<?= $pageTitle ?>
Logo
ಮುಖಪುಟ ಓದುವುದು ಕೇಳು
Entertainment

ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಭಾಜನರಾದ ನಾದಬ್ರಹ್ಮ ಹಂಸಲೇಖ

ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಭಾಜನರಾದ ನಾದಬ್ರಹ್ಮ ಹಂಸಲೇಖ
Summary: ಸಂಗೀತ ನಿರ್ದೇಶಕ ಮತ್ತು ಕನ್ನಡದ ಖ್ಯಾತ ಗೀತ ರಚನಾಕಾರ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಶೇಷ್ಠ ಸಾಧನೆ ಪ್ರಶಸ್ತಿಯನ್ನು ತೆಗೆದುಕೊಂಡಿದ್ದಾರೆ.
BELAGAVI NEWS :

17ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವು ಒಂದು ವಾರದಿಂದ ನಡೆಯುತ್ತಾ ಬಂದಿದೆ. ಇಂದು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಮತ್ತು ಖ್ಯಾತ ಗೀತಾ ರಚನಾಕಾರರಾಗಿರುವ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವನಮಾನ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ ಅಪಾರವಾದದ್ದು, ಅದನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಚಿತ್ರೋತ್ಸವದಲ್ಲಿ ಏಷ್ಯಾದ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾ ಎಂಬ ಮೂರು ಸ್ಪರ್ಧಾ ವಿಭಾಗಗಳಿದ್ದಾವೆ.


ಈ ಭಾಗಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿ ಗೆದ್ದವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರಧಾನವನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಳತ್ವದಲ್ಲಿ ನಡೆಯುತ್ತಿದೆ. ಈ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ಸಿನಿಮಾ ಮುಖ್ಯಸ್ಥರು ಭಾಗವಹಿಸಿದ್ದಾರೆ. ಕರ್ನಾಟಕದ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ ಅವರು ಮತ್ತು ಕನ್ನಡ ಚಿತ್ರ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ್ ಮತ್ತು ಚಿತ್ಯೋತ್ಸವದ ರಾಯಭಾರಿಯಾಗಿ ಪ್ರಕಾಶ್ ರಾಜ್ ಮತ್ತು ಇನ್ನಿತರ ಸಿನಿಮಾ ರಂಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಈ ಕಾರ್ಯಕ್ರಮಕ್ಕೆ ಜನವರಿ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಚಾಲನೆಯನ್ನು ನೀಡಿದ್ದರು. ಇಲ್ಲಿ ಪ್ರಶಸ್ತಿ ಗೆದ್ದವರಿಗೆ ಡಿಕೆ ಶಿವಕುಮಾರ್ ಅವರು ಪ್ರಶಸ್ತಿ ಪ್ರಧಾನ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರಿನ ರಾಜಾಜಿನಗರದ ಲುಲುಮಾಲ್ ನಲ್ಲಿರುವ ಸಿನೆಪೊಲಿಸ್ ಸ್ಕ್ರೀನ್ಗಳಲ್ಲಿ ಸಿನಿಮಾಗಳ ಪ್ರದರ್ಶನಗಳು ನಡೆದವು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಿತ್ರೋತ್ಸವದ ರಾಯಭಾರಿ ಬಹುಭಾಷ ನಟ ಪ್ರಕಾಶ್ ರಾಜ್ ಅವರು ಮತ್ತು ರುಕ್ಮಿಣಿ ವಸಂತ ಅವರು ಮತ್ತು ಕನ್ನಡ ಚಿತ್ರರಂಗದ ಹಲವು ಗಣ್ಯರು ಹಾಗೂ ದೇಶ ವಿದೇಶದಿಂದ ಅತಿಥಿಗಳು ಆಗಮಿಸಿದ್ದರು.

ಈ ಉತ್ಸವದಲ್ಲಿ ಸಿನೆಪೊಲಿಸ್, ಲಾಲು ಮಾಲ್ ಜೊತೆಗೆ ಕನ್ನಡದ ಚಿತ್ರರಂಗ ಕಲಾವಿದರ ಸಂಘ ಮತ್ತು ಸುಚಿತ್ರಾ ಫಿಲಂ ಸೊಸೈಟಿಯಲ್ಲೂ ಸಿನಿಮಾಗಳ ಸ್ಕ್ರೀನಿಂಗ್ ಇತ್ತು. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅದ್ಭುತ ಚಲನಚಿತ್ರಗಳು 17ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾವೆ. 70 ದೇಶಗಳ ಸುಮಾರು 225 ಅತ್ಯುತ್ತಮ ಚಲನ ಚಿತ್ರಗಳು ಪ್ರದರ್ಶನಗೊಂಡವು .ಈ ಚಿತ್ರೋತ್ಸವದಲ್ಲಿ ಜನ ಜೀವನ ಮತ್ತು ಸಂಸ್ಕೃತಿಯನ್ನು ಮತ್ತು ಪ್ರತಿರೂಪವಾಗಿ ಪ್ರದರ್ಶಿಸಿದವು. ಇದು ಕೇವಲ ಸಿನಿಮಾ ರಂಗಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ.

ಸಮಾಜದ ಎಲ್ಲಾ ಅಡೆತಡೆಗಳು ಅಂಕುಡೊಂಕುಗಳನ್ನು ತಿದ್ದುವ ವಾಸ್ತವ ಸ್ಥಿತಿಯನ್ನು ತಿಳಿಸುವ ಕಾರ್ಯವನ್ನು ಮಾಡಬೇಕು. ಅಸಮಾನತೆ, ಬಡತನ, ದಲಿತರು, ಹಿಂದುಳಿದವರು ,ಸಿರಿತನ, ರೈತರು, ಅಲ್ಪಸಂಖ್ಯಾತರು, ಕಾರ್ಮಿಕರು, ಮಹಿಳೆಯರ ಬಗ್ಗೆ ಚಿತ್ರಗಳನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು. ಕನ್ನಡದ ಮಟ್ಟಿಗೆ ಡಾಕ್ಟರ್ ರಾಜಕುಮಾರ್ ಸಿನಿಮಾಗಳಲ್ಲಿ ಸಮಾಜದ ಅಂಕುಡೊಂಕುಗಳನ್ನು, ವಾಸ್ತವಿಕ ಸ್ಥಿತಿಯನ್ನು ತೋರಿಸುವುದು ಅವರ ಸಿನಿಮಾಗಳಲ್ಲಿ ನೋಡಲು ಸಾಧ್ಯವಿತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.


17ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಹಂಸಲೇಖ ಅವರು, ಕಲೆಗೆ ಸಂಬಂಧಿಸಿದ ಸಮಾರಂಭಕ್ಕೆ ಸಮಾರೋಪ ಇರುವುದಿಲ್ಲ. ಅದು ಆರಂಭ. ಸೃಷ್ಟಿಕಾರ್ಯನಿರತ. ಅದು ಯಾವತ್ತೂ ನಿಲ್ಲುವುದಿಲ್ಲ. ಕೃಷಿಕರು, ಕಾರ್ಮಿಕರು, ಸಿನಿಮಾದವರಿಗೆ ಯಾವುದೇ ವ್ಯತ್ಯಾಸ ಇಲ್ಲ. ಅವರು ತಮಗೆ ಬಂದ ಪ್ರಶಸ್ತಿಗೆ ಖುಷಿಯ ಇನ್ನು ವ್ಯಕ್ತಪಡಿಸಿದರು.

ನನಗೆ ಈ ಪ್ರಶಸ್ತಿ ಸಿಕ್ಕಿದ್ದು ಖುಷಿಯ ವಿಷಯ, ನಾನು ಕನ್ನಡ ನಾಡಿಗೆ ಚಿರಋಣಿಯಾಗಿರಬೇಕು. ಕನ್ನಡದಲ್ಲಿ ಬದುಕಿದ್ದೇವೆ. ಕಲೆ ಎನ್ನುವುದು ಆತ್ಮದ ಮೇವು .ಕಲೆಯ ಮೇವನ್ನು ಆರು ದಶಕಗಳ ಕಾಲ ಮೇದಿರುವೆ. ಇಲ್ಲಿನ ಆಧ್ಯಾತ್ಮಿಕತೆ, ವೈಚಾರಿಕತೆ ನನ್ನನ್ನು ಬೆಳೆಸಿದೆ. “ಉತ್ತರ ಧ್ರುವದಿಂದ ದಕ್ಷಿಣ ಧ್ರುವದವರೆಗೂ” ಎಂಬ ಬೇಂದ್ರೆಯವರ ಮಾತು ಕೇಳಿದರೆ. ‘ಕೆಜಿಎಫ್’ ಮತ್ತು ‘ಕಾಂತಾರ’ ಚಿತ್ರಗಳು ಅದನ್ನು ದಕ್ಷಿಣದಿಂದ ಉತ್ತರದವರೆಗೂ ಎಂದು ಬದಲಾಯಿಸಿದೆ. ಎಂದು ಅವರು ತಮ್ಮ ಮನದಾಳ ಮಾತುಗಳನ್ನು ಹಂಚಿಕೊಂಡರು.


ಇನ್ನಷ್ಟು ಓದಿರಿ:
ಕಾಲವೇ ಉತ್ತರ ಕೊಡುತ್ತದೆ: ಡಿಸಿಎಂ ಡಿಕೆ ಶಿವಕುಮಾರ್
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online