರದ ಬದ್ಧತೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಪರೀಕ್ಷಾ ಅಕ್ರಮ ಪ್ರಕರಣ - 14 ಪ್ರಮುಖ ಆರೋಪಿಗಳ ಬಂಧನ, ತಡೆ ಕ್ರಮಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ದ ಎಂದ ಪ್ರಲ್ಹಾದ್ ಜೋಶಿ :

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ 14 ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವ

ಪ್ರಲ್ಹಾದ್ ಜೋಶಿ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.

ಇಂತಹ ಅಕ್ರಮಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲರ ಸಲಹೆ ಮತ್ತು ಸಹಕಾರದೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕಾರ್ಯದರ್ಶಿಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online