<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿಗೆ ತರಾಟೆ: ಬಾದಾಮಿಯಲ್ಲಿ ಘಟನೆ

ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿಗೆ ತರಾಟೆ: ಬಾದಾಮಿಯಲ್ಲಿ ಘಟನೆ
Summary: A woman thrashed a Muslim woman who was sitting in slippers at the historic temple in Badami in Bagalkot district, causing a debate. The video of the argument over the sanctity of the temple and allegations of violation of rules has gone viral on social media. There are strong public debates regarding the incident.

Belagavi News:

ಬಾಗಲಕೋಟೆ, ಮೇ 20: ಬಾದಾಮಿ ಪಟ್ಟಣದ ಐತಿಹಾಸಿಕ ಪ್ರವಾಸಿ ತಾಣದಲ್ಲಿರುವ ಪ್ರಸಿದ್ಧ ದೇಗುಲದಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ ಧರಿಸಿ ಕುಳಿತಿದ್ದನ್ನು ಕಂಡ ಹಿಂದೂ ಪ್ರವಾಸಿ ಮಹಿಳೆಯೋಬ್ಬರು ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ.

ಮಾಹಿತಿಯ ಪ್ರಕಾರ, ರೋಷನಿ ಮುಸ್ತಾಫಿ ಎಂಬ ಯುವತಿ ದೇಗುಲದ ಆವರಣದಲ್ಲಿ ಚಪ್ಪಲಿ ಧರಿಸಿಕೊಂಡೆ ಕುಳಿತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಪ್ರವಾಸಿಗೆಯೋಬ್ಬರು, ದೇವಸ್ಥಾನದ ಪವಿತ್ರತೆ ಮತ್ತು ಸಂಪ್ರದಾಯಗಳನ್ನು ಪಾಲಿಸಬೇಕು ಎಂದು ಹೇಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿರುವುದಾಗಿ ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ - ವಿರೋಧ ಚರ್ಚೆಗಳು ಜೋರಾಗಿವೆ. ಕೆಲವರೂ ದೇವಸ್ಥಾನದ ನಿಯಮಗಳನ್ನು ಎಲ್ಲರೂ ಗೌರವಿಸಬೇಕು ಎಂದು ಅಭಿಪ್ರಾಯಪಟ್ಟರೆ, ಇನ್ನು ಕೆಲವರು ಘಟನೆಗೆ ಸಂಬಂಧಿಸಿದ ಪ್ರತಿಕ್ರಿಯೆ ಅತಿರೇಕವಾಯಿತು ಎಂದು ಹೇಳಿದ್ದಾರೆ.

ಸ್ಥಳೀಯರು ಮತ್ತು ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂವೇದನೆಗಳನ್ನು ಗೌರವಿಸುವುದು ಅಗತ್ಯ ಎಂದು ಮನವಿ ಮಾಡಿದ್ದಾರೆ. ಘಟನೆ ಸಂಭಂದ ಯಾವುದೇ ಅಧಿಕೃತ ದೂರು ದಾಖಲಾಗಿದೆಯೇ ಎಂಬ ಬಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ದೇಗುಲದ ಪವಿತ್ರತೆ ಕಾಪಾಡಬೇಕು ಎಂದು ಆಗ್ರಹಿಸಿದ ಮಹಿಳೆ, "ನಾವು ದರ್ಗಾಕ್ಕೆ ಚಪ್ಪಲಿ ಹಾಕಿಕೊಂಡು ಹೋಗುತ್ತೇವಾ? ಎಷ್ಟು ಹೇಳಿದ್ರು ಕೇಳಲ್ಲ, ಕೇಳಿದ್ರೆ 'ಸ್ಟಾಪ್ ' ಅಂತೀಯಾ?" ಎಂದು ಯುವತಿ ಯನ್ನು ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಕೇಳಿಬಂದಿದೆ. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಘಟನೆ ಸ್ಥಳದಲ್ಲೇ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಯಿತು. ಬಳಿಕ ಯುವತಿ ಪಾತ್ರದ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ನಂತರ ಪರಿಸ್ಥಿತಿ ಶಾಂತಗೊಂಡಿದ್ದು, ವಿವಾದ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ ಎಂದು ತಿಳಿದು ಬಂದಿದೆ.

Also Read:

IPL Thriller: ವೈಭವ್ ಅಬ್ಬರಕ್ಕೆ ಕುಸಿದ ಲಕ್ನೋ, ರಾಜಸ್ಥಾನಕ್ಕೆ ಮಹತ್ವದ ಗೆಲುವು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online