<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಸ್ವಚ್ಛ ಭಾರತಕ್ಕೆ ಹೊಸ ಹೆಜ್ಜೆ : ಪಶ್ಚಿಮ ಬಂಗಾಳದಲ್ಲಿ ಕಸ ಎಸೆಯುವವರಿಗೆ ಕಠಿಣ ಶಿಕ್ಷೆ

ಸ್ವಚ್ಛ ಭಾರತಕ್ಕೆ ಹೊಸ ಹೆಜ್ಜೆ : ಪಶ್ಚಿಮ ಬಂಗಾಳದಲ್ಲಿ ಕಸ ಎಸೆಯುವವರಿಗೆ ಕಠಿಣ ಶಿಕ್ಷೆ
Summary: A new cleanliness rule will come into effect in West Bengal from September 1. The government has said that anyone found littering or spitting in public places will be fined heavily. This strict measure has been taken to maintain cleanliness.

Belagavi News:

ಪಶ್ಚಿಮ ಬಂಗಾಳ ಸರ್ಕಾರವು ಸಾರ್ವಜನಿಕ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಹೊಸ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ಹೊಸ ನಿಯಮಗಳು ಸೆಪ್ಟೆಂಬರ್ 1 ರಿಂದ ರಾಜ್ಯದ್ಯಂತ ಜಾರಿಗೆ ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಮಾಡಿದರೆ ಭಾರಿ ದಂಡ ವಿಧಿಸಲಾಗುತ್ತದೆ.

ರಸ್ತೆ,ಬಸ್ ನಿಲ್ದಾಣ, ಪಾರ್ಕ್, ಮಾರುಕಟ್ಟೆ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಶುಚಿತ್ವ ಸ್ಪಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಸರ್ಕಾರದ ಪ್ರಕಾರ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ನಗರೀಕರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಸದ ಸಮಸ್ಯೆ ತೀವ್ರವಾಗಿದೆ. ಇದನ್ನು ನಿಯಂತ್ರಿಸಿ ಹಾಗೂ ಜನರಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಈ "ಸ್ವಚ್ಛತಾ ಕ್ರಾಂತಿ" ಕೈಗೊಳ್ಳಲಾಗಿದೆ.

Sponsored

ಸ್ಥಳೀಯ ಸಂಸ್ಥೆಗಳು ಹಾಗೂ ಮುನಿಸಿಪಾಲಿಟಿಗಳಗೆ ನಿಯಮ ಉಲ್ಲಂಘಿಸುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಸಿಸಿಟಿವಿ ಮೇಲ್ವಿಚಾರಣೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ಹೊಸ ನಿಯಮದಿಂದ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸ್ವಚ್ಛತೆ ಮಟ್ಟ ಹೆಚ್ಚಳವಾಗುವ ನೀರಿಕ್ಷೆ ವ್ಯಕ್ತವಾಗಿದ್ದು, ದೇಶದ ಸ್ವಚ್ಛ ಭಾರತ ಅಭಿಯಾನಕ್ಕೂ ಇದು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ದಂಡದ ಪ್ರಮಾಣ ಮತ್ತು ಜಾರಿಗೆ ಸಂಬಂಧಿಸಿದ ವಿವರಗಳ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ಮುಂದುವರೆದಿದೆ.

ಒಟ್ಟಿನಲ್ಲಿ, ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿರುವ ಈ ನಿಯಮ ಪಶ್ಚಿಮ ಬಂಗಾಳದ ಸ್ವಚ್ಛತಾ ಅಭಿಯಾನದಲ್ಲಿ ಮಹತ್ವದ ತಿರುವು ತರಲಿದೆ.

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ : ಸೆಪ್ಟೆಂಬರ್ 1 ರಿಂದ ಕಸ ಎಸೆದರೆ, ಉಗುಳಿದರೆ 5,000 ರೂ. ವರೆಗೆ ಭಾರಿ ದಂಡ:

Sponsored

ಪಶ್ಚಿಮ ಬಂಗಾಳ ಸರ್ಕಾರವು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹಾಗೂ ಕಠಿಣ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಹಾಗೂ ಉಗುಳುವ ಅಭ್ಯಾಸಕ್ಕೆ ಸಂಪೂರ್ಣ ಬ್ರೇಕ್ ಹಾಕಲು ಸೆಪ್ಟೆಂಬರ್ ಒಂದರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ.

ಈ ಹೊಸ ನಿಯಮಗಳ ಪ್ರಕಾರ, ಪುರಸಭೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಶುಚಿತ್ವ ಸ್ಸಷ್ಟಸುವವರಿಗೆ 100 ರೂ. ನಿಂದ 5,000 ರೂ. ವರೆಗೆ ಭಾರಿ ದಂಡ ವಿಧಿಸಲಾಗುವುದು. ರಸ್ತೆ, ಪಾರ್ಕ್,ಬಸ್ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಅನ್ವಯವಾಗಲಿದೆ.

ಸರ್ಕಾರದ ಪ್ರಕಾರ, ಅಗಸ್ಟ್ ವರೆಗೆ ಮೂರು ತಿಂಗಳ ಕಾಲ ವ್ಯಾಪಕ ಜಾಗೃತಿ ಅಭಿಯಾನ ನಡೆಸಲಾಗುವುದು. ಅಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಿದ ನಂತರ ಸೆಪ್ಟೆಂಬರ್ ಒಂದರಿಂದ ಕಠಿಣ ದಂಡ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ನಗರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಸ್ವಚ್ಛ ಮತ್ತು ಸುಂದರವಾಗಿಡುವ ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ ಮತ್ತು ಅಶುಚಿತ್ವವನ್ನು ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

Sponsored

ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತಳಿ ಆಡಳಿತ ಸಂಸ್ಥೆಗಳು ಮತ್ತು ಮುನ್ಸಿಪಾಲಿಟಿ ಗಳಿಗೆ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಸಿಸಿಟಿವಿ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಸಾಧ್ಯತೆಯೂ ಇದೆ.

ರಾಷ್ಟ್ರೀಯ ವಲಯದಲ್ಲಿಯೂ ಈ ನಿರ್ಧಾರ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ನಡುವೆಯೂ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಅದಾಗಿಯೂ, ಸಾರ್ವಜನಿಕ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡಲು ಇದು ಮಹತ್ವದ ಹೆಜ್ಜೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಟ್ಟಿನಲ್ಲಿ, ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿರುವ ನಿಯಮ ಪಶ್ಚಿಮ ಬಂಗಾಳದ ಸ್ವಚ್ಛತಾ ಅಭಿಯಾನಕ್ಕೆ ಹೊಸ ದಿಕ್ಕು ನೀಡಲಿದೆ.

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕಠಿಣ ನಿಯಮಗಳು - ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1 ರಿಂದ ಸ್ಥಳದಲ್ಲೇ ದಂಡ:

Sponsored

ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಶುಚಿತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಎಲ್ಲಿಂದರಲ್ಲಿ ಕಸ ಎಸೆಯುವುದು ಹಾಗೂ ಗುಟ್ಕಾ - ಪಾನ್ ಸೇವಿಸಿ ಗೋಡೆಗಳು, ರಸ್ತೆಗಳಲ್ಲಿ ಉಗುಳುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿದ್ದು, ನಗರಗಳ ಸೌಂದರ್ಯವೂ ಹಾನಿಗೊಳದಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಬರೀ ಜಾಗೃತಿ ಅಭಿಯಾನಗಳನ್ನು ನಡೆಸಿದರೂ ಪರಿಸ್ಥಿತಿ ಸುಧಾರಿಸದ ಕಾರಣ, ಇದೀಗ ದಂಡದ ಮೂಲಕ ನಿಯಂತ್ರಣಕ್ಕೆ ಮುಂದಗಲಾಗಿದೆ. ಸೆಪ್ಟೆಂಬರ್ 1ರಿಂದ ಪಶ್ಚಿಮ ಬಂಗಾಳದಾದ್ಯಂತ ಈ ಹೊಸ ನಿಯಮಗಳು ಕಟ್ಟುನಿಟ್ಟಾಗಿ ಜಾರಿಗೆ ಬರಲಿವೆ.

ಹೊಸ ನಿಯಮಗಳ ಪ್ರಕಾರ, ರಸ್ತೆಗಳು, ಫುಟ್ ಬಾತ್ ಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಹಾಗೂ ಉದ್ಯಾನವನಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಕಂಡು ಬಂದರೆ ಮುನ್ಸಿಪಾಲ್ ಕಾರ್ಪೊರೇಷನ್ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡಲು ಇದು ಮಹತ್ವದ ಕ್ರಮವಾಗಿದೆ ಎಂದು ಸರ್ಕಾರ ಹೇಳಿದೆ.

ಇದೇ ವೇಳೆ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗ ಇಡಲಾಗುವುದು. ನಿಯಮ ಉಲ್ಲಂಘಿಸಿದವರನ್ನು ಗುರುತಿಸಿ ದಂಡದ ನೋಟಿಸ್ ಕಳುಹಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತದೆ.

Sponsored

ಸರ್ಕಾರದ ಪ್ರಕಾರ, ಈ ಕ್ರಮವು ಸಾರ್ವಜನಿಕ ಆರೋಗ್ಯ ರಕ್ಷಣೆಗೂ ಹಾಗೂ ನಗರಗಳ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಲು ಸಹಾಯಕವಾಗಲಿದೆ. ಜನರಲ್ಲಿ ಶಿಸ್ತು ಮತ್ತು ಸ್ವಚ್ಛತಾ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಒಟ್ಟಿನಲ್ಲಿ, ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿರುವ ಈ ಕಠಿಣ ನಿಯಮಗಳು ಪಶ್ಚಿಮ ಬಂಗಾಳದ ಸ್ವಚ್ಛತಾ ಅಭಿಯಾನಕ್ಕೆ ಹೊಸ ದಿಕ್ಕು ನೀಡಲಿವೆ.

ಸೆ. 1ರಿಂದ ಕಸ ಎಸೆದರೆ, ಉಗುಳಿದರೆ ಭಾರಿ ದಂಡ, ಮರುಪರಾಧಕ್ಕೆ ದುಪ್ಪಟ್ಟು ದಂಡ :

ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸ್ವಚ್ಛತೆಯನ್ನು ಕಾಪಾಡಲು ಹೊಸ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಸೆಪ್ಟೆಂಬರ್ 1 ರಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಮಾಡಿದರೆ ಮೊದಲ ಬಾರಿ ನಿಗದಿತ ದಂಡ ವಿಧಿಸಲಾಗುತ್ತದೆ. ಅದೇ ವ್ಯಕ್ತಿ ಮತ್ತೆ ನಿಯಮ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ದುಪ್ಪಟ್ಟುಗೊಳಿಸಲಾಗುತ್ತದೆ.

Sponsored

ಈ ನಿಯಮವನ್ನು ಕಟುನ್ಟಾಗಿ ಜಾರಿಯಗೊಳಿಸಲು ಕೊಲ್ಕತ್ತಾ ಮುನ್ಸಿಪಾಲ್ ಕಾರ್ಪೊರೇಷನ್ ಸೇರಿದಂತೆ ಎಲ್ಲಾ ಮುನ್ಸಿಪಾಲಿಟಿಗಳು ಮತ್ತು ಪಂಚಾಯತ್ ಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ವಾಣಿಜ್ಯ ಪ್ರದೇಶಗಳು, ಮಾರ್ಕೆಟ್ ಗಳು ಹಾಗೂ ಹೋಟೆಲ್ ಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡದ ಮಾಲೀಕರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್ 1 ರಿಂದ ದಂಡ ಪ್ರಕ್ರಿಯೆ ಆರಂಭವಾಗುವ ಮೊದಲು ಆಗಸ್ಟ್ ತಿಂಗಳಾಧ್ಯಂತ ರಾಜ್ಯಾದ್ಯಂತ ಜಾಗೃತಿ ಅಭಯಾನ ನಡೆಸಲಾಗುತ್ತದೆ. ಮೈಕ್ ಪ್ರಚಾರ, ಪೋಸ್ಟರ್ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಹೊಸ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಸರ್ಕಾರದ ಪ್ರಕಾರ, ಈ ಕ್ರಮವು ಸ್ವಚ್ಛ ಭಾರತ ಅಭಿಯಾನದ ಭಾಗವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಶಿಸ್ತು ಕಾಪಾಡುವ ಉದ್ದೇಶ ಹೊಂದಿದೆ.

Also Read:

Sponsored

ಬೆಂಗಳೂರು - ತುಮಕೂರು ಚತುಷ್ಪಥ ಮಾರ್ಗಕ್ಕೆ ಚಾಲನೆ ಶೀಘ್ರ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online