Belagavi news:
19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳ ಸುಳಿವು ಸಿಕ್ಕಿದೆ. ಕಳೆದ ಎರಡು ವರ್ಷಗಳಿಂದ ಭಾರತ ಟಿ ಟ್ವೆಂಟಿ ತಂಡವನ್ನು ಮುನ್ನಡೆಸುತ್ತಿರುವ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಸಾಧ್ಯತೆಗಳ ಬಗ್ಗೆ ವರದಿಗಳು ಹರಿದಾಡುತ್ತಿವೆ.
ಈ ನಡುವೆ ಹೊಸ ಟಿ ಟ್ವೆಂಟಿ ನಾಯಕ ಯಾರು ಎನ್ನುವ ಚರ್ಚಿ ಜೋರಾಗಿದ್ದು, ಶ್ರೇಯಸ್ ಐಯರ್ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಆದರೆ ಇದೀಗ ಆ ಪಟ್ಟಿಗೆ ಸಂಜು ಸ್ಯಾಮ್ಸನ್ ಕೂಡ ಸೇರ್ಪಡೆಯಾಗಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.
ಈ ವರ್ಷದ ಆರಂಭದಲ್ಲಿ ಟೀಮ್ ಇಂಡಿಯಾ ಟಿ 20 ವಿಶ್ವಕಪ್ ಜೈಸಿದ ಬಳಿಕ ಇನ್ನೂ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಇದೀಗ ಜೂನ್ ಅಂತ್ಯದಲ್ಲಿ ಐರ್ಲೆಂಡ್ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟಿ ಟ್ವೆಂಟಿ ಸರಣಿಯೊಂದಿಗೆ ಹೊಸ ಸೀಸನ್ ಆರಂಭವಾಗಲಿದೆ.
ಐಪಿಎಲ್ ಪ್ರದರ್ಶನದ ಆಧಾರದ ಮೇಲೆ ಆಯ್ಕೆ ಸಮಿತಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ಹೊಸ ನಾಯಕತ್ವದ ಕುರಿತ ಅಂತಿಮ ತೀರ್ಮಾನ ಐಪಿಎಲ್ ಬಳಿಕ ನಡೆಯಲಿರುವ ಸಭೆಯಲ್ಲಿ ಹೊರಬೀಳಬಹುದು ಎಂದು ವರದಿಗಳು ತಿಳಿಸಿವೆ.
ಸಂಜು ಸ್ಯಾಮ್ಸನ್ ಅವರ ಸ್ಥಿರ ಪ್ರದರ್ಶನ, ಶಾಂತ ನಾಯಕತ್ವ ಹಾಗೂ ಯುವ ಆಟಗಾರರೊಂದಿಗೆ ಹೊಂದಾಣಿಕೆ ಅವರನ್ನು ಬಲವಾದ ಅಭ್ಯರ್ಥಿಯನ್ನಾಗಿ ಮಾಡಿದೆ. ಇನ್ನೊಂದೆಡೆ ಶ್ರೇಯಸ್ ಅಯ್ಯರ್ ಕೂಡ ನಾಯಕತ್ವ ಅನುಭವದ ಆಧಾರದಲ್ಲಿ ರೇಸ್ ನಲ್ಲಿ ಮುಂದಿದ್ದಾರೆ. ಈ ಬೆಳವಣಿಗೆಗಳಿಂದ ಟೀಮ್ ಇಂಡಿಯಾದ ಟಿ20 ಭವಿಷ್ಯದ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ.
ಭಾರತೀಯ ಕ್ರಿಕೆಟ್ ನಲ್ಲಿ ಸಿಕ್ಕಿದ್ದು, ಸಂಜು ಸ್ಯಾಮ್ಸನ್ ಅವರನ್ನು ಟೀಮ್ ಇಂಡಿಯಾದ ಹೊಸ ಟಿ 20 ನಾಯಕನಾಗಿ ಘೋಷಿಸುವ ಸಾಧ್ಯತೆಗಳ ಬಗ್ಗೆ ವರದಿಗಳು ಹರಿದಾಡುತ್ತಿವೆ. 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.
ವರದಿಗಳ ಪ್ರಕಾರ, ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಸಂಜು ಸ್ಯಾಮ್ಸನ್ ಆಡಿದ ನಿರ್ಣಾಯಕ ಇನ್ನಿಂಗ್ಸ್ , ಐಪಿಎಲ್ ನಲ್ಲಿ ಅವರ ಅದ್ಭುತ ಪ್ರದರ್ಶನ ಹಾಗೂ ನಾಯಕತ್ವ ಅನುಭವ ಆಯ್ಕೆದಾರರ ಗಮನ ಸೆಳೆದಿದೆ. ವಿಶೇಷವಾಗಿ ರಾಜಸ್ಥಾನ ಪ್ರಾಂಚೈಸಿಯನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಅವರನ್ನು ಬಲವಾದ ಅಭ್ಯರ್ಥಿಯನ್ನಾಗಿ ಮಾಡಿದೆ.
ಐಪಿಎಲ್ ಋತುವಿನಲ್ಲಿ ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೆ 10 ಪಂದ್ಯಗಳಲ್ಲಿ 42 ರನ್ ಗಳಿಸಿರುವ ಅವರು ಎರಡು ಶತಕ ಮತ್ತು ಒಂದು ಅರ್ಧಶತ ಬಾರಿಸಿ ಮಿಂಚಿಸಿದ್ದಾರೆ. ಅವರ ಸದತ ಪ್ರದರ್ಶನ ಟೀಮ್ ಇಂಡಿಯಾ ನಾಯಕತ್ವದ ರೇಸ್ ನಲ್ಲಿ ಅವರನ್ನು ಮುಂಚೂಣಿಗೆ ತಳ್ಳಿದೆ.
ಇನ್ನೊಂದೆಡೆ, ಶ್ರೇಯಸ್ ಅಯ್ಯರ್ ಕೂಡ ನಾಯಕತ್ವದ ಪ್ರಮುಖ ಅಭ್ಯರ್ಥಿಯಾಗಿ ಪರಿಗಣಿಸಲ್ಪಟ್ಟಿದ್ದರು, ಟಿ ಟ್ವೆಂಟಿ ತಂಡದಿಂದ ದೀರ್ಘಕಾಲ ಹೊರಗಿರುವುದು ಅವರಿಗೆ ಹಿನ್ನಡೆಯಾಗಬಹುದು ಎಂದು ವರದಿಗಳು ಸೂಚಿಸಿವೆ. ಐಪಿಎಲ್ ನಲ್ಲಿ ನಾಯಕ ಹಾಗೂ ಆಟಗಾರನಾಗಿ ಯಶಸ್ಸು ಸಾಧಿಸಿದ್ದರು, ಟಿ ಟ್ವೆಂಟಿ ಸೆಟಪ್ ಗೆ ಮರಳಲು ಇನ್ನಷ್ಟು ಸಮಯ ಬೇಕಾಗಬಹುದು ಎನ್ನಲಾಗುತ್ತಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆ, ಪ್ರಸ್ತುತ ಟಿ 20 ನಾಯಕ ಸೂರ್ಯಕುಮಾರ್ ಯಾದವ್ ಅವರ ಭವಿಷ್ಯದ ಕುರಿತು ಚರ್ಚೆಗಳು ಜೋರಾಗಿವೆ. ಜೂನ್ ಅಂತ್ಯದಲ್ಲಿ ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮುನ್ನ ಟೀಮ್ ಇಂಡಿಯಾದ ಹೊಸ ನಾಯಕತ್ವದ ಚಿತ್ರ ಸ್ಪಷ್ಟವಾಗುವ ಸಾಧ್ಯತೆ ಇದೆ.
ಹಾಗೂ ಭಾರತ ಟಿ20 ತಂಡದ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಸಾಧ್ಯತೆಗಳು ಜೋರಾಗಿದ್ದು, 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಹೊಸ ನಾಯಕನ ಘೋಷಣೆ ನಡೆಯುವ ಸಾಧ್ಯತೆ ಇದೆ. ಈ ನಡುವೆ ಸಂಜು ಸ್ಯಾಮ್ಸನ್ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಆಯ್ಕೆ ದಾರರ ಒಲವು ಅವರತ್ತ ಹೆಚ್ಚುತ್ತಿದೆ ಎನ್ನಲಾಗುತ್ತಿದೆ.
ವರದಿಗಳ ಪ್ರಕಾರ, ಶ್ರೇಯಸ್ ಅಯ್ಯರ್ ಕೊನೆಯ ಬಾರಿಗೆ ಡಿಸೆಂಬರ್ 2023ರಲ್ಲಿ ಭಾರತ ಪರಾ ಟಿ ಟ್ವೆಂಟಿ ಅಂತರಾಷ್ಟ್ರೀಯ ಪಂದ್ಯ ಆಡಿದ್ದರು. ದೀರ್ಘಕಾಲ ಟಿ 20 ತಂಡದಿಂದ ಕಾರಣ, ಅವರನ್ನು ಮತ್ತೆ ತಂಡಕ್ಕೆ ಕರೆದರೆ ತಕ್ಷಣ ನಾಯಕತ್ವ ವಹಿಸುವುದು ಕಷ್ಟಕರ ಎಂದು ಆಯ್ಕೆದಾರರು ಪರಿಗಣಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ಪ್ರಸ್ತುತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಇನ್ನೂ ಒಂದು ಅವಕಾಶ ಸಿಗುವ ಸಾಧ್ಯತೆ ಇದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ ಆ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡಲು ವಿಫಲವಾದರೆ ಅವರನ್ನು ನಾಯಕತ್ವದಿಂದ ಮಾತ್ರವಲ್ಲ, ತಂಡದಿಂದಲೇ ಕೈಬಿಡುವ ವಿಚಾರವನ್ನು ಆಯ್ಕೆದಾರರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾದ ಹೊಸ ಟಿ20 ನಾಯಕನಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಐಪಿಎಲ್ ನಲ್ಲಿ ಅವರ ಸತತ ಉತ್ತಮ ಪ್ರದರ್ಶನ, ಶಾಂತ ನಾಯಕತ್ವ ಹಾಗೂ ತಂಡವನ್ನು ಮುನ್ನಡೆಸಿದ ಅನುಭವ ಅವರನ್ನು ಬಲಿಷ್ಠ ಅಭ್ಯರ್ಥಿಯನ್ನಾಗಿ ಮಾಡಿದೆ.
ಒಟ್ಟಾರೆ, ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ ಭಾರತ ಟಿ20 ತಂಡದ ಹೊಸ ನಾಯಕನನ್ನು ನೇಮಕ ಮಾಡುವ ಗುರಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಹೊಂದಿದೆ. ಯಾರಿಗೆ ನಾಯಕ ಪಟ್ಟ ಒಲೆಯಲ್ಲಿದೆ ಎಂಬುದರ ಮೇಲೆ ಈಗ ಕ್ರಿಕೆಟ್ ಅಭಿಮಾನಿಗಳ ಕಣ್ಣು ನೆಟ್ಟಿದೆ.
Also Read:
ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ: ಲಕ್ಷಾಂತರ ಅಭಿಮಾನಿಗಳ ಸಂಭ್ರಮಾಚರಣೆ.