<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Education

NEET Re-Exam Date Announced: ಜೂನ್ 21ರಂದು ಮರು ಪರೀಕ್ಷೆ

NEET Re-Exam Date Announced: ಜೂನ್ 21ರಂದು ಮರು ಪರೀಕ್ಷೆ
Summary: The NTA has issued an official notification that the NEET re-exam will be conducted on June 21. This decision taken after the government's instructions has provided an important update to the students. Read the exam date, guidelines and complete information here.

Belagavi news:

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET (UG) 2026 ಮರು ಪರೀಕ್ಷೆಯಲ್ಲಿ ಜೂನ್ 21, 2026 ರಂದು ನಡೆಸಲಾಗುವುದು ಎಂದು ಅಧಿಕೃತವಾಗಿ ಘೋಷಿಸಿದೆ. ಭಾರತ ಸರ್ಕಾರದ ಅನುಭೋಧನೆಯೊಂದಿಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎನ್ ಟಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಮಾಹಿತಿ ಹಂಚಿಕೊಂಡಿರುವ ಎನ್ಟಿಎ. " ಭಾರತ ಸರ್ಕಾರದ ಅನುಭೋಧನೆಯೊಂದಿಗೆ NEET (UG) 2026 ಮರು ಪರೀಕ್ಷೆಯನ್ನು ಭಾನುವಾರ ಜೂನ್ 21, 2026ರಂದು ನಿಗದಿಪಡಿಸಲಾಗಿದೆ " ಎಂದು ಸ್ಪಷ್ಟಪಡಿಸಿದೆ.

ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ನವೀಕರಣಗಳು ಹಾಗೂ ಮಾಹಿತಿಗಾಗಿ ಅಭ್ಯರ್ಥಿಗಳು ಮತ್ತು ಪೋಷಕರು ಅಧಿಕೃತ ಸಂವಹನ ಮಾರ್ಗಗಳನ್ನು ಮಾತ್ರ ಅವಲಂಬಿಸಬೇಕು ಎಂದು ಎನ್ ಟಿಎ ಮನವಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ.

Sponsored

ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳು ಅಥವಾ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅಭ್ಯರ್ಥಿಗಳು ಎನ್ ಟಿಎ ಅಧಿಕೃತ ಇ-ಮೇಲ್ ಐಡಿ ಹಾಗೂ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. NEET ಮರು ಪರೀಕ್ಷೆಯ ದಿನ ಘೋಷಣೆಯಿಂದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ.

ಪರೀಕ್ಷೆಯನ್ನು ಮತ್ತೆ ನಡೆಸುವ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದ ಒಂದು ದಿನದ ನಂತರ ಈ ಪ್ರಕಟಣೆ ಹೊರ ಬಿದ್ದಿದೆ.

ನೀಟ್ - ಯುಜಿ (NEET UG) ಪರೀಕ್ಷೆಯ ಹೊಸ ನಡವಳಿಕೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು ಎಂದು ಅಧಿಕೃತ ಮೂಲಗಳು ತಿಳಿಸುವೆ.

ಗುರುವಾರ ನಡೆದ ಈ ಮಹತ್ವದ ಸಭೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ನಡುವಳಿಕೆ, ಭದ್ರತಾ ಕ್ರಮಗಳು, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಸೇರಿದಂತೆ ಹಲವು ಅಂಶಗಳ ಕುರಿತು ವಿವರವಾದ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.

Sponsored

ಸಭೆಯಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿ, ವಿನೀತ್ ಜೋಶಿ , ಶಾಲಾ ಶಿಕ್ಷಣ ಕಾರ್ಯದರ್ಶಿ ಸಂಜಯ್ ಕುಮಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹಾನಿರ್ದೇಶಕ ಅಭಿಷೇಕ್ ಸಿಂಗ್, ಸಿಬಿಎಸ್ ಇ ಅಧ್ಯಕ್ಷ ರಾಹುಲ್ ಸಿಂಗ್ ಹಾಗೂ ಕೇಂದ್ರೀಯ ವಿದ್ಯಾಲಯ ಸಂಘಟನ (KVS) ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಆಯುಕ್ತರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮೇ 3ರಂದು ನಡೆದ NEET UG ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆ, ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಎನ್ ಟಿ ಎ ಮಂಗಳವಾರ ಘೋಷಿಸಿತ್ತು. ಈ ಬೆಳವಣಿಗೆಯ ಬಳಿಕ ನಡೆದ ಸಭೆ ರಾಷ್ಟ್ರದ ಗಮನ ಸೆಳೆದಿದೆ.

ಪರೀಕ್ಷೆ ರದ್ದಾದ ಪರಿಣಾಮ 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಪ್ರವೇಶಾಕಾಂಕ್ಷಿಗಳು ಅನಿಶ್ಚಿತತೆಯ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದು, ಮರು ಪರೀಕ್ಷೆಯ ಘೋಷಣೆಯ ಬಳಿಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕದ ಜೊತೆಗೆ ನಿರೀಕ್ಷೆಯು ಹೆಚ್ಚಾಗಿದೆ.

ಹೊಸ ದಿನಾಂಕಗಳನ್ನು ಇನ್ನು ಘೋಷಿಸಲಾಗಿಲ್ಲ. ಆದರೆ ರದ್ದಾದ ನೀಟ್ ಯುಜಿ 2026 ಮರು ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದಿನ ಏಳರಿಂದ ಹತ್ತು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಎನ್ ಟಿ ಎ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ಹೇಳಿದರು.

Sponsored

ಗುರುವಾರ, ಕೇಂದ್ರ ತನಿಖಾ ದಳ (ಸಿಬಿಐ) ನೀಟ್ ಯುಜಿ ಪರೀಕ್ಷಾ ಸೋರಿಕೆ ಪ್ರಕರಣದಲ್ಲಿ ಬಂದಿಸಲ್ಪಟ್ಟ 5 ಜನರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಮತ್ತು ಇನ್ನಿಬ್ಬರು ಶಂಕಿತರನ್ನು ಕೂಡ ಬಂದಿಸಿದೆ. ಅಕ್ರಮಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಯ ಒಳಗಿನವರ ಪಾತ್ರದ ಬಗ್ಗೆಯೂ ಸಂಸ್ಥೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read:

ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ವಿರುದ್ಧ ಕ್ರಮ? ಕಚೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online