belagavi news :
ಮೇ 3ರಂದು ನಡೆದಿದ್ದ NEET UG 2026 ಪರೀಕ್ಷೆ ಗೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಹೊರಬಂದ ಹಿನ್ನೆಲೆ, ಈಗಾಗಲೇ ನಡೆದ ಪರೀಕ್ಷೆ ರದ್ದುಗೊಳಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮಹತ್ವದ ಮಾಹಿತಿ ನೀಡಿದ್ದು, ಮರು ಪರೀಕ್ಷೆಯನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ. ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುವರಿ ತೊಂದರೆಯಾಗದಂತೆ ಪರೀಕ್ಷೆಗೆ ಹೊಸದಾಗಿ ಶುಲ್ಕ ವಸಲಿ ಮಾಡುವುದಿಲ್ಲ, ಈಗಾಗಲೇ ಸಲ್ಲಿಸಿರುವ ನೋಂದಣಿ ದತ್ತಾಂಶದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮರು ಪರೀಕ್ಷೆಯ ಅವಕಾಶ ನೀಡಲಾಗುತ್ತದೆ ಎಂದು ಎನ್ ಟಿ ಎ ಸ್ಪಷ್ಟಪಡಿಸಿದೆ.
ಇದೇ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಸತ್ಯಾಂಶ ಪತ್ತೆಹಚ್ಚಲು ತನಿಕ ಸಂಸ್ಥೆಗಳು ಕಾರ್ಯ ಪ್ರವೃತ್ತವಾಗಿವೆ. ಮರು ಪರೀಕ್ಷೆಯ ದಿನಾಂಕ, ಪ್ರವೇಶ ಪತ್ರ ಹಾಗೂ ಇತರೆ ಪ್ರಕ್ರಿಯೆಗಳ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿ ಪ್ರಕಟವಾಗುವ ನಿರೀಕ್ಷೆ ಇದೆ.
ಹೊಸದಿಲ್ಲಿ: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮೇ 3ರಂದು ನಡೆಸಿದ್ದ NEET UG 2026 ಪರೀಕ್ಷೆಯನ್ನು ಇದೀಗ ರದ್ದುಗೊಳಿಸಲಾಗಿದೆ. ದೇಶಾದ್ಯಂತ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದರು, ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಹೊರಬಂದ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶ ವ್ಯಾಪಿ ಚರ್ಚೆಗೆ ಕಾರಣವಾಗಿದ್ದು, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಗೆ ಒಳಗಾದ ಹಿನ್ನೆಲೆ ಮರು ಪರೀಕ್ಷೆ ನಡೆಸುವುದಾಗಿ ಎನ್ ಟಿ ಎ ಅಧಿಕೃತವಾಗಿ ಘೋಷಿಸಿದೆ.
ಈ ಕುರಿತು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಣೆ ನೀಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ,"ಮೇ 10, 2026ರ ಪತ್ರಿಕಾ” ಪ್ರಕಟಣೆಯ ಮುಂದುವರಿಕೆಯಾಗಿ ಈ ಮಾಹಿತಿ ನೀಡಲಾಗುತ್ತಿದೆ. ಕಾನೂನು ಜಾರಿ ಸಂಸ್ಥೆಗಳು ಸಂಗ್ರಹಿಸಿದ ಮಾಹಿತಿ ಪ್ರಕಾರ, ಪ್ರಸ್ತುತ ನಡೆಸಲಾದ ಪರೀಕ್ಷಾ ಪ್ರಕ್ರಿಯೆಯನ್ನು ಮಾನ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ"ಎಂದು ತಿಳಿಸಿದೆ. ಇದೇ ವೇಳೆ ಮರು ಪರೀಕ್ಷೆಯ ದಿನಾಂಕ, ಹೊಸ ಪ್ರವೇಶ ಪತ್ರ ವಿತರಣೆ ಹಾಗೂ ಮುಂದಿನ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಅಧಿಕೃತ ವೆಬ್ಸೈಟ್ ಮತ್ತು ಇತರೆ ಅಧಿಕೃತ ಮಾರ್ಗಗಳ ಮೂಲಕ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸಂಪೂರ್ಣ ತನಿಖೆಯನ್ನು ಕೇಂದ್ರ ಸರ್ಕಾರ, ಸಂಪೂರ್ಣ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಸತ್ಯಾಂಶ ಪತ್ತೆಹಚ್ಚಲು ಸಂಗ್ರಹ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕೂಡ ಪ್ರತಿಕ್ರಿಯೆ ನೀಡಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸ್ಪಷ್ಟಪಡಿಸಿದೆ. ಈ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕೂಡಾ ಪ್ರತಿಕ್ರಿಯೆ ನೀಡಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸ್ಪಷ್ಟಪಡಿಸಿದೆ.
ಸಿಬಿಐಗೆ ಅಗತ್ಯವಿರುವ ಎಲ್ಲ ದಾಖಲೆಗಳು, ಮಾಹಿತಿ ಹಾಗೂ ಇತರೆ ಸಹಾಯಕ ಸಾಮಗ್ರಿಗಳನ್ನು ಒದಗಿಸಲಾಗುವುದು ಎಂದು ಎನ್ ಟಿಎ ತಿಳಿಸಿದೆ. ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ.
ಮರು ಪರೀಕ್ಷೆಯ ಕುರಿತು ವಿದ್ಯಾರ್ಥಿಗಳು ತಿಳಿಯಬೇಕಾದ ಪ್ರಮುಖ ಮಾಹಿತಿ : NEET UG 2026 ಪರೀಕ್ಷೆಯನ್ನು ರದ್ದುಗೊಳಿಸಿ ಬರು ಪರೀಕ್ಷೆ ನಡೆಸುವ ನಿರ್ಧಾರವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸ್ಪಷ್ಟಪಡಿಸಿದೆ. ಮರು ಪರೀಕ್ಷೆಯ ಹೊಸ ದಿಕ್ಕನ್ನು ಮುಂದಿನ ದಿನಗಳಲ್ಲಿ ಅಧಿಕೃತ ವೆಬ್ ಸೈಟ್ ಹಾಗೂ ಎನ್ ಟಿಎ ಅಧಿಕೃತ ಮಾಧ್ಯಮಗಳ ಮೂಲಕ ಪ್ರಕಟಿಸಲಾಗುವುದು.
ಈಗಾಗಲೇ ಮೇ 2026ರ ಪರೀಕ್ಷೆಗೆ ಸಲ್ಲಿಸಿರುವ ನೊಂದಣಿ ವಿವರಗಳು, ಅಭ್ಯರ್ಥಿತ್ವ ಹಾಗೂ ಪರೀಕ್ಷಾ ಕೇಂದ್ರಗಳು ಯಥಾ ಸ್ಥಿತಿಯಲ್ಲೇ ಮುಂದುವರೆಯಲಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಹೊಸದಾಗಿ ನೊಂದಣಿ ಮಾಡಬೇಕಾಗಿಲ್ಲ ಮತ್ತು ಯಾವುದೇ ಹೆಚ್ಚುವರಿ ಪರೀಕ್ಷಾ ಶುಲ್ಕವು ವಿಧಿಸಲಾಗುವುದಿಲ್ಲ ಎಂದು ಎನ್ ಟಿ ಎ ತಿಳಿಸಿದೆ. ಇದರ ಜೊತೆಗೆ ಈಗಾಗಲೇ ಪಾವತಿಸಿದ ಪರೀಕ್ಷಾ ಶುಲ್ಕವನ್ನು ಮರುಪಾವತಿಸಲಾಗುವುದು ಎಂಬ ಮಾಹಿತಿಯು ನೀಡಲಾಗಿದೆ.
ಮರು ಪರೀಕ್ಷೆಗೆ ಮುನ್ನ ಅಭ್ಯರ್ಥಿಗಳಿಗೆ ಹೊಸ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗುತ್ತದೆ. ವೇಳಾಪಟ್ಟಿ, ಪ್ರವೇಶ ಪತ್ರ ಹಾಗೂ ಇತರೆ ಎಲ್ಲಾ ಮಾಹಿತಿಗಳನ್ನು ಎನ್ಟಿಎ ತನ್ನ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕವೇ ಪ್ರಕಟಿಸಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪರಿಚಿರಿತ ಮಾಹಿತಿ ಹಾಗೂ ವದಂತಿಗಳನ್ನು ನಂಬಬಾರದು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.
ಏನಿದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ?
NEET UG 2026 ಪರೀಕ್ಷೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಬಾರಿ ಸಂಚಲನ ಮೂಡಿಸಿದೆ. ಈ ಗಂಭೀರ ಪ್ರಕರಣವನ್ನು ಕೇಂದ್ರ ಸರ್ಕಾರ ಇದೀಗ ಕೇಂದ್ರ ತನಿಕಾ ದಳಕ್ಕೆ ಹಸ್ತಾಂತರಿಸಿದ್ದು, ಸಮಗ್ರ ತನಿಖೆ ಆರಂಭವಾಗಿದೆ. ಮೇ 3 ನಡೆದ NEET ಪರೀಕ್ಷೆಗೆ ಮುನ್ನವೇ ರಾಜಸ್ಥಾನದಲ್ಲಿ "ಗೆಸ್ ಪೇಪರ್" ಅಥವಾ ಸಂಭಾವ್ಯ ಪ್ರಶ್ನೆಗಳ ಪಟ್ಟಿ ಸೋರಿಕೆಯಾಗಿದೆ ಎಂಬ ಮಾಹಿತಿ ಬಹಿರಂಗವಾಗಿತ್ತು.
ಈ ಕುರಿತು ರಾಜಸ್ಥಾನ ಪೊಲೀಸರ ಸ್ಪೆಷಲ್ ಆಪರೇಷನ್ ಗ್ರೂಪ್ ತನಿಖೆ ನಡೆಸಿದಾಗ, ಪರೀಕ್ಷೆಗೆ ಎರಡು ಮೂರು ದಿನಗಳ ಮುಂಚೆ ಹರಿದಾಡಿದ್ದ ಕೈಬರಹದ ಪ್ರಶ್ನೆಗಳ ವೆಬ್ಸೈಟ್ ನಲ್ಲಿದ್ದ 6140 ಪ್ರಶ್ನೆಗಳು ನೈಜ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಪ್ರಶ್ನೆಗಳು ಒಟ್ಟು 720 ಅಂಕಗಳಲ್ಲಿ ಸುಮಾರು 600 ಅಂಕಗಳಿಗೆ ಸಂಬಂಧಿಸಿದ ವಾಗಿದ್ದು, ಸೋರಿಕೆಯಾದ ಪೇಪರ್ ಅಥವಾ ನಿಜವಾದ ಪ್ರಶ್ನೆ ಪತ್ರಿಕೆ ನಡುವೆ ಬಹುತೇಕ ಸಾಮ್ಯತೆ ಕಂಡು ಬಂದಿದೆ ಎಂದು ತನಿಕ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ತನಿಖೆಗೆ ಈಗ ಸಿಬಿಐಗೆ ವರ್ಗಾಯಿಸಲ್ಪಟ್ಟದ್ದು, ರಾಜಸ್ಥಾನದಲ್ಲಿ ಇದುವರೆಗೆ ಸುಮಾರು 45 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಈ ಸೋರಿಕೆಯಾದ"ಊಹೆ ಪ್ರಶ್ನೆ ಪತ್ರಿಕೆ" ಮುದ್ರನಾಲಯದಿಂದಲೇ ಹೊರ ಹೊರ ಬಂದಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಆ ದಿಕ್ಕಿನಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.
Also Read: