Belagavi news:
ರಾಜಸ್ಥಾನ ಮತ್ತು ಉತ್ತರಖಂಡದಲ್ಲಿ ನಡೆದಿರುವ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಸಂಸದ ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾ ಕಾರರು, ವಿನೋಬಾ ನಗರ ಪೊಲೀಸ್ ಚೌಕಿ ಮುಂಭಾಗದ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮಾತನಾಡಿ,"ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ವಿದ್ಯಾರ್ಥಿಗಳು ಹಗಲು ರಾತ್ರಿ ಶ್ರಮಪಟ್ಟು ಓದಿ ಪರೀಕ್ಷೆ ಬರೆದಿದ್ದರೆ, ಈಗ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದಂತಾಗಿದೆ"ಎಂದು ಆರೋಪಿಸಿದರು.
ಇದೇ ವೇಳೆ, ಮತ್ತೊಮ್ಮೆ ಪರೀಕ್ಷೆ ಬರೆಯಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಿರುವ ಕ್ರಮವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದರು. "ಒಮ್ಮೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಧ್ಯ ಪರೀಕ್ಷೆ ನಡೆಸುವುದು ಮಾನಸಿಕ ಒತ್ತಡ ಹೆಚ್ಚಿಸುವ ಕೆಲಸವಾಗಿದೆ. ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರಿಶ್ರಮವನ್ನು ಗೌರವಿಸಬೇಕು"ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಕಾರ್ಯಕರ್ತರು, ನೀಟ್ ಪರೀಕ್ಷೆಯ ಅವ್ಯವಸ್ಥೆಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀಟ್ ಮರು ಪರೀಕ್ಷೆ ವಿರೋಧಿಸಿ ಸಂಸದರ ಮನೆಗೆ ಮುತ್ತಿಗೆ ಯತ್ನ :
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದ ಪ್ರತಿಭಟನಾಕಾರರು, ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿನೋಬನಗರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಸಂಸದರ ಮನೆ ರಸ್ತೆ ಬಳಿ ಬ್ಯಾರಿಕೆಡ್ ಗಳನ್ನು ಅಳವಡಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಏಕಾಏಕಿ ಮುಂದೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಆದರೂ ಹಿಂದೆ ಸರಿದ ಪ್ರತಿಭಟನಾಕಾರರು ಬ್ಯಾರಿಕೇಡ್ ಗಳ ಮೇಲೆ ಹತ್ತಿ ಜಿಗಿಯಲು ಯತ್ನಿಸಿದ ಘಟನೆ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಡಿಎಆರ್ ಪೊಲೀಸ್ ಮೈದಾನಕ್ಕೆ ಕರೆದೊಯ್ದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾ ಕಾರರು ಮಾತನಾಡಿ,"ವಿದ್ಯಾರ್ಥಿಗಳು ಹಗಲು ರಾತ್ರಿ ಶ್ರಮಪಟ್ಟು ಪರೀಕ್ಷೆ ಬರೆದಿದ್ದಾರೆ. ಈಗ ಮರು ಪರೀಕ್ಷೆ ನಡೆಸುವುದು ಅವರ ಮೇಲೆ ಮಾನಸಿಕ ಒತ್ತಡ ಹೇರುವಂತಾಗುತ್ತದೆ. ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ"ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ಜೋರು :
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ಶೀಘ್ರ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಸಚಿವ ಪ್ರಲಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವರ್ಷಕ್ಕೆ ಪಡೆದ ಘಟನೆ ನಡೆಯಿತು.
ನಗರದ ರಮೇಶ್ ಭವನದಿಂದ ಪ್ರಳ ಜೋಶಿ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಪೊಲೀಸರು ಭದ್ರತೆ ಹೆಚ್ಚಿಸಿ ಕಾರ್ಯಕರ್ತರನ್ನು ತಡೆದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,"ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಅತಿ ದೊಡ್ಡ ಹಗರಣವಾಗಿದೆ. ವಿದ್ಯಾರ್ಥಿಗಳ ವಿಶ್ವಾಸವನ್ನು ಸರ್ಕಾರ ಸಂಪೂರ್ಣವಾಗಿ ಹಾಳು ಮಾಡಿದೆ"ಎಂದು ಆರೋಪಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಹುಬ್ಬಳ್ಳಿ ಧಾರವಾಡ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ್,"ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಕ್ಷಣ ರಾಜೀನಾಮೆ ನೀಡಬೇಕು. ಅವರು ಸಚಿವರಾದ ಬಳಿಕ ಎರಡನೇ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದೆ. ಇದೀಗ ಮರು ಪರೀಕ್ಷೆ ನಡೆಸಲಾಗುತ್ತಿದೆ. ಇದು ಕಮರ್ಷಿಯಲ್ ಪರೀಕ್ಷೆಯಾಗಿ ಮಾರ್ಪಟ್ಟಿದೆ"ಎಂದು ಕಿಡಿ ಕಾರಿದರು.
"ವಿದ್ಯಾರ್ಥಿಗಳು ವರ್ಷಪೂರ್ತಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅವರ ಪರಿಶ್ರಮ ವ್ಯರ್ಥವಾಗುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಪರೀಕ್ಷಾ ವ್ಯವಸ್ಥೆಯ ಮೇಲೆನ ನಂಬಿಕೆ ಕಳೆದುಕೊಳ್ಳುತ್ತಾರೆ. ಕೂಡಲೇ ನೀಡ್ ಪರೀಕ್ಷೆಯನ್ನು ಕೈ ಬಿಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು"ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನೀಟ್ ಪರೀಕ್ಷಾ ವ್ಯವಸ್ಥೆಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Also Read:
ಮಂತ್ರಾಲಯದಲ್ಲಿ ಅಗ್ನಿ ದುರಂತ : ನೂರಾರು ಕಾರ್ಮಿಕರ ಷಡ್ ಗಳಿಗೆ ಬೆಂಕಿ