<?= $pageTitle ?>
Logo
ಮುಖಪುಟ ಓದುವುದು ಕೇಳು
Trending

NHM ಯೋಜನೆ ವೇತನ ಪಾವತಿ ಸುದ್ದಿ

NHM ಯೋಜನೆ ವೇತನ ಪಾವತಿ ಸುದ್ದಿ
Summary: ರಾಷ್ಟ್ರೀಯ ಆರೋಗ್ಯ ಮಿಷನ್ NHM ಅಡಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗುತ್ತಿರುವ ಕುರಿತು ಮಿಶ್ರಣ ನಿರ್ದೇಶಕರು ಗಂಭೀರ ಸೂಚನೆ ನೀಡಿದ್ದಾರೆ.
BELAGAVI NEWS:

ಮುಂದಿನ ದಿನಗಳಲ್ಲಿ ವೇತನ ಪಾವತಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಅಗತ್ಯ ಆಡಳಿತಾತ್ಮಕ ಆಗು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಲ್ಲಾ ಜಿಲ್ಲೆಗಳಲ್ಲಿ NHM ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ನಿರ್ಧಾರದಿಂದ NHM ಸಿಬ್ಬಂದಿಗೆ ದೊಡ್ಡ ನಿಟ್ಟಿನ ಪರಿಹಾರ ಸಿಗಲಿದೆ.

2025ರ ನವಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಮತ್ತು ಪ್ರೋತ್ಸಾಹಧನ ಪಾವತಿಯಲ್ಲಿ ಸಂಭವಿಸಿದ್ದ ವಿಳಂಬದ ಕುರಿತು ಮಿಷನ್ ನಿರ್ದೇಶಕರ ಕಚೇರಿ ಸ್ಪಷ್ಟತೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ವೇತನ ಪಾವತಿಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮವಹಿಸುವುದಾಗಿಮಿಷನ್ ನಿರ್ದೇಶಕರು ಕಚೇರಿ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ನಿದರ್ಶಕರು, NHM ಅಡಿ ಕಾರ್ಯನಿರ್ವಹಿಸುತ್ತಿರುವ ಒಪ್ಪಂದಾಧಾರಿತ ನೌಕರರು ಮತ್ತು ASHA ಕಾರ್ಯಕರ್ತರಿಗೆ 2025ರ ನವಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಹಾಗೂ ಪ್ರೋತ್ಸಾಹಧನ ಪಾವತಿಯಲ್ಲಿ ಉಂಟಾದ ವಿಳಂಬದ ಕುರಿತು ಸ್ಪಷ್ಟತೆ ನೀಡಿದ್ದಾರೆ. ಮತ್ತು ಆಡಳಿತಾತ್ಮಿಕ ಮತ್ತು ತಾಂತ್ರಿಕ ಕಾರಣಗಳಿಗಾಗಿ ಪಾವತಿಯಲ್ಲಿ ವಿಳಂಬವಾಗಿದ್ದು ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಿ ಮುಂದಿನ ದಿನಗಳಲ್ಲಿ ಇಂತಹ ವಿಳಂಬ ಮರುಕಳಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಮತ್ತು ಈ ಕುರಿತು ಸರ್ಕಾರ ಮತ್ತು ಆರೋಗ್ಯ ಇಲಾಖೆ ಗಂಭೀರವಾಗಿ ಗಮನ ಹರಿಸಿದೆ ಎಂದು ನಿರ್ದೇಶಿಕರು ಸ್ಪಷ್ಟಪಡಿಸಿದ್ದಾರೆ.

ಭಾರತ ಸರ್ಕಾರದ ಮಾರ್ಗಸೂಚಿಗಳಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ NHM ಯೋಜನೆಯನ್ನು ಆರ್ಥಿಕ ವರ್ಷದ ಮಧ್ಯ ಭಾಗದಲ್ಲಿ SNA-SPARSH ಎಂಬ ಹೊಸ ಹಣಕಾಸು ವ್ಯವಸ್ಥೆಗೆ ವರ್ಗಾಯಿಸಲಾಗಿದೆ.
ಹಿಂದಿನ ಹಣಕಾಸು ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ಬದಲಾವಣೆಯ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯಮಟ್ಟಗಳಲ್ಲಿ ನಿಧಿ ಬಿಡುಗಡೆ ಮತ್ತು ಪಾವತಿ ಪ್ರಕ್ರಿಯೆಗಳಲ್ಲಿ ಅಗತ್ಯವಾದ ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಬದಲಾವಣೆಗಳನ್ನು ಅಳವಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಕೆಲ ತಾತ್ಕಾಲಿಕ ವಿಳಂಬಗಳು ಉಂಟಾಗಿರುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ವ್ಯವಸ್ಥೆ ಸುಧಾರಣೆಯೊಂದಿಗೆ ಇಂತಹ ವಿಳಂಬಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟ ಪಡಿಸಲಾಗಿದೆ.
SNA-SPARSH ಹಣಕಾಸು ವ್ಯವಸ್ಥೆ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ನಂತರವೇ ರಾಜ್ಯ ಸರ್ಕಾರವು ಪಾವತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪಾಲಿನ ನಿಧಿಗಳ ಸ್ವೀಕೃತಿಯಲ್ಲಿ ಉಂಟಾದ ವಿಳಂಬ ಹಾಗೂ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳುವ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಕಾರಣಗಳ , ರಾಷ್ಟ್ರೀಯ ಆರೋಗ್ಯ ಅಭಿಯಾನ NHM ಅಡಿ ಕಾರ್ಯನಿರ್ವಹರಿಸುತ್ತಿರುವ ನೌಕರಿಗೆ ವೇತನ ಪಾವತಿ ನಿರ್ದಿಷ್ಟ ಸಮಯದಲ್ಲಿ ಮಾಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ . ಆದರೆ ಮುಂದಿನ ದಿನಗಳಲ್ಲಿ ಪಾವತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಈ ಹಿನ್ನಲೆಯಲ್ಲಿ ಭಾರತ ಸರ್ಕಾರವು 08.01.2026 ರಂದು ₹175.75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಪಾಲಿನ ಸಂಬಂಧಿತ ನಿಧಿಗಳು ಪ್ರಸ್ತುತ ರಾಜ್ಯ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆಯಲ್ಲಿದ್ದು, ಅಗತ್ಯ ಅನುಮೋದನೆ ನಂತರ ಶೀಘ್ರದಲ್ಲೇ ಎಲ್ಲ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅನುದಾನ ಬಿಡುಗಡೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ NHM ಅಡಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಿ ಬಾಕಿ ಇರುವ ವೇತನ ಹಾಗೂ ಪ್ರೋತ್ಸಾಹಧನ ಪಾವತಿಗೆ ವೇಗ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ .
ರಾಷ್ಟ್ರೀಯ ಆರೋಗ್ಯ ಅಭಿಯಾನ NHM ನೌಕರರ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಅನುದಾನಗಳ ಸಮಯವನ್ನು ಪರಿಗಣಿಸದೇ ವೇತನ ಪಾವತಿಯನ್ನು ಆದ್ಯತೆಯ ಮೇರೆಗೆ ಸೀಘ್ರವಾಗಿ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ NHM ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಖಚಿತಪಡಿಸುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದೆ.
ಈ ವಿಷಯವನ್ನು ರಾಜ್ಯ ಸರ್ಕಾರ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗದಂತೆ ಹಣಕಾಸು ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಿ ನಿಧಿಗಳ ಸುಗಮ ಹರಿವನ್ನು ಖಚಿತಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ ಈ ನಿರ್ಧಾರದಿಂದ NHM ನೌಕರರು ಹಾಗೂ ASHA ಕಾರ್ಯಕರ್ತರಿಗೆ ದೊಡ್ಡ ಮಟ್ಟದ ನಿರಾಳತೆ ಸಿಗಲಿದೆ.

ಇನ್ನಷ್ಟು ಓದಿರಿ:
ಬೆಂಗಳೂರು ಹಬ್ಬ - ೨೦೨೫
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online