<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಮಾನವ ಸರಪಳಿ ಆಯೋಜನೆಗೆ ಗ್ರೀನ್ ಸಿಗ್ನಲ್ ಇಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ

ಮಾನವ ಸರಪಳಿ ಆಯೋಜನೆಗೆ ಗ್ರೀನ್ ಸಿಗ್ನಲ್ ಇಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ
Summary: Bengaluru City Police has clarified that no permission has been given for the human chain event planned to be organized by the Cockroach Janata Party. The police department has clarified the information circulating on social media and appealed to the public not to listen to rumors.

Balagavi News:

ಬೆಂಗಳೂರು: ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಕಾಕ್ರೋಚ್ ಜನತಾ ಪಾರ್ಟಿ ಮೇ 24ರಂದು ಟೌನ್ ಹಾಲ್ ಆಯೋಜಿಸಲು ಉದ್ದೇಶಿಸಿದ್ದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮಕ್ಕೆ ಹಿನ್ನಲೆಯಾಗಿದೆ. ಬೆಂಗಳೂರು ಸಿಟಿ ಪೊಲೀಸ್ ಈ ಕುರಿತು ಸ್ಪಷ್ಟನೆ ನೀಡಿದ್ದು, ಟೌನ್ ಹಾಲ್ ಬಳಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾನವ ಸರಪಳಿ ನಿರ್ಮಾಣದ ಕುರಿತ ಪೋಸ್ಟ್ಗಳು ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಕಾರ್ಯಕ್ರಮ ಆಯೋಜನೆ ಕುರಿತು ಈವರೆಗೆ ಯಾವುದೇ ಅಧಿಕೃತ ಮನವಿ ಬಂದಿಲ್ಲ. ಒಂದು ವೇಳೆ ಮನವಿ ಸಲ್ಲಿಸಿದರು ಟೌನ್ ಹಾಲ್ ಪ್ರದೇಶದಲ್ಲಿ ಅನುಮತಿ ನೀಡುವುದಿಲ್ಲ ಎಂದು ಪೋಲಿಸ್ ಇಲಾಖೆ ದೃಢಪಡಿಸಿದೆ.

ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಪಕ್ಷದಿಂದ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಅರ್ಜಿ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಡೆ ಧರಣಿ, ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲು ಅವಕಾಶವಿಲ್ಲ ಎಂಬ ಹೈಕೋರ್ಟ್ ಆದೇಶ ವಿರುದರಿಂದ ಟೌನ್ ಹಾಲ್ ಬಳಿ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅನಧಿಕೃತ ಪೋಸ್ಟ್ಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು ಎಂದು ಬೆಂಗಳೂರು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಕಾಕ್ರೋಚ್ ಜನತಾ ಪಾರ್ಟಿಯು ಮೇ 24ರಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಮಾಡಲು ಕರೆ ನೀಡಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿದೆ 'ಕಾಕ್ರೋಚ್ ಜನತಾ ಪಾರ್ಟಿ' ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಪಕ್ಷವನ್ನು Abhijeet Dipke ಸ್ಥಾಪಿಸಿದ್ದು, ಆರಂಭವಾದ ಕೆಲವೇ ದಿನಗಳಲ್ಲಿ ಬಾರಿ ಜನಪ್ರಿಯತೆ ಗಳಿಸಿತ್ತು.

ಪಕ್ಷದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡ ಬಳಿಕ, 'ಕಾಕ್ರೋಚ್ ಜನತಾ ಪಾರ್ಟಿ'ಯ ಎಕ್ಸ್ ಖಾತೆ ಒಂದೇ ವಾರದಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಸೂಚನೆ ಮೇರೆಗೆ ಭಾರತದಲ್ಲಿ ಆ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂಬ ಮಾಹಿತಿ ಹೊರಬಂದಿದೆ.

ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೀಡಿದ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗೆ ಕಾರಣವಾಗಿತ್ತು. ಬೆಳೆ ಯುವಕರನ್ನು 'ಜಿರಳೆ'ಗಳಿಗೆ ಹೋಲಿಸಿದ್ದ ಅವರ ಹೇಳಿಕೆಯ ಬಳಿಕ ಮೀಮ್ಸ್ , ಟ್ರೋಲಿಂಗ್ ಹಾಗೂ ಚರ್ಚೆಗಳು ಜೋರಾಗಿದ್ದವು.

ಈ ವಿವಾದದ ನಡುವೆಯೇ 'ಕಾಕ್ರೋಚ್ ಜನತಾ ಪಾರ್ಟಿ' ಎಂಬ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಟ್ರೆಂಡ್ ಆಗತೊಡೆಗಿತು. ಪ್ರಾರಂಭವಾದ ಕೆಲವೇ ಗಂಟೆಗಳ ಲಕ್ಷಾಂತರ ಮಂದಿ ಫಾಲೋ ಮಾಡಲು ಆರಂಭಿಸಿದ್ದರು. ಇದೀಗ ಇನ್ಸ್ಟಾಗ್ರಾಮ್ ನಲ್ಲಿ 5 ಮಿಲಿಯನ್ ಗಿಂತ ಹೆಚ್ಚು ಫಾಲೋವರ್ಸ್ ಹೊಂದಿದೆ ಎನ್ನಲಾಗಿದ್ದು, ಎಕ್ಸ್ ಖಾತೆಯಲ್ಲೂ ಲಕ್ಷಾಂತರ ಅನುಯಾಯಿಗಳನ್ನು ಪಡೆದುಕೊಂಡಿತ್ತು.

ಪಕ್ಷದ ವೆಬ್ ಸೈಟ್ ನಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡಿದ್ದು ಈ ಮೂಲಕ 'ಕಾಕ್ರೋಚ್ ಜನತಾ ಪಾರ್ಟಿ' ದೇಶದಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು.

Also Read:

Chaand Mera Dil ವಿಮರ್ಶೆ: ಮೋಡನ್ ಲವ್ ಸ್ಟೋರಿ ಮೂಲಕ ಮನಗೆದ ಅನನ್ಯಾ-ಲಕ್ಷ್ಯ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online