belagavai news :
ಬಿ.ವೈ.ವಿಜಯೇಂದ್ರ ಅವರು ತಮ್ಮ ವಿರುದ್ಧ ಕೇಳಿ ಬಂದಿರುವ ರಾಜಕೀಯ ಹಾಗೂ ವ್ಯವಹಾರಿಕ ಸಂಬಂಧಗಳ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಬಂಧದ ಬಗ್ಗೆ ಹರಿದಾಡುತ್ತಿರುವ ಊಹಾ-ಪೋಹಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿತ್ತು ಎಂದು ಹೇಳಲಾಗುತ್ತಿರುವ ಅಡ್ಡ ಮತದಾನ ಹಾಗೂ ಅದರ ಹಿಂದೆ ತಮ್ಮ ಪಾತ್ರವಿದೆ ಎಂಬ ಆರೋಪಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದವು. ಇದೇ ವೇಳೆ, ತಮ್ಮ ಮತ್ತು ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಅಥವಾ ವ್ಯಾವಹಾರಿಕವಾಗಿ ಸಂಬಂಧ ಹೊಂದಿದ್ದಾರೆ, ಇಬ್ಬರು ವ್ಯವಹಾರ ಪಾಲುದಾರರು ಎಂಬ ಮಾತುಗಳು ಹರಿದಾಡಿದ್ದವು.
ಈ ಎಲ್ಲಾ ಆರೋಪಗಳಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, "ನನ್ನ ವಿರುದ್ಧ ಉದ್ದೇಶಪೂರ್ವಕ ಅಪಪ್ರಚಾರ ನಡೆಸಲಾಗುತ್ತಿದೆ. ನನಗೂ ಡಿಕೆ ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ಅಥವಾ ವ್ಯವಹಾರಿಕ ಸಂಬಂಧವಿಲ್ಲ. ಈ ರೀತಿಯ ಆರೋಪಗಳಿಗೆ ಯಾವುದೇ ಆಧಾರವಿಲ್ಲ", ಎಂದು ಸ್ಪಷ್ಟಪಡಿಸಿದರು.
ಅಲ್ಲದೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಸಿರುವ ಆರೋಪವನ್ನು ಅವರು ನಿರಾಕರಿಸಿ, ಬಿಜೆಪಿ ಸಂಘಟನೆ ಬಲಪಡಿಸುವ ಕೆಲಸದಲ್ಲಿ ನಾವು ನಿರತವಾಗಿ ತೊಡಗಿಕೊಂಡಿದ್ದೇವೆ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಅವರೊಂದಿಗೆ ಒಬ್ಬ ಸಂಸದ, 8 ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಕೇವಲ ದರ್ಶನಕ್ಕೆ ಬಂದಿದ್ದೇನೆ; ಅಪಪ್ರಚಾರಕ್ಕೆ ಮಂಜುನಾಥನ ಸನ್ನಿಧಿಯಲ್ಲಿ ಪೂರ್ಣ ವಿರಾಮ : ಬಿ.ವೈ.ವಿಜಯೇಂದ್ರ.
ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಧರ್ಮಸ್ಥಳದ ಸನ್ನಿಧಿ ಗೆಸ್ಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪೂರ್ಣ ವಿರಾಮ ಇಟ್ಟಿದ್ದೇನೆ ಎಂದು ಹೇಳಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿತ್ತು ಎಂದು ಹೇಳಲಾಗುತ್ತಿರುವ ಅಡ್ಡ ಮತದಾನದ ಪ್ರಸಂಗವು ತಮಗೂ ಹಾಗೂ ಬಿಜೆಪಿ ಲಕ್ಷಾಂತರ ಕಾರ್ಯಕರ್ತರಿಗೂ ತೀವ್ರ ಆಘಾತ ಮತ್ತು ನೋವುಂಟು ಮಾಡಿದೆ ಎಂದು ವಿಜಯೇಂದ್ರ ತಿಳಿಸಿದರು.
"ನಾನು ಭಾವನಾತ್ಮಕ ವ್ಯಕ್ತಿಯಾಗಿರುವುದರಿಂದ ಸತ್ಯಾ ಸತ್ಯತೆ ಹೊರಬರಬೇಕು ಎಂಬ ಉದ್ದೇಶದಿಂದ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ಕುರಿತು ಮಾತನಾಡಿದ್ದೆ. ಆದರೆ,ಪಕ್ಷದ ಹಿರಿಯ ನಾಯಕರು ಈ ವಿಚಾರವನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳೋಣ ಎಂದು ಸಲಹೆ ನೀಡಿದರು. ಅವರ ಸೂಚನೆಗೆ ಗೌರವ ನೀಡಿ ಆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ನಾನು ಇಲ್ಲಿಗೆ ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಬಂದಿಲ್ಲ; ಕೇವಲ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಬಂದಿದ್ದೇನೆ," ಎಂದು ಅವರು ಸ್ಪಷ್ಟಪಡಿಸಿದರು.
ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳು ಮತ್ತು ಊಹಾಪೋಹಗಳಿಗೆ ಯಾವುದೇ ಆಧಾರವಿಲ್ಲ ಎಂದು ಪುನರುಚ್ಚರಿಸಿದ ವಿಜಯೇಂದ್ರ,ಸತ್ಯ ಅಂತಿಮವಾಗಿ ಹೊರಬೀಳಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ, ಆರೋಪಗಳಲ್ಲ ಸುಳ್ಳು : ಬಿವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ವಿರುದ್ಧ ಕೇಳಿ ಬರುತ್ತಿರುವ ರಾಜಕೀಯ ಹಾಗೂ ವ್ಯಾವಹಾರಿಕ ಸಂಬಂಧಗಳ ಆರೋಪಗಳನ್ನು ಮತ್ತೊಮ್ಮೆ ತಳ್ಳಿ ಹಾಕಿದ್ದಾರೆ.
ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನನಗೂ ಮತ್ತು ಡಿಕೆ ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧವಿಲ್ಲ.ಮುಖ್ಯಮಂತ್ರಿ ಪರವಾಗಿ ನಾನೇ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಸಹಕಾರ ನೀಡಿದ್ದೇನೆ ಎಂಬ ಆರೋಪದ ಮೂಲಕ ನನ್ನ ವಿರುದ್ಧ ಉದ್ದೇಶಪೂರ್ವಕ ಅಪಪ್ರಚಾರ ಮಾಡಲಾಗಿದೆ," ಎಂದು ಹೇಳಿದರು.
"ನಾನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ, ಈ ಆರೋಪಗಳೆಲ್ಲವೂ ಸಂಪೂರ್ಣ ಸುಳ್ಳು ಇದರಲ್ಲಿ ಯಾವುದೇ ಸತ್ಯ ಅಂಶವಿಲ್ಲ', ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಇದೇ ವೇಳೆ, "ಡಿಕೆ ಶಿವಕುಮಾರ್ ಅವರು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದರು ಮತ್ತು ಈಗ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಆ ಹುದ್ದೆಗೆ ನೀಡಬೇಕಾದ ಗೌರವವನ್ನು ಅಷ್ಟೇ ನಾನು ನೀಡುತ್ತಿದ್ದೇನೆ. ಅದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಸರಿಯಲ್ಲ," ಎಂದರು.
ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನನ್ನ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದವರಿಗೂ ಶ್ರೀ ಮಂಜುನಾಥ ಸ್ವಾಮಿ ಒಳ್ಳೆಯದನ್ನು ಮಾಡಲಿ," ಎಂದು ಮಾರ್ಮಿಕವಾಗಿ ಹೇಳಿದರು.
Also Read: