belagvi news :
ಜಮ್ಮು- ಮತ್ತು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಬಾರಿ ಮಳೆ ಭಾನುವಾರವು ಮುಂದುವರೆದಿದ್ದು, ರಾಜ್ಯದ ಹಲವು ಭಾಗಗಳಿಂದ ಪ್ರವಾಹ, ಮೇಘ ಸ್ಪೋಟ ಮತ್ತು ಭೂಕುಸಿತ ಭಾರಿ ಅವಾಂತರ ಸೃಷ್ಟಿಸಿವೆ. ಪೂಂಚ್, ರಜೌರಿ, ಕಿಸ್ತ್ವಾರು ಹಾಗೂ ಉತ್ತರ ಕಾಶ್ಮೀರದ ಬಾಂಡಿಪೋರಾ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ.ಇದುವರೆಗೆ 11 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಭಾರಿ ಪ್ರವಾಹದ ಅಬ್ಬರಕ್ಕೆ 200ಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಹಲವು ರಸ್ತೆಗಳು ಹಾನಿಗೊಳಗಾಗಿದ್ದು, ಸೇತುವೆಗಳು ಮತ್ತು ಸಂಪರ್ಕ ಮಾರ್ಗಗಳು ಮುರಿದು ಅನೇಕ ಗ್ರಾಮಗಳು ಹೊರಜಗತ್ತಿನ ಸಂಪರ್ಕ ಕಳೆದುಕೊಂಡಿವೆ.
ಉತ್ತರ ಕಾಶ್ಮೀರದ ಬಾಂಡಿಪೋರಾ ಜಿಲ್ಲೆಯ ಗುರೇಜ್ ವಲಯದ ದಾವರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಬೀಕರ ಮೇಘಸ್ಫೋಟ ಸಂಭವಿಸಿದೆ.ಇದರ ಪರಿಣಾಮವಾಗಿ ಜಾನುವಾರು ಕೊಟ್ಟಿಗೆಯೊಂದು ಸಂಪೂರ್ಣ ಧ್ವಂಸಗೊಂಡಿದ್ದು, ರಸ್ತೆಯ ಒಂದು ಭಾಗವು ಪ್ರವಾಹದ ನೀರಿಗೆ ಕೊಚ್ಚಿ ಹೋಗಿದೆ.
ರಜೌರಿ ಮತ್ತು ಕಿಸ್ತ್ವಾರ್ ಜಿಲ್ಲೆಗಳಲ್ಲಿ ಮೇಘ ಸ್ಫೋಟದ ಬಳಿಕ ಭೂಕುಸಿತ ಸಂಭವಿಸಿ ಹಲವು ಮನೆಗಳು ಮತ್ತು ಮೂಲ ಸೌಕರ್ಯಗಳಿಗೆ ಹಾನಿಯಾಗಿದೆ. ಸ್ಥಳೀಯ ಆಡಳಿತ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ಪೋಲಿಸ್ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದ್ದು, ಸಿಲುಕಿರುವ ನಿವಾಸಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಬಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಆಡಳಿತ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚಿಸಿದೆ.
ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಮನೆಗಳು ಕುಸಿದು ಬಿದ್ದಿರುವುದರಿಂದ ವ್ಯಾಪಕ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಪೂಂಚ್ ಜಿಲ್ಲೆಯ ಸುರನ್ ಕೋಟ್ ತಹಸಿಲ್ ಪ್ರದೇಶವೇ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಸಾವು ನೋವುಗಳು ಕೂಡ ಇದೇ ಭಾಗದಲ್ಲಿ ಹೆಚ್ಚಾಗಿ ವರದಿಯಾಗಿವೆ. ಬಾರಿ ಮಳೆಯಿಂದ ಹಲವು ಮನೆಗಳು ಕುಸಿದಿದ್ದು, ರಸ್ತೆ ಮತ್ತು ಸೇತುವೆಗಳು ಹಾನಿಗೊಳಗಾಗಿವೆ.
ಇತ್ತ ರಜೌರಿ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಪ್ರವಾಹದ ನೀರು ವಸತಿ ಪ್ರದೇಶಗಳು ಹಾಗೂ ತಗ್ಗು ಪ್ರದೇಶಗಳಿಗೆ ನುಗ್ಗಿದ್ದರಿಂದ ನೂರಾರು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹದ ರಕ್ಷಣಾ ಗೋಡೆಗಳು ಕುಸಿದು ಬಿದ್ದ ಪರಿಣಾಮ ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ರಜೌರಿ ಪಟ್ಟಣದ ನದಿಯೊಂದರಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ ಮತ್ತು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ಸ್ಥಳೀಯ ಆಡಳಿತ ಜಂಟಿಯಾಗಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.
ಹವಮಾನ ಇಲಾಖೆ ಮುಂದಿನ ಹಲವು ದಿನಗಳವರೆಗೆ ಬಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರು ನದಿ ತೀರ, ಗುಡ್ಡ ಪ್ರದೇಶಗಳು ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳಿಗೆ ಸ್ಥಳದಂತೆ ಆಡಳಿತ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಮಧ್ಯದಲ್ಲಿ ಮೊಟಕುಗೊಳಿಸಿ ಜಮ್ಮುವಿಗೆ ಮರಳಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು, ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜಲಜೀವನ ಅಸ್ತವ್ಯಸ್ತವಾಗಿದ್ದು, ರಕ್ಷಣಾ ಕಾರ್ಯಚರಣೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ಸ್ಥಳೀಯ ಆಡಳಿತದ ತಂಡಗಳು ಪರಿಹಾರ ಕಾರ್ಯದಲ್ಲಿ ನಿರತರಾಗಿವೆ.
ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕೇಂದ್ರದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪರಿಹಾರ ವಿತರಣೆ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಸಂತ್ರಸ್ತರಿಗೆ ತ್ವರಿತ ನೆರವು ತಲುಪಿಸುವುದು ಹಾಗೂ ನಾಪತ್ತೆಯಾದವರ ಶೋಧ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಹವಾಮಾನ ಇಲಾಖೆ ಇನ್ನೂ ಬಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕೆಂದು ಆಡಳಿತ ಮನವಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿದೆಯಿಂದ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಒಮನ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಅರ್ಧಕ್ಕೆ ಮುಟುಕುಗೊಳಿಸಿ ಜಮ್ಮುವಿಗೆ ಮರಳಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಅವರು ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರವಾಹದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ದಕ್ಷಿಣ ಹಾಗೂ ಪರಿಹಾರ ಕಾರ್ಯಾಚರಣೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಾಪತ್ತೆಯಾದವರ ಶೋಧ, ಸಂತ್ರಸ್ತರ ಸ್ಥಳಾಂತರ ಮತ್ತು ಅಗತ್ಯ ನೆರವು ಒದಗಿಸಲು ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ.
ಇದೇ ವೇಳೆ ಕೇಂದ್ರ ಸಚಿವ ಅಮಿತ್ ಶಾ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಕ್ಷಣೆ, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ತ್ವರಿತ ನೆರವು ತಲುಪಿಸಲು ಕ್ರಮ ಕೈಗೊಂಡಿವೆ.
ಈ ನಡುವೆ ಭಾರತೀಯ ಹವಾಮಾನ ಇಲಾಖೆ ಜುಲೈ 23ರ ವರೆಗೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ಪ್ರವಾಹ, ಭೂಕುಸಿತ ಹಾಗೂ ಮೇಘ ಸ್ಫೋಟದ ಅಪಾಯ ಹೆಚ್ಚು ಸಾಧ್ಯತೆ ಇರುವುದರಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಇರಿಸಲಾಗಿದೆ.
ಆಡಳಿತವು ನದಿ ತೀರ,ತಗ್ಗು ಪ್ರದೇಶಗಳು ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ. ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಲಾಗಿದ್ದು, ಪ್ರವಾಹ ಪಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ರಕ್ಷಣೆಗೆ ನಿರಂತರವಾಗಿ ಮುಂದುವರೆದಿದೆ.