<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Education

ಶಾಲಾ ಕಾರ್ಯಕ್ರಮಗಳಿಗೆ ಹೊಸ ನಿಯಮ: ಅಶ್ಲೀಲ ಹಾಡುಗಳಿಗೆ ಸಂಪೂರ್ಣ ನಿಷೇಧ

ಶಾಲಾ ಕಾರ್ಯಕ್ರಮಗಳಿಗೆ ಹೊಸ ನಿಯಮ: ಅಶ್ಲೀಲ ಹಾಡುಗಳಿಗೆ ಸಂಪೂರ್ಣ ನಿಷೇಧ
Summary: A significant decision has been taken to curb obscene and inappropriate songs in school programs. The relevant authorities have indicated that from now on, only specific and approved songs will be allowed in school programs.

BELAGAVI NEWS:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶಾಲಾ ಕಾರ್ಯಕ್ರಮಗಳಲ್ಲಿ ಮಕ್ಕಳು ಅಶ್ಲೀಲ ಅಥವಾ ಅಸಭ್ಯ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿದೆ. ಈ ಕ್ರಮವೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಕೈಗೊಳ್ಳಲಾಗಿದೆ. ಇದರ ಜೊತೆಗೆ ಶಾಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳ ವೇಷ ಭೂಷಣ(Dress) ಆಯ್ಕೆಯಲ್ಲೂ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ. ಮಕ್ಕಳು ಶಿಸ್ತಿನ ಮತ್ತು ಸೌಮ್ಯವಾದ ಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಇಲಾಖೆಯು ಸ್ಪಷ್ಟವಾಗಿ ಹೇಳಿದೆ.

ಬೆಂಗಳೂರು ಏಪ್ರಿಲ್ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು ಎಲ್ಲಾ ಶಾಲೆಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಇದಲ್ಲದೆ ಈ ನಿಯಮವನ್ನು ಉಲ್ಲಂಘಿಸಿದರೆ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ ವಿಶೇಷವಾಗಿ ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ನಿರ್ವಹಣೆ ಮಂಡಳಿಯವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಂಬ ಎಚ್ಚರಿಕೆ ನೀಡಲಾಗಿದೆ.

ಯಾವೆಲ್ಲ ಹಾಡುಗಳಿಗೆ ಅವಕಾಶ?

Sponsored

ದೇಶಭಕ್ತಿ ಪ್ರೇರಣಾದಾಯಕ ಹಾಗೂ ಸಕಾರಾತ್ಮಕ ಸಂದೇಶ ಹೊಂದಿರುವ ಹಾಡುಗಳನ್ನು ಮಕ್ಕಳನ್ನು ನೃತ್ಯಕ್ಕೆ ಬಳಸಿಕೊಳ್ಳಬೇಕು. ಕನ್ನಡ ಮತ್ತು ಸಾಂಸ್ಕೃತಿ ಮೌಲ್ಯಗಳನ್ನು ಉತ್ತೇಜಿಸುವ ಗೀತೆಗಳು ಆದ್ಯತೆ ನೀಡಬೇಕು. ಮಕ್ಕಳಿಗೆ ಅನರ್ಹವಾಗಿರುವ ಅಶ್ಲೀಲ ಪದಗಳಿರುವ ಹಾಡುಗಳಿಗೆ ನೃತ್ಯ ಮಾಡುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಡುಗಳ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯ ಶಿಕ್ಷಕರು ಸ್ವತಃ ಮುತುವರ್ಜಿವಹಿಸ ಬೇಕೆಂದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇದು ಮಕ್ಕಳ ತಪ್ಪಲ್ಲ, ಶಿಕ್ಷಕರು ಹಾಡಿನ ವಿಷಯವನ್ನು ಪರಿಶೀಲಿಸಿ ನಂತರವೇ ಅನುಮತಿ ನೀಡಬೇಕು ಎಂದು ಇಲಾಖೆಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ಬೆಂಗಳೂರಿನ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಈ ಸುತ್ತೋಲೆ ಹೊರಡಿಸಲಾಗಿದೆ. ಇದರ ಭಾಗವಾಗಿ ಮಧ್ಯಪಾನ ಧೂಮಪಾನ ಸೇರಿದಂತೆ ಅಸ್ವಸ್ಥಕರ ಅಭ್ಯಾಸಗಳನ್ನು ಪ್ರೋತ್ಸಾಹಿಸುವ ಹಾಡುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದಲ್ಲದೆ ವೇಷ ಭೂಷಣ ಆಯ್ಕೆಯಲು ಶಿಕ್ಷಕರು ವಿಶೇಷ ಗಮನಹರಿಸಬೇಕು ಎಂದು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಶಿಸ್ತಿನ ಹಾಗೂ ಸಂಯಮಿತ ಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ನೋಡಿಕೊಳ್ಳುವುದು ಅಗತ್ಯವೆಂದು ತಿಳಿಸಲಾಗಿದೆ ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮತ್ತು ಸಂಸ್ಕೃತಿಕ ಮೌಲ್ಯಗಳನ್ನು ಕಾಪಾಡುವ ಉದ್ದೇಶ ಹೊಂದಲಾಗಿದೆ.

ಕೆಲವು ಕಾರ್ತಿ ಶಾಲೆಗಳು ಈಗಾಗಲೇ ಈ ಹೊಸ ನಿಯಮವನ್ನು ಅನುಸರಿಸಲು ಆರಂಭಿಸಿವೆ. ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಚಿತ್ರಗೀತೆಗಳನ್ನು ಬಳಸುವುದನ್ನು ತಪ್ಪಿಸಿ ವಿದ್ಯಾರ್ಥಿಗಳ ವಯಸ್ಸಿಗೆ ತಕ್ಕಂತೆ ಶೈಷಣಿಕ ಹಾಗೂ ಮೌಲ್ಯಧಾರಿತ ವಿಷಯಗಳನ್ನು ಆಯ್ಕೆ ಮಾಡಲಾಗುತ್ತಿದೆ.

Sponsored

ಪ್ರತಿ ವರ್ಷ ವಿಭಿನ್ನ ಥೀಮ್ ಗಳನ್ನು ಆಯ್ಕೆ ಮಾಡಲಾಗುತ್ತಿದ್ದು ಚಿಕ್ಕ ಮಕ್ಕಳಿಗೆ ಹೂವು, ಪ್ರಾಣಿ, ಸಂಗೀತ ಇತ್ಯಾದಿ ಸರಳ ಮತ್ತು ಸೃಜನಶೀಲ ವಿಷಯಗಳ ಗೀತೆಗಳನ್ನು ಬಳಸಲಾಗುತ್ತಿದೆ. ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಇತಿಹಾಸ ಹಾಗೂ ಜನಪದ ಗೀತೆಗಳ ಮೇಲೆ ಆಧಾರಿತ ನೃತ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಬಗ್ಗೆ ನಗರದ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ಹೇಳಿದಂತೆ ಇಂತಹ ವಿಷಯ ದಾರಿತ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

Also Read:

ದೇವಕಿ ಯಶೋದೆಯ ಉಪಮೇಯಲ್ಲಿ ಸುಧಾ ಮೂರ್ತಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online